Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಆದಿಕಾಂಡ 1:26

ಬೈಬಲ್ ವಚನ · IRV

ಆದಿಕಾಂಡ 1:26

ಆಮೇಲೆ ದೇವರು, ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟು ಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ, ಪ್ರಾಣಿಗಳ ಮೇಲೆಯೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಕೀಟಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ದೊರೆತನಮಾಡಲಿ ಅಂದನು.

ಇಡೀ ಅಧ್ಯಾಯ ಓದಿ: ಆದಿಕಾಂಡ 1

ಸಂದರ್ಭದಲ್ಲಿ

23ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಐದನೆಯ ದಿನವಾಯಿತು.

24ಬಳಿಕ ದೇವರು, “ಭೂಮಿಯಿಂದ ಜೀವಜಂತುಗಳು ಉಂಟಾಗಲಿ; ಪಶು, ಕ್ರಿಮಿಗಳೂ ಕಾಡುಮೃಗಗಳು, ತಮ್ಮ ತಮ್ಮ ಜಾತಿಗನುಸಾರವಾಗಿ ಹುಟ್ಟಲಿ” ಅಂದನು. ಹಾಗೆಯೇ ಆಯಿತು.

25ದೇವರು ಕಾಡುಮೃಗಗಳನ್ನೂ, ಪಶುಗಳನ್ನೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು.

26ಆಮೇಲೆ ದೇವರು, ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟು ಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ, ಪ್ರಾಣಿಗಳ ಮೇಲೆಯೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಕೀಟಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ದೊರೆತನಮಾಡಲಿ ಅಂದನು.

27ಹೀಗೆ ದೇವರು; “ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದನು. ದೇವರ ಸ್ವರೂಪದಲ್ಲಿ ಅವನನ್ನು ಉಂಟುಮಾಡಿದನು. ಅವರನ್ನು ಗಂಡುಹೆಣ್ಣಾಗಿ ಸೃಷ್ಟಿ ಮಾಡಿದನು.”

28ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ, “ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿರಿ. ಭೂಮಿಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನ ಮಾಡಿರಿ” ಎಂದು ಅವರಿಗೆ ಹೇಳಿದನು.

29ಅಲ್ಲದೆ ದೇವರು, “ಇಗೋ, ಸಮಸ್ತ ಭೂಮಿಯ ಮೇಲಿರುವ ಬೀಜವುಳ್ಳ ಎಲ್ಲಾ ಪೈರುಗಳನ್ನೂ, ಬೀಜವುಳ್ಳ ಎಲ್ಲಾ ಹಣ್ಣಿನ ಮರಗಳನ್ನೂ ನಿಮಗೆ ಆಹಾರಕ್ಕಾಗಿ ಕೊಟ್ಟಿದ್ದೇನೆ

ಆದಿಕಾಂಡ 1

ಇಂಗ್ಲಿಷ್‌ನಲ್ಲಿ

Berean Standard BibleGenesis 1:26Then God said, “Let Us make man in Our image, after Our likeness, to rule over the fish of the sea and the birds of the air, over the livestock, and over all the earth itself and every creature that crawls upon it.”

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಕೊಲೊ 3:10ಈ ನೂತನ ಸ್ವಭಾವವು ಸೃಷ್ಟಿಸಿದಾತನ ಹೋಲಿಕೆಯ ಜ್ಞಾನದ ಮೇರೆಗೆ ಅದು ನೂತನವಾಗುತ್ತಾ ಬರುತ್ತದೆ.
ಎಫೆ 4:24ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯಕ್ಕನುಗುಣವಾಗಿ ನೀತಿಯುಳ್ಳದ್ದಾಗಿಯೂ, ಪರಿಶುದ್ಧತೆಯುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ.
ಕೀರ್ತ 8:4–8ಮನುಷ್ಯನು ಎಷ್ಟು ಮಾತ್ರದವನು, ಅವನನ್ನು ನೀನು ಏಕೆ ಸ್ಮರಿಸಬೇಕು? ಮಾನವನು ಎಷ್ಟರವನು? ಅವನಲ್ಲಿ ಏಕೆ ಲಕ್ಷ್ಯವಿಡಬೇಕು? ಅವನನ್ನು ದೇವರಿಗಿಂತ ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿ ಮಾಡಿದಿಯಲ್ಲಾ; ಪ್ರಭಾವವನ್ನೂ ಮತ್ತು ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದಿ. ನೀನು ಸೃಷ್ಟಿಸಿದ ಎಲ್ಲಾ ವಸ್ತುಗಳ ಮೇಲೆ ಪ್ರಭುತ್ವವನ್ನು ಅವನಿಗೆ ಅನುಗ್ರಹಿಸಿದಿ. ನೀನು ಎಲ್ಲಾ ಕುರಿ, ದನಗಳನ್ನು ಮಾತ್ರವೇ ಅಲ್ಲದೆ ಕಾಡುಮೃಗಗಳು, ಆಕಾಶದ ಪಕ್ಷಿಗಳು, ಸಮುದ್ರದ ಮೀನುಗಳು, ಅದರಲ್ಲಿ ಸಂಚರಿಸುವ ಸಕಲವಿಧವಾದ ಜೀವಜಂತುಗಳು, ಇವೆಲ್ಲವನ್ನೂ ಅವನಿಗೆ ಅಧೀನಮಾಡಿದ್ದೀಯಲ್ಲವೇ.
ಆದಿ 3:22ಯೆಹೋವ ದೇವರು “ಈ ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ? ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತಿಂದು ಶಾಶ್ವತವಾಗಿ ಬದುಕುವವನಾಗಬಾರದು” ಎಂದು ಆಜ್ಞಾಪಿಸಿದನು.
ಆದಿ 5:1ಆದಾಮನ ವಂಶದವರ ದಾಖಲೆ: ದೇವರು ಸೃಷ್ಟಿಕಾಲದಲ್ಲಿ ಮನುಷ್ಯನನ್ನು ತನ್ನ ಹೋಲಿಕೆಗನುಸಾರವಾಗಿ ಸೃಷ್ಟಿ ಮಾಡಿದನು.
ಕೀರ್ತ 100:3ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಉಂಟುಮಾಡಿದವನು ಆತನೇ; ನಾವು ಆತನವರು, ಆತನ ಪ್ರಜೆಯೂ, ಆತನು ಪಾಲಿಸುವ ಹಿಂಡೂ ಆಗಿದ್ದೇವೆ.
2 ಕೊರಿ 3:18ನಾವೆಲ್ಲರೂ ಮುಸುಕು ತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ನಾವೆಲ್ಲರೂ ಕರ್ತನ ದಾನವಾಗಿರುವ ಆತ್ಮದ ಮಹಿಮೆಯಿಂದ ಅಧಿಕ ಮಹಿಮೆಗೆ ಹೋಗುತ್ತಾ, ಆ ಮಹಿಮೆಯ ಸಾರೂಪ್ಯವುಳ್ಳವರೇ ಆಗುತ್ತೇವೆ. ಇದು ಆತ್ಮನಾಗಿರುವ ಕರ್ತನ ಕಾರ್ಯವೇ ಸರಿ.
ಆದಿ 9:2–4ಭೂಮಿಯ ಮೇಲಿರುವ ಎಲ್ಲಾ ಮೃಗಗಳೂ, ಆಕಾಶದ ಎಲ್ಲಾ ಪಕ್ಷಿಗಳೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳೂ, ಸಮುದ್ರದ ಮೀನುಗಳೂ ನಿಮಗೆ ಹೆದರುವವು. ನಾನು ಅವುಗಳನ್ನೆಲ್ಲಾ ನಿಮ್ಮ ಸ್ವಾಧೀನಕ್ಕೆ ಕೊಟ್ಟಿದ್ದೇನೆ. ಭೂಮಿಯ ಮೇಲೆ ಚಲಿಸುವ ಎಲ್ಲಾ ಕ್ರಿಮಿಕೀಟಗಳೂ ನಿಮಗೆ ಆಹಾರವಾಗಿರುವವು. ನಾನು ನಿಮ್ಮ ಆಹಾರಕ್ಕೆ ಹಸಿರುಪಲ್ಯಗಳನ್ನು ನಿಮಗೆ ಕೊಟ್ಟಂತೆ ಇವುಗಳನ್ನೂ ಕೊಟ್ಟಿದ್ದೇನೆ. ಆದರೆ ಮಾಂಸವನ್ನು ಅದರ ಜೀವಸತ್ವವಾದ ರಕ್ತದೊಂದಿಗೆ ನೀವು ತಿನ್ನಬಾರದು. ಏಕೆಂದರೆ ರಕ್ತದಲ್ಲಿ ಜೀವ ಇದೆ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು