ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಆದಿಕಾಂಡ 1:27
ಬೈಬಲ್ ವಚನ · IRV
ಆದಿಕಾಂಡ 1:27
ಹೀಗೆ ದೇವರು; “ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದನು. ದೇವರ ಸ್ವರೂಪದಲ್ಲಿ ಅವನನ್ನು ಉಂಟುಮಾಡಿದನು. ಅವರನ್ನು ಗಂಡುಹೆಣ್ಣಾಗಿ ಸೃಷ್ಟಿ ಮಾಡಿದನು.”
ಸಂದರ್ಭದಲ್ಲಿ
24ಬಳಿಕ ದೇವರು, “ಭೂಮಿಯಿಂದ ಜೀವಜಂತುಗಳು ಉಂಟಾಗಲಿ; ಪಶು, ಕ್ರಿಮಿಗಳೂ ಕಾಡುಮೃಗಗಳು, ತಮ್ಮ ತಮ್ಮ ಜಾತಿಗನುಸಾರವಾಗಿ ಹುಟ್ಟಲಿ” ಅಂದನು. ಹಾಗೆಯೇ ಆಯಿತು.
25ದೇವರು ಕಾಡುಮೃಗಗಳನ್ನೂ, ಪಶುಗಳನ್ನೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು.
26ಆಮೇಲೆ ದೇವರು, ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟು ಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ, ಪ್ರಾಣಿಗಳ ಮೇಲೆಯೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಕೀಟಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ದೊರೆತನಮಾಡಲಿ ಅಂದನು.
27ಹೀಗೆ ದೇವರು; “ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದನು. ದೇವರ ಸ್ವರೂಪದಲ್ಲಿ ಅವನನ್ನು ಉಂಟುಮಾಡಿದನು. ಅವರನ್ನು ಗಂಡುಹೆಣ್ಣಾಗಿ ಸೃಷ್ಟಿ ಮಾಡಿದನು.”
28ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ, “ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿರಿ. ಭೂಮಿಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನ ಮಾಡಿರಿ” ಎಂದು ಅವರಿಗೆ ಹೇಳಿದನು.
29ಅಲ್ಲದೆ ದೇವರು, “ಇಗೋ, ಸಮಸ್ತ ಭೂಮಿಯ ಮೇಲಿರುವ ಬೀಜವುಳ್ಳ ಎಲ್ಲಾ ಪೈರುಗಳನ್ನೂ, ಬೀಜವುಳ್ಳ ಎಲ್ಲಾ ಹಣ್ಣಿನ ಮರಗಳನ್ನೂ ನಿಮಗೆ ಆಹಾರಕ್ಕಾಗಿ ಕೊಟ್ಟಿದ್ದೇನೆ
30ಇದಲ್ಲದೆ ಭೂಮಿಯ ಮೇಲೆ ತಿರುಗಾಡುವ ಮೃಗಗಳು, ಆಕಾಶದಲ್ಲಿ ಹಾರಾಡುವ ಪಕ್ಷಿಗಳು, ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು ಮೊದಲಾದ ಜೀವಿಗಳಿಗೆ ಹಸುರಾದ ಸಸ್ಯಗಳನ್ನೆಲ್ಲಾ ಆಹಾರಕ್ಕಾಗಿ ಕೊಟ್ಟಿದ್ದೇನೆ” ಎಂದು ಹೇಳಿದನು. ಅದು ಹಾಗೆಯೇ ಆಯಿತು.
ಇಂಗ್ಲಿಷ್ನಲ್ಲಿ
So God created man in His own image; in the image of God He created him; male and female He created them.ಹೊಸ ಒಡಂಬಡಿಕೆಯಲ್ಲಿ ಉಲ್ಲೇಖಿತ
ಆತನು ಪ್ರತ್ಯುತ್ತರವಾಗಿ, “ಮನುಷ್ಯರನ್ನು ಉಂಟುಮಾಡಿದವನು ಆದಿಯಿಂದಲೇ ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟುಮಾಡಿದನು,ದೇವರಾದರೋ ಸೃಷ್ಟಿಯ ಮೊದಲಿನಿಂದಲೇ ಮನುಷ್ಯರನ್ನು ಗಂಡುಹೆಣ್ಣಾಗಿ ಉಂಟುಮಾಡಿದನು.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ನಾವಾದರೋ ದೇವರ ಕಲಾಕೃತಿಯಾಗಿದ್ದೇವೆ, ದೇವರು ಮೊದಲೇ ನಮಗಾಗಿ ಸಂಕಲ್ಪಿಸಿದ್ದ ಸತ್ಕಾರ್ಯಗಳನ್ನು ಮಾಡುವವರಾಗಿ ಬದುಕಬೇಕೆಂದು ಯೇಸು ಕ್ರಿಸ್ತನಲ್ಲಿ ಸೃಷ್ಟಿಸಲ್ಪಟ್ಟಿದ್ದೇವೆ.ಆದಾಮನ ವಂಶದವರ ದಾಖಲೆ: ದೇವರು ಸೃಷ್ಟಿಕಾಲದಲ್ಲಿ ಮನುಷ್ಯನನ್ನು ತನ್ನ ಹೋಲಿಕೆಗನುಸಾರವಾಗಿ ಸೃಷ್ಟಿ ಮಾಡಿದನು. ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟು ಮಾಡಿದನು. ಇದಲ್ಲದೆ, ಅವರನ್ನು ಸೃಷ್ಟಿಸಿದ ದಿನದಲ್ಲಿ, ಅವರನ್ನು ಆಶೀರ್ವದಿಸಿ ಅವರಿಗೆ “ಮನುಷ್ಯ” ಎಂದು ಹೆಸರಿಟ್ಟನು.ಹೀಗಿರುವಲ್ಲಿ ಯೆಹೋವನಾದ ದೇವರು ಆ ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿ ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಅದರ ಸ್ಥಳವನ್ನು ಮಾಂಸದಿಂದ ತುಂಬಿದನು. ಯೆಹೋವನು ಮನುಷ್ಯನಿಂದ ತೆಗೆದ ಎಲುಬನ್ನು, ಸ್ತ್ರೀಯನ್ನಾಗಿ ಮಾಡಿ ಆಕೆಯನ್ನು ಅವನ ಬಳಿಗೆ ಕರೆದುಕೊಂಡು ಬಂದನು. ಅವನು ಆಕೆಯನ್ನು ನೋಡಿ, “ಈಗ ಸರಿ, ಈಕೆಯು ನನ್ನ ಎಲುಬುಗಳಿಂದ ಬಂದ ಎಲುಬು, ನನ್ನ ಮಾಂಸದಿಂದ ಬಂದ ಮಾಂಸವೂ ಆಗಿದ್ದಾಳೆ. ಈಕೆಯು ಮನುಷ್ಯನಿಂದ ಉತ್ಪತ್ತಿಯಾದ ಕಾರಣ ನಾರೀ ಎನ್ನಿಸಿಕೊಳ್ಳುವಳು” ಅಂದನು. ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು. ಆ ಮನುಷ್ಯನು ಮತ್ತು ಅವನ ಹೆಂಡತಿ ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯಕ್ಕನುಗುಣವಾಗಿ ನೀತಿಯುಳ್ಳದ್ದಾಗಿಯೂ, ಪರಿಶುದ್ಧತೆಯುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ.ನೀನು ನನ್ನನ್ನು ಅದ್ಭುತವಾಗಿಯೂ, ವಿಚಿತ್ರವಾಗಿಯೂ ರಚಿಸಿದ್ದರಿಂದ, ನಿನ್ನನ್ನು ಕೊಂಡಾಡುತ್ತೇನೆ. ನಿನ್ನ ಕೃತ್ಯಗಳು ಆಶ್ಚರ್ಯವಾಗಿವೆಯೆಂದು, ನನ್ನ ಹೃದಯವು ಚೆನ್ನಾಗಿ ಗ್ರಹಿಸಿಕೊಂಡಿದೆ.ನನ್ನ ಮಹಿಮೆಗಾಗಿ ನಾನು ಸೃಷ್ಟಿಸಿ ರೂಪಿಸಿ ಉಂಟುಮಾಡಿದ ನನ್ನ ಹೆಸರಿನವರೆಲ್ಲರನ್ನೂ ಬರಮಾಡಬೇಕೆಂದು ಅಪ್ಪಣೆಕೊಡುವೆನು.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು