ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಆದಿಕಾಂಡ 1:28
ಬೈಬಲ್ ವಚನ · IRV
ಆದಿಕಾಂಡ 1:28
ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ, “ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿರಿ. ಭೂಮಿಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನ ಮಾಡಿರಿ” ಎಂದು ಅವರಿಗೆ ಹೇಳಿದನು.
ಸಂದರ್ಭದಲ್ಲಿ
25ದೇವರು ಕಾಡುಮೃಗಗಳನ್ನೂ, ಪಶುಗಳನ್ನೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು.
26ಆಮೇಲೆ ದೇವರು, ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟು ಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ, ಪ್ರಾಣಿಗಳ ಮೇಲೆಯೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಕೀಟಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ದೊರೆತನಮಾಡಲಿ ಅಂದನು.
27ಹೀಗೆ ದೇವರು; “ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದನು. ದೇವರ ಸ್ವರೂಪದಲ್ಲಿ ಅವನನ್ನು ಉಂಟುಮಾಡಿದನು. ಅವರನ್ನು ಗಂಡುಹೆಣ್ಣಾಗಿ ಸೃಷ್ಟಿ ಮಾಡಿದನು.”
28ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ, “ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿರಿ. ಭೂಮಿಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನ ಮಾಡಿರಿ” ಎಂದು ಅವರಿಗೆ ಹೇಳಿದನು.
29ಅಲ್ಲದೆ ದೇವರು, “ಇಗೋ, ಸಮಸ್ತ ಭೂಮಿಯ ಮೇಲಿರುವ ಬೀಜವುಳ್ಳ ಎಲ್ಲಾ ಪೈರುಗಳನ್ನೂ, ಬೀಜವುಳ್ಳ ಎಲ್ಲಾ ಹಣ್ಣಿನ ಮರಗಳನ್ನೂ ನಿಮಗೆ ಆಹಾರಕ್ಕಾಗಿ ಕೊಟ್ಟಿದ್ದೇನೆ
30ಇದಲ್ಲದೆ ಭೂಮಿಯ ಮೇಲೆ ತಿರುಗಾಡುವ ಮೃಗಗಳು, ಆಕಾಶದಲ್ಲಿ ಹಾರಾಡುವ ಪಕ್ಷಿಗಳು, ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು ಮೊದಲಾದ ಜೀವಿಗಳಿಗೆ ಹಸುರಾದ ಸಸ್ಯಗಳನ್ನೆಲ್ಲಾ ಆಹಾರಕ್ಕಾಗಿ ಕೊಟ್ಟಿದ್ದೇನೆ” ಎಂದು ಹೇಳಿದನು. ಅದು ಹಾಗೆಯೇ ಆಯಿತು.
31ದೇವರು ತಾನು ಉಂಟುಮಾಡಿದ್ದನ್ನೆಲ್ಲಾ ನೋಡಲಾಗಿ ಅವೆಲ್ಲವೂ ಬಹು ಒಳ್ಳೆಯದಾಗಿ ತೋರಿತು. ಸಾಯಂಕಾಲವೂ ಉದಯಕಾಲವೂ ಆಗಿ ಆರನೆಯ ದಿನವಾಯಿತು.
ಇಂಗ್ಲಿಷ್ನಲ್ಲಿ
God blessed them and said to them, “Be fruitful and multiply, and fill the earth and subdue it; rule over the fish of the sea and the birds of the air and every creature that crawls upon the earth.”ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ದೇವರು ನೋಹನನ್ನೂ, ಅವನ ಮಕ್ಕಳನ್ನೂ ಆಶೀರ್ವದಿಸಿ ಅವರಿಗೆ, “ನೀವು ಬಹುಸಂತಾನವುಳ್ಳವರಾಗಿ ಹೆಚ್ಚಿರಿ; ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ.ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಭೂಮಿಯ ಮೇಲೆ ನಿಮಗೆ ಬಹುಸಂತಾನವಾಗಲಿ” ಎಂದು ಹೇಳಿದನು.ನಾನು ನಿಮ್ಮ ಮೇಲೆ ಕಟಾಕ್ಷವಿಟ್ಟು ಬಹುಸಂತಾನವನ್ನು ಕೊಟ್ಟು ಹೆಚ್ಚಿಸುವೆನು; ನಿಮ್ಮೊಂದಿಗೆ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.ಅಂತಃಪುರದಲ್ಲಿರುವ ನಿನ್ನ ಹೆಂಡತಿಯು, ಫಲಭರಿತವಾದ ದ್ರಾಕ್ಷಾಲತೆಯಂತೆ ಇರುವಳು; ನಿನ್ನ ಸಂಗಡ ಊಟದ ಮಣೆಯ ಸುತ್ತಲೂ ಕುಳಿತುಕೊಳ್ಳುವ ನಿನ್ನ ಮಕ್ಕಳು, ಎಣ್ಣೇಮರದ ಸಸಿಗಳ ಹಾಗೆ ಇರುವರು. ಇಗೋ, ಯೆಹೋವನಲ್ಲಿ ಭಯಭಕ್ತಿಯುಳ್ಳ ಪುರುಷನು, ಈ ರೀತಿಯಾಗಿ ಆಶೀರ್ವಾದ ಹೊಂದುವನು.ನಾನು ನಿನ್ನನ್ನು ಆಶೀರ್ವದಿಸಿಯೇ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಅಧಿಕವಾಗಿ ಹೆಚ್ಚಿಸುವೆನು, ಅದನ್ನು ಆಕಾಶದ ನಕ್ಷತ್ರಗಳಂತೆಯೂ, ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾಗುವಂತೆ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವತ್ತಾಗಿ ಮಾಡಿಕೊಳ್ಳುವರು. ನೀನು ನನ್ನ ಮಾತಿಗೆ ವಿಧೇಯನಾಗಿ ಭೂಮಿಯ ಎಲ್ಲಾ ಜನಾಂಗಗಳಿಗೆ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಯೆಹೋವನು ವಾಗ್ದಾನ ಮಾಡಿದ್ದಾನೆ.” ಎಂದನು.ಇದಲ್ಲದೆ ದೇವರು, “ಅವುಗಳಿಗೆ ನೀವು ಅಭಿವೃದ್ಧಿಯಾಗಿ ಹೆಚ್ಚಿರಿ, ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಹೆಚ್ಚಲಿ” ಎಂದು ಹೇಳಿ ಆಶೀರ್ವದಿಸಿದನು.ಇಷ್ಮಾಯೇಲನ ವಿಷಯದಲ್ಲಿ ನೀನು ಮಾಡಿದ ಬಿನ್ನಹವನ್ನು ಕಿವಿಗೊಟ್ಟು ಕೇಳಿದ್ದೇನೆ. ಅವನನ್ನೂ ಆಶೀರ್ವದಿಸಿದ್ದೇನೆ; ಅವನನ್ನು ಅಭಿವೃದ್ಧಿಮಾಡಿ ಅವನಿಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು. ಅವನು ಹನ್ನೆರಡು ಮಂದಿ ಅರಸರನ್ನು ಪಡೆಯುವನು, ಅವನಿಂದ ಮಹಾ ಜನಾಂಗವಾಗುವಂತೆ ಮಾಡುವೆನು.ಯಾತ್ರಾಗೀತೆ; ಸೊಲೊಮೋನನದು. ಯೆಹೋವನು ಮನೆಯನ್ನು ಕಟ್ಟದಿದ್ದರೆ, ಅದನ್ನು ಕಟ್ಟುವವರು ಕಷ್ಟಪಡುವುದು ವ್ಯರ್ಥ; ಯೆಹೋವನು ಪಟ್ಟಣವನ್ನು ಕಾಯದಿದ್ದರೆ, ಕಾವಲುಗಾರರು ಅದನ್ನು ಕಾಯುವುದು ವ್ಯರ್ಥ. ಬೆಳಗಾಗುವುದಕ್ಕಿಂತ ಮುಂಚೆ ಏಳುವವರೇ, ಹೊತ್ತು ಮೀರಿ ಮಲಗುವವರೇ, ನೀವು ಆಹಾರಕ್ಕಾಗಿ ಇಷ್ಟು ಕಷ್ಟಪಡುವುದು ವ್ಯರ್ಥ; ಆತನು ಅದನ್ನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಕೊಡುತ್ತಾನೆ. ಪುತ್ರಸಂತಾನವು ಯೆಹೋವನಿಂದ ಬಂದ ಸ್ವತ್ತು; ಗರ್ಭಫಲವು ಆತನ ಬಹುಮಾನವೇ. ಯೌವನದಲ್ಲಿ ಹುಟ್ಟಿದ ಮಕ್ಕಳು, ಯುದ್ಧವೀರನ ಕೈಯಲ್ಲಿರುವ ಅಂಬುಗಳಂತಿದ್ದಾರೆ; ಇವುಗಳಿಂದ ತನ್ನ ಬತ್ತಳಿಕೆಯನ್ನು ತುಂಬಿದವನು ಧನ್ಯನು. ಊರ ಬಾಗಿಲಲ್ಲಿ ವೈರಿಗಳ ಸಂಗಡ ವ್ಯಾಜ್ಯವಾಡುವಾಗ ಅಂಥವರು ಅವಮಾನ ಹೊಂದುವುದಿಲ್ಲ.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು