Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಆದಿಕಾಂಡ 1:29

ಬೈಬಲ್ ವಚನ · IRV

ಆದಿಕಾಂಡ 1:29

ಅಲ್ಲದೆ ದೇವರು, “ಇಗೋ, ಸಮಸ್ತ ಭೂಮಿಯ ಮೇಲಿರುವ ಬೀಜವುಳ್ಳ ಎಲ್ಲಾ ಪೈರುಗಳನ್ನೂ, ಬೀಜವುಳ್ಳ ಎಲ್ಲಾ ಹಣ್ಣಿನ ಮರಗಳನ್ನೂ ನಿಮಗೆ ಆಹಾರಕ್ಕಾಗಿ ಕೊಟ್ಟಿದ್ದೇನೆ

ಇಡೀ ಅಧ್ಯಾಯ ಓದಿ: ಆದಿಕಾಂಡ 1

ಸಂದರ್ಭದಲ್ಲಿ

26ಆಮೇಲೆ ದೇವರು, ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟು ಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ, ಪ್ರಾಣಿಗಳ ಮೇಲೆಯೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಕೀಟಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ದೊರೆತನಮಾಡಲಿ ಅಂದನು.

27ಹೀಗೆ ದೇವರು; “ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದನು. ದೇವರ ಸ್ವರೂಪದಲ್ಲಿ ಅವನನ್ನು ಉಂಟುಮಾಡಿದನು. ಅವರನ್ನು ಗಂಡುಹೆಣ್ಣಾಗಿ ಸೃಷ್ಟಿ ಮಾಡಿದನು.”

28ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ, “ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿರಿ. ಭೂಮಿಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನ ಮಾಡಿರಿ” ಎಂದು ಅವರಿಗೆ ಹೇಳಿದನು.

29ಅಲ್ಲದೆ ದೇವರು, “ಇಗೋ, ಸಮಸ್ತ ಭೂಮಿಯ ಮೇಲಿರುವ ಬೀಜವುಳ್ಳ ಎಲ್ಲಾ ಪೈರುಗಳನ್ನೂ, ಬೀಜವುಳ್ಳ ಎಲ್ಲಾ ಹಣ್ಣಿನ ಮರಗಳನ್ನೂ ನಿಮಗೆ ಆಹಾರಕ್ಕಾಗಿ ಕೊಟ್ಟಿದ್ದೇನೆ

30ಇದಲ್ಲದೆ ಭೂಮಿಯ ಮೇಲೆ ತಿರುಗಾಡುವ ಮೃಗಗಳು, ಆಕಾಶದಲ್ಲಿ ಹಾರಾಡುವ ಪಕ್ಷಿಗಳು, ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು ಮೊದಲಾದ ಜೀವಿಗಳಿಗೆ ಹಸುರಾದ ಸಸ್ಯಗಳನ್ನೆಲ್ಲಾ ಆಹಾರಕ್ಕಾಗಿ ಕೊಟ್ಟಿದ್ದೇನೆ” ಎಂದು ಹೇಳಿದನು. ಅದು ಹಾಗೆಯೇ ಆಯಿತು.

31ದೇವರು ತಾನು ಉಂಟುಮಾಡಿದ್ದನ್ನೆಲ್ಲಾ ನೋಡಲಾಗಿ ಅವೆಲ್ಲವೂ ಬಹು ಒಳ್ಳೆಯದಾಗಿ ತೋರಿತು. ಸಾಯಂಕಾಲವೂ ಉದಯಕಾಲವೂ ಆಗಿ ಆರನೆಯ ದಿನವಾಯಿತು.

ಆದಿಕಾಂಡ 1

ಇಂಗ್ಲಿಷ್‌ನಲ್ಲಿ

Berean Standard BibleGenesis 1:29Then God said, “Behold, I have given you every seed-bearing plant on the face of all the earth, and every tree whose fruit contains seed. They will be yours for food.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಆದಿ 9:3ಭೂಮಿಯ ಮೇಲೆ ಚಲಿಸುವ ಎಲ್ಲಾ ಕ್ರಿಮಿಕೀಟಗಳೂ ನಿಮಗೆ ಆಹಾರವಾಗಿರುವವು. ನಾನು ನಿಮ್ಮ ಆಹಾರಕ್ಕೆ ಹಸಿರುಪಲ್ಯಗಳನ್ನು ನಿಮಗೆ ಕೊಟ್ಟಂತೆ ಇವುಗಳನ್ನೂ ಕೊಟ್ಟಿದ್ದೇನೆ.
ಕೀರ್ತ 104:14–15ಪಶುಗಳಿಗೋಸ್ಕರ ಹುಲ್ಲನ್ನು ಮೊಳಿಸುತ್ತೀ; ಮನುಷ್ಯರಿಗೋಸ್ಕರ ಪೈರುಗಳನ್ನು ಹುಟ್ಟಿಸುತ್ತೀ. ಅವರು ಭೂವ್ಯವಸಾಯಮಾಡಿ ಆಹಾರವನ್ನು, ಹೃದಯಾನಂದಕರವಾದ ದ್ರಾಕ್ಷಾರಸವನ್ನು, ಮುಖಕ್ಕೆ ಕಾಂತಿಯನ್ನು ಉಂಟುಮಾಡುವ ಎಣ್ಣೆಯನ್ನು, ಪ್ರಾಣಾಧಾರವಾದ ರೊಟ್ಟಿಯನ್ನು ಸಂಪಾದಿಸಿಕೊಳ್ಳುತ್ತಾರೆ.
ಕೀರ್ತ 145:15–16ಯೆಹೋವನೇ, ಎಲ್ಲಾ ಜೀವಿಗಳ ಕಣ್ಣುಗಳು ನಿನ್ನನ್ನೇ ನೋಡುತ್ತವೆ, ನೀನು ಅವುಗಳಿಗೆ ಹೊತ್ತುಹೊತ್ತಿಗೆ ಆಹಾರಕೊಡುತ್ತಿ. ನೀನು ಕೈತೆರೆದು ಎಲ್ಲಾ ಜೀವಿಗಳ ಇಷ್ಟವನ್ನು ನೆರವೇರಿಸುತ್ತಿ.
ಕೀರ್ತ 104:27–28ಇವುಗಳು ಹೊತ್ತುಹೊತ್ತಿಗೆ ಆಹಾರಕ್ಕೋಸ್ಕರ ನಿನ್ನನ್ನೇ ನಿರೀಕ್ಷಿಸುತ್ತವೆ. ನೀನು ಕೊಡಲು ಅವು ತೆಗೆದುಕೊಳ್ಳುತ್ತವೆ; ನೀನು ಕೈತೆರೆಯಲು ಅವು ಒಳ್ಳೇಯದನ್ನು ಹೊಂದಿ ತೃಪ್ತಿಗೊಳ್ಳುತ್ತವೆ.
ಅ. ಕೃ 14:17ಆದರೆ ದೇವರು ತನ್ನ ಅಸ್ತಿತ್ವವನ್ನು ಅರಿತುಕೊಳ್ಳುವಂತೆ ಸುಕೃತ್ಯಗಳ ಮೂಲಕ ಸಾಕ್ಷಿ ನೀಡುತ್ತಲೇ ಬಂದಿದ್ದಾನೆ; ಆಕಾಶದಿಂದ ಮಳೆಯನ್ನೂ ಸಕಾಲಕ್ಕೆ, ಸುಗ್ಗಿಕಾಲಗಳನ್ನೂ ದಯಪಾಲಿಸಿ, ಆಹಾರ ಕೊಟ್ಟು ನಿಮ್ಮ ಮನಸ್ಸುಗಳನ್ನು ಆನಂದದಿಂದ ತುಂಬಿಸಿ, ಉಪಕಾರಮಾಡುತ್ತಾ ಬಂದವನು ಆತನೇ” ಎಂದು ಹೇಳಿದರು.
ಕೀರ್ತ 147:9ಆತನು ಪಶುಗಳಿಗೂ, ಕೂಗುತ್ತಿರುವ ಕಾಗೆಮರಿಗಳಿಗೂ ಬೇಕಾದ ಆಹಾರಕೊಡುತ್ತಾನೆ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು