ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಆದಿಕಾಂಡ 2:18
ಬೈಬಲ್ ವಚನ · IRV
ಆದಿಕಾಂಡ 2:18
ಅನಂತರ ಯೆಹೋವನಾದ ದೇವರು, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಯಾದ ಸಹಕಾರಿಯನ್ನು ಉಂಟುಮಾಡುವೆನು” ಅಂದನು.
ಸಂದರ್ಭದಲ್ಲಿ
15ಯೆಹೋವನಾದ ದೇವರು ಆ ಮನುಷ್ಯನನ್ನು ಕರೆದುಕೊಂಡು ಹೋಗಿ ಏದೆನ್ ತೋಟವನ್ನು ವ್ಯವಸಾಯ ಮಾಡುವುದಕ್ಕೂ ಕಾಯುವುದಕ್ಕೂ ಅದರಲ್ಲಿ ಇರಿಸಿದನು.
16ಇದಲ್ಲದೆ ಯೆಹೋವನಾದ ದೇವರು ಆ ಮನುಷ್ಯನಿಗೆ, “ನೀನು ತೋಟದಲ್ಲಿರುವ ಎಲ್ಲಾ ಮರಗಳ ಹಣ್ಣುಗಳನ್ನು ಯಥೇಚ್ಛವಾಗಿ ತಿನ್ನಬಹುದು.
17ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ಈ ಮರದ ಹಣ್ಣನ್ನು ಮಾತ್ರ ತಿನ್ನಬಾರದು. ತಿಂದ ದಿನವೇ ಸತ್ತು ಹೋಗುವೆ” ಎಂದು ಆಜ್ಞಾಪಿಸಿದನು.
18ಅನಂತರ ಯೆಹೋವನಾದ ದೇವರು, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಯಾದ ಸಹಕಾರಿಯನ್ನು ಉಂಟುಮಾಡುವೆನು” ಅಂದನು.
19ಯೆಹೋವನು ಎಲ್ಲಾ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ, ನೆಲದ ಮಣ್ಣಿನಿಂದ ಸೃಷ್ಟಿಸಿ ಇವುಗಳಿಗೆ ಮನುಷ್ಯನು ಏನೇನು ಹೆಸರಿಡುವನೋ ನೋಡೋಣ ಎಂದು ಅವನ ಬಳಿಗೆ ಬರಮಾಡಿದನು. ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಅವುಗಳ ಹೆಸರಾಯಿತು.
20ಹೀಗೆ ಆದಾಮನು ಎಲ್ಲಾ ಪಶುಗಳಿಗೂ, ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಹೆಸರಿಟ್ಟನು. ಆದರೆ ಆ ಮನುಷ್ಯನಿಗೆ ಸರಿಯಾದ ಸಹಕಾರಿ ಸಿಗಲಿಲ್ಲ.
21ಹೀಗಿರುವಲ್ಲಿ ಯೆಹೋವನಾದ ದೇವರು ಆ ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿ ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಅದರ ಸ್ಥಳವನ್ನು ಮಾಂಸದಿಂದ ತುಂಬಿದನು.
ಇಂಗ್ಲಿಷ್ನಲ್ಲಿ
The LORD God also said, “It is not good for the man to be alone. I will make for him a suitable helper.”ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ಒಬ್ಬನಿಗಿಂತ ಇಬ್ಬರು ಕೆಲಸ ಮಾಡುವುದು ಒಳ್ಳೆಯದು. ಅವರ ಪ್ರಯಾಸಕ್ಕೆ ಒಳ್ಳೆಯ ಲಾಭವನ್ನು ಸಂಪಾದಿಸಬಹುದು. ಒಬ್ಬನು ಬಿದ್ದರೆ, ಇನ್ನೊಬ್ಬನು ತನ್ನ ಸ್ನೇಹಿತನನ್ನು ಮೇಲಕ್ಕೆ ಎಬ್ಬಿಸುವನು. ಒಬ್ಬನು ಒಬ್ಬಂಟ್ಟಿಗನಾಗಿ ಬಿದ್ದರೆ, ಅವನನ್ನು ಮೇಲಕ್ಕೆ ಎಬ್ಬಿಸುವವನು ಯಾರೂ ಇಲ್ಲ, ಅವನ ಗತಿ ದುರ್ಗತಿಯೇ. ಮತ್ತು ಇಬ್ಬರು ಜೊತೆಯಲ್ಲಿ ಮಲಗಿಕೊಂಡರೆ ಅವರಿಗೆ ಬೆಚ್ಚಗಾಗುತ್ತದೆ, ಆದರೆ ಒಬ್ಬನು ಹೇಗೆ ಬೆಚ್ಚಗಿರುತ್ತಾನೆ? ಒಬ್ಬನನ್ನು ಮತ್ತೊಬ್ಬನು ಜಯಿಸಬಹುದು, ಆದರೆ ಗೆದ್ದವನನ್ನು ಇಬ್ಬರು ಎದುರಿಸಿ ನಿಲ್ಲಿಸಬಹುದು. ಮೂರು ಹುರಿಯ ಹಗ್ಗ ಬೇಗನೆ ಕಿತ್ತುಹೋಗುವುದಿಲ್ಲ.ಪತ್ನಿಲಾಭವು ರತ್ನಲಾಭ, ಅದು ಯೆಹೋವನ ಅನುಗ್ರಹವೇ.ಪುರುಷನು ದೇವರ ಪ್ರತಿರೂಪವೂ ಮತ್ತು ಪ್ರಭಾವವೂ ಆಗಿರುವುದರಿಂದ ತಲೆಯನ್ನು ಮುಚ್ಚಿಕೊಳ್ಳಬಾರದು. ಸ್ತ್ರೀಯಾದರೋ ಪುರುಷನ ಪ್ರಭಾವವಾಗಿದ್ದಾಳೆ. ಪುರುಷನು ಸ್ತ್ರೀಯಿಂದ ಉತ್ಪತ್ತಿಯಾಗಲಿಲ್ಲ. ಸ್ತ್ರೀಯು ಪುರುಷನಿಂದ ಉತ್ಪತ್ತಿಯಾದಳು. ಇದಲ್ಲದೆ ಪುರುಷನು ಸ್ತ್ರೀಗೋಸ್ಕರವಾಗಿ ಸೃಷ್ಟಿಸಲ್ಪಡಲಿಲ್ಲ, ಆದರೆ ಸ್ತ್ರೀಯು ಪುರುಷನಿಗೋಸ್ಕರವಾಗಿ ಸೃಷ್ಟಿಸಲ್ಪಟ್ಟಳು. ಹೀಗಿರುವುದರಿಂದ ದೂತರ ನಿಮಿತ್ತವಾಗಿ ಸ್ತ್ರೀಯು ಪುರುಷನ ಅಧಿಕಾರವನ್ನು ಸೂಚಿಸುವ ಮುಸುಕನ್ನು ತಲೆಯ ಮೇಲೆ ಹಾಕಿಕೊಂಡಿರಬೇಕು. ಆದರೂ ಕರ್ತನ ವಿಷಯದಲ್ಲಿ ಪುರುಷರಿಲ್ಲದೆ ಸ್ತ್ರೀಯರೂ, ಸ್ತ್ರೀಯರಿಲ್ಲದೆ ಪುರುಷರೂ ಇಲ್ಲ. ಸ್ತ್ರೀಯು ಪುರುಷನಿಂದ ಉತ್ಪತ್ತಿಯಾದಳು. ಹಾಗೆಯೇ ಪುರುಷನು ಸ್ತ್ರೀ ಮೂಲಕವಾಗಿ ಹುಟ್ಟುತ್ತಾನೆ. ಆದರೆ ದೇವರೇ ಸಮಸ್ತವನ್ನು ಸೃಷ್ಟಿಸಿದಾತನು.ಅದೇ ರೀತಿಯಾಗಿ ಪತಿಯರೇ, ಸ್ತ್ರೀಯು ನಿಮ್ಮಗಿಂತ ಬಲಹೀನಳೆಂಬುದನ್ನು ತಿಳಿದುಕೊಂಡು, ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ನಡೆದುಕೊಳ್ಳಿರಿ, ಅವರು ನಿತ್ಯಜೀವ ವರಕ್ಕೆ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಗೌರವವನ್ನು ಸಲ್ಲಿಸಿರಿ. ಹೀಗೆ ಮಾಡಿದರೆ ನಿಮ್ಮ ಪ್ರಾರ್ಥನೆಗಳಿಗೆ ಅಡಚಣೆ ಉಂಟಾಗುವುದಿಲ್ಲ.ಸ್ತ್ರೀಯರು ಮೌನವಾಗಿದ್ದು ಪೂರ್ಣ ಅಧೀನತೆಯಿಂದ ಉಪದೇಶವನ್ನು ಕಲಿಯಬೇಕು. ಉಪದೇಶಮಾಡುವುದಕ್ಕಾಗಲಿ ಪುರುಷರ ಮೇಲೆ ಅಧಿಕಾರ ನಡಿಸುವುದಕ್ಕಾಗಲಿ ಸ್ತ್ರೀಯರಿಗೆ ನಾನು ಅಪ್ಪಣೆ ಕೊಡುವುದಿಲ್ಲ. ಅವರು ಮೌನವಾಗಿರಬೇಕು. ಮೊದಲು ಸೃಷ್ಟಿಸಲ್ಪಟವನು ಆದಾಮನಲ್ಲವೇ, ಆಮೇಲೆ ಹವ್ವಳು.ನವೊಮಿಯು ಸೊಸೆಗೆ, “ನನ್ನ ಮಗಳೇ, ನಿನಗೆ ಒಳ್ಳೆಯದಾಗುವುದಕ್ಕಾಗಿ, ನೀನು ಗೃಹಿಣಿಯಾಗಿ ಸುಖದಿಂದಿರುವುದಕ್ಕೋಸ್ಕರ ನಾನು ಪ್ರಯತ್ನಿಸಬೇಕಲ್ಲವೇ?ದೇವರು ತಾನು ಉಂಟುಮಾಡಿದ್ದನ್ನೆಲ್ಲಾ ನೋಡಲಾಗಿ ಅವೆಲ್ಲವೂ ಬಹು ಒಳ್ಳೆಯದಾಗಿ ತೋರಿತು. ಸಾಯಂಕಾಲವೂ ಉದಯಕಾಲವೂ ಆಗಿ ಆರನೆಯ ದಿನವಾಯಿತು.ಅದಕ್ಕೆ ಆ ಮನುಷ್ಯನು, “ನನ್ನ ಜೊತೆಯಲ್ಲಿರುವುದಕ್ಕೆ ನೀನು ಕೊಟ್ಟ ಈ ಸ್ತ್ರೀಯು, ಆ ಮರದ ಹಣ್ಣನ್ನು ನನಗೆ ಕೊಟ್ಟಳು, ನಾನು ತಿಂದೆನು” ಎಂದು ಹೇಳಿದನು.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು