Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಆದಿಕಾಂಡ 2:24

ಬೈಬಲ್ ವಚನ · IRV

ಆದಿಕಾಂಡ 2:24

ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು.

ಇಡೀ ಅಧ್ಯಾಯ ಓದಿ: ಆದಿಕಾಂಡ 2

ಸಂದರ್ಭದಲ್ಲಿ

21ಹೀಗಿರುವಲ್ಲಿ ಯೆಹೋವನಾದ ದೇವರು ಆ ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿ ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಅದರ ಸ್ಥಳವನ್ನು ಮಾಂಸದಿಂದ ತುಂಬಿದನು.

22ಯೆಹೋವನು ಮನುಷ್ಯನಿಂದ ತೆಗೆದ ಎಲುಬನ್ನು, ಸ್ತ್ರೀಯನ್ನಾಗಿ ಮಾಡಿ ಆಕೆಯನ್ನು ಅವನ ಬಳಿಗೆ ಕರೆದುಕೊಂಡು ಬಂದನು. ಅವನು ಆಕೆಯನ್ನು ನೋಡಿ,

23“ಈಗ ಸರಿ, ಈಕೆಯು ನನ್ನ ಎಲುಬುಗಳಿಂದ ಬಂದ ಎಲುಬು, ನನ್ನ ಮಾಂಸದಿಂದ ಬಂದ ಮಾಂಸವೂ ಆಗಿದ್ದಾಳೆ. ಈಕೆಯು ಮನುಷ್ಯನಿಂದ ಉತ್ಪತ್ತಿಯಾದ ಕಾರಣ ನಾರೀ ಎನ್ನಿಸಿಕೊಳ್ಳುವಳು” ಅಂದನು.

24ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು.

25ಆ ಮನುಷ್ಯನು ಮತ್ತು ಅವನ ಹೆಂಡತಿ ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.

ಆದಿಕಾಂಡ 2

ಇಂಗ್ಲಿಷ್‌ನಲ್ಲಿ

Berean Standard BibleGenesis 2:24For this reason a man will leave his father and mother and be united to his wife, and they will become one flesh.

ಹೊಸ ಒಡಂಬಡಿಕೆಯಲ್ಲಿ ಉಲ್ಲೇಖಿತ

ಮತ್ತಾ 19:5‘ಈ ಕಾರಣದಿಂದಲೇ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು ಎಂದು ನೀವು ಓದಲಿಲ್ಲವೋ?’
ಮಾರ್ಕ 10:7–8ಈ ಕಾರಣದಿಂದ ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು. ಹೀಗಿರುವಲ್ಲಿ ಅವರು ಇನ್ನು ಇಬ್ಬರಲ್ಲ ಒಂದೇ ಶರೀರವಾಗಿದ್ದಾರೆ.
1 ಕೊರಿ 6:16ವೇಶ್ಯೆಯೊಂದಿಗೆ ಸೇರಿಕೊಂಡವನು ಅವಳೊಂದಿಗೆ ಒಂದೇ ದೇಹವಾಗಿದ್ದಾನೆಂಬುದು ನಿಮಗೆ ತಿಳಿಯದೋ? “ಇಬ್ಬರು ಒಂದೇ ಶರೀರವಾಗಿರುವರೆಂದು” ದೇವರವಾಕ್ಯ ಹೇಳುತ್ತದಲ್ಲಾ.
ಎಫೆ 5:31“ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು, ಅವರಿಬ್ಬರೂ ಒಂದೇ ಶರೀರವಾಗಿರುವರು.” ಎಂದು ಬರೆದದೆಯಲ್ಲಾ.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಎಫೆ 5:28–31ಹಾಗೆಯೇ ಗಂಡದಿರು ಸಹ ತಮ್ಮ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸಿಕೊಳ್ಳುವವನಾಗಿದ್ದಾನೆ. ಯಾರೂ ಎಂದೂ ಸ್ವಂತ ಶರೀರವನ್ನು ಹಗೆಮಾಡಿದ್ದಿಲ್ಲವಲ್ಲ, ಎಲ್ಲರೂ ತಮ್ಮ ಶರೀರಗಳನ್ನು ಪೋಷಿಸಿ ಪಾಲನೆ ಮಾಡುತ್ತಾರಷ್ಟೇ. ಸಭೆಯೆಂಬ ದೇಹಕ್ಕೆ ನಾವು ಅಂಗಗಳಾಗಿದ್ದೇವೆ ಸಭೆಯೆಂಬ ಈ ದೇಹವನ್ನು ಕ್ರಿಸ್ತನು ಹಾಗೆಯೇ ಪೋಷಿಸಿ ಪಾಲನೆ ಮಾಡುತ್ತಾ ಬಂದಿದ್ದಾನೆ. “ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು, ಅವರಿಬ್ಬರೂ ಒಂದೇ ಶರೀರವಾಗಿರುವರು.” ಎಂದು ಬರೆದದೆಯಲ್ಲಾ.
ರೋಮಾ 7:2ಇದಕ್ಕೆ ದೃಷ್ಟಾಂತ, ಗಂಡನು ಜೀವದಿಂದಿರುವ ತನಕ ಹೆಂಡತಿಯು ನ್ಯಾಯದ ಪ್ರಕಾರ ಅವನಿಗೆ ಬದ್ಧಳಾಗಿರುವಳು. ಗಂಡನು ಸತ್ತರೆ ಮದುವೆಯ ನಿಯಮದಿಂದ ಅವಳು ಬಿಡುಗಡೆಯಾಗುತ್ತಾಳೆ.
1 ಕೊರಿ 7:2–4ಆದರೆ ಜಾರತ್ವದ ಶೋಧನೆಗೆ ಅವಕಾಶ ಕೊಡದಿರಲು ಪ್ರತಿಯೊಬ್ಬನಿಗೂ ಸ್ವಂತ ಹೆಂಡತಿಯು ಇರಲಿ ಮತ್ತು ಪ್ರತಿಯೊಬ್ಬಳಿಗೆ ಸ್ವಂತ ಗಂಡನು ಇರಲಿ. ಗಂಡನು ಹೆಂಡತಿಗೆ, ಹಾಗೆಯೇ ಹೆಂಡತಿಯು ಗಂಡನಿಗೆ ಒಗೆತನವನ್ನು ಸಲ್ಲಿಸಲಿ ಹೆಂಡತಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ ಅದು ಗಂಡನಿಗುಂಟು. ಹಾಗೆಯೇ ಪುರುಷನಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ ಅದು ಹೆಂಡತಿಗುಂಟು.
1 ಕೊರಿ 6:16–17ವೇಶ್ಯೆಯೊಂದಿಗೆ ಸೇರಿಕೊಂಡವನು ಅವಳೊಂದಿಗೆ ಒಂದೇ ದೇಹವಾಗಿದ್ದಾನೆಂಬುದು ನಿಮಗೆ ತಿಳಿಯದೋ? “ಇಬ್ಬರು ಒಂದೇ ಶರೀರವಾಗಿರುವರೆಂದು” ದೇವರವಾಕ್ಯ ಹೇಳುತ್ತದಲ್ಲಾ. ಆದರೆ ಕರ್ತನೊಂದಿಗೆ ಸೇರಿಕೊಂಡವನು ಆತನೊಂದಿಗೆ ಒಂದೇ ಆತ್ಮವಾಗಿದ್ದಾನೆ.
ಜ್ಞಾನೋ 31:10ಗುಣವತಿಯಾದ ಸತಿಯು ಎಲ್ಲಿ ಸಿಕ್ಕುವಳು? ಆಕೆಯು ಹವಳಕ್ಕಿಂತಲೂ ಬಹೂ ಅಮೂಲ್ಯಳು.
ಮಲಾ 2:14–16“ಇದಕ್ಕೆ ಕಾರಣವೇನೆಂದು ಕೇಳುತ್ತೀರೋ? ನಿನಗೂ, ನಿನ್ನ ಯೌವನ ಪ್ರಾಯದ ಹೆಂಡತಿಗೂ ಆದ ಒಡಂಬಡಿಕೆಗೆ ಯೆಹೋವನೇ ಸಾಕ್ಷಿಯಾಗಿದ್ದಾನಲ್ಲಾ, ನಿನ್ನ ಸಹಚರಿಣಿಯೂ, ನಿನ್ನ ಒಡಂಬಡಿಕೆಯ ಪತ್ನಿಯಾದ ಆಕೆಗೆ ದ್ರೋಹಮಾಡಿದ್ದೀ. ದೇವರು ನಿನ್ನ ಮತ್ತು ನಿನ್ನ ಪತ್ನಿಯ ತನುಮನಗಳನ್ನು ಒಂದು ಮಾಡಿ ಒಡಂಬಡಿಸಲಿಲ್ಲವೇ? ದೇವರ ಉದ್ದೇಶವೇನು? ದೇವರ ಮಕ್ಕಳಾಗಿ ಬಾಳುವ ಸಂತಾನ ದಯಪಾಲಿಸುವ ಉದ್ದೇಶ ಆತನದಾಗಿತ್ತು. ಆದುದರಿಂದ ಮದುವೆಯಾದ ಪತ್ನಿಗೆ ದ್ರೋಹಮಾಡದೆ ಪ್ರತಿಯೊಬ್ಬನೂ ಎಚ್ಚರಿಕೆಯಿಂದಿರಲಿ.” ಇಸ್ರಾಯೇಲಿನ ದೇವರಾದ ಯೆಹೋವನು ಇಂತೆನ್ನುತ್ತಾನೆ, “ನಾನು ಪತ್ನಿತ್ಯಾಗವನ್ನೂ, ಹೆಂಡತಿಗೆ ಅನ್ಯಾಯ ಮಾಡುವವನನ್ನೂ ಹಗೆಮಾಡುತ್ತೇನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ಆದಕಾರಣ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ, ದ್ರೋಹಮಾಡಬೇಡಿರಿ.”
1 ಕೊರಿ 7:10–11ವಿವಾಹಿತರಿಗೆ ನನ್ನ ಅಪ್ಪಣೆ ಅಲ್ಲ ಕರ್ತನ ಆಜ್ಞೆಯು ಏನೆಂದರೆ, ಹೆಂಡತಿಯು ಗಂಡನನ್ನು ಬಿಟ್ಟು ಅಗಲಬಾರದು. ಒಂದು ವೇಳೆ ಅಗಲಿದರೂ ಮದುವೆಯಾಗದೆ ಇರಬೇಕು, ಇಲ್ಲವೆ ಗಂಡನ ಸಂಗಡ ಸಂಧಾನವಾಗಿರಬೇಕು ಮತ್ತು ಗಂಡನು ಹೆಂಡತಿಗೆ ವಿಚ್ಛೇದನ ನೀಡಬಾರದು.
ಜ್ಞಾನೋ 12:4ಗುಣವತಿಯಾದ ಸ್ತ್ರೀಯು ಪತಿಯ ತಲೆಗೆ ಕಿರೀಟ, ಮಾನ ಕಳೆಯುವವಳು ಪತಿಯ ಎಲುಬಿಗೆ ಕ್ಷಯ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು