Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಆದಿಕಾಂಡ 9:3

ಬೈಬಲ್ ವಚನ · IRV

ಆದಿಕಾಂಡ 9:3

ಭೂಮಿಯ ಮೇಲೆ ಚಲಿಸುವ ಎಲ್ಲಾ ಕ್ರಿಮಿಕೀಟಗಳೂ ನಿಮಗೆ ಆಹಾರವಾಗಿರುವವು. ನಾನು ನಿಮ್ಮ ಆಹಾರಕ್ಕೆ ಹಸಿರುಪಲ್ಯಗಳನ್ನು ನಿಮಗೆ ಕೊಟ್ಟಂತೆ ಇವುಗಳನ್ನೂ ಕೊಟ್ಟಿದ್ದೇನೆ.

ಇಡೀ ಅಧ್ಯಾಯ ಓದಿ: ಆದಿಕಾಂಡ 9

ಸಂದರ್ಭದಲ್ಲಿ

1ದೇವರು ನೋಹನನ್ನೂ, ಅವನ ಮಕ್ಕಳನ್ನೂ ಆಶೀರ್ವದಿಸಿ ಅವರಿಗೆ, “ನೀವು ಬಹುಸಂತಾನವುಳ್ಳವರಾಗಿ ಹೆಚ್ಚಿರಿ; ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ.

2ಭೂಮಿಯ ಮೇಲಿರುವ ಎಲ್ಲಾ ಮೃಗಗಳೂ, ಆಕಾಶದ ಎಲ್ಲಾ ಪಕ್ಷಿಗಳೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳೂ, ಸಮುದ್ರದ ಮೀನುಗಳೂ ನಿಮಗೆ ಹೆದರುವವು. ನಾನು ಅವುಗಳನ್ನೆಲ್ಲಾ ನಿಮ್ಮ ಸ್ವಾಧೀನಕ್ಕೆ ಕೊಟ್ಟಿದ್ದೇನೆ.

3ಭೂಮಿಯ ಮೇಲೆ ಚಲಿಸುವ ಎಲ್ಲಾ ಕ್ರಿಮಿಕೀಟಗಳೂ ನಿಮಗೆ ಆಹಾರವಾಗಿರುವವು. ನಾನು ನಿಮ್ಮ ಆಹಾರಕ್ಕೆ ಹಸಿರುಪಲ್ಯಗಳನ್ನು ನಿಮಗೆ ಕೊಟ್ಟಂತೆ ಇವುಗಳನ್ನೂ ಕೊಟ್ಟಿದ್ದೇನೆ.

4ಆದರೆ ಮಾಂಸವನ್ನು ಅದರ ಜೀವಸತ್ವವಾದ ರಕ್ತದೊಂದಿಗೆ ನೀವು ತಿನ್ನಬಾರದು. ಏಕೆಂದರೆ ರಕ್ತದಲ್ಲಿ ಜೀವ ಇದೆ.

5ಇದಲ್ಲದೆ ನಿಮ್ಮ ರಕ್ತ ಸುರಿಸಿ ಜೀವ ತೆಗೆಯುವವನಿಗೆ ಮುಯ್ಯಿತೀರಿಸುವೆನು. ಮೃಗವಾಗಿದ್ದರೆ, ಅದಕ್ಕೂ ಮುಯ್ಯಿತೀರಿಸುವೆನು. ಮನುಷ್ಯನಾಗಿದ್ದರೆ, ಹತನಾದವನು ಅವನ ಸಹೋದರನಾದುದರಿಂದ ಅವನಿಗೂ ಮುಯ್ಯಿ ತೀರಿಸುವೆನು. ನರಹತ್ಯವು ಸಹೋದರ ಹತ್ಯವಲ್ಲವೇ?

6ದೇವರು ಮನುಷ್ಯರನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದ್ದರಿಂದ ಯಾರು ಮನುಷ್ಯನ ರಕ್ತವನ್ನು ಸುರಿಸುತ್ತಾನೋ ಅವನ ರಕ್ತವನ್ನು ಮನುಷ್ಯನೇ ಸುರಿಸುವನು.

ಆದಿಕಾಂಡ 9

ಇಂಗ್ಲಿಷ್‌ನಲ್ಲಿ

Berean Standard BibleGenesis 9:3Everything that lives and moves will be food for you; just as I gave you the green plants, I now give you all things.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು