ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಇಬ್ರಿಯರಿಗೆ 10:25
ಬೈಬಲ್ ವಚನ · IRV
ಇಬ್ರಿಯರಿಗೆ 10:25
ಸಭೆಯಾಗಿ ಸೇರುವ ರೂಢಿಯನ್ನು ಕೆಲವರು ಬಿಟ್ಟಂತೆ ನಾವು ಬಿಟ್ಟು ಬಿಡದೆ, ಆ ದಿನವು ಸಮೀಪಿಸುತ್ತಾ ಬರುತ್ತದೆಂದು ನೀವು ತಿಳಿದುಕೊಂಡಿರುವುದರಿಂದ ಒಬ್ಬರನ್ನೊಬ್ಬರು ಮತ್ತಷ್ಟು ಹೆಚ್ಚಾಗಿಯೇ ಪ್ರೋತ್ಸಾಹಿಸುತ್ತಿರೋಣ.
ಸಂದರ್ಭದಲ್ಲಿ
22ಆದಕಾರಣ ಕೆಟ್ಟ ಮನಸ್ಸಾಕ್ಷಿಯನ್ನು ಪ್ರೋಕ್ಷಿಸಿ ಶುದ್ಧೀಕರಿಸಿಕೊಂಡು, ತಿಳಿನೀರಿನಿಂದ ತೊಳೆದ ದೇಹದಿಂದಲೂ, ಯಥಾರ್ಥಹೃದಯದಿಂದಲೂ, ನಂಬಿಕೆಯ ಪೂರ್ಣನಿಶ್ಚಯದಿಂದಲೂ ದೇವರ ಸಮೀಪಕ್ಕೆ ಬರೋಣ.
23ನಾವು ನಮ್ಮ ನಿರೀಕ್ಷೆಯನ್ನು ಕುರಿತು ಮಾಡಿದ ಅರಿಕೆಯನ್ನು ನಿಶ್ಚಂಚಲದಿಂದ ಬಿಗಿಯಾಗಿ ಹಿಡಿಯೋಣ, ಯಾಕೆಂದರೆ ವಾಗ್ದಾನ ಮಾಡಿದಾತನು ನಂಬಿಗಸ್ತನು.
24ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುತ್ತಿರಬೇಕೆಂತಲೂ ಸತ್ಕಾರ್ಯಮಾಡಬೇಕೆಂತಲೂ ಒಬ್ಬರನ್ನೊಬ್ಬರು ಹುರಿದುಂಬಿಸೋಣ.
25ಸಭೆಯಾಗಿ ಸೇರುವ ರೂಢಿಯನ್ನು ಕೆಲವರು ಬಿಟ್ಟಂತೆ ನಾವು ಬಿಟ್ಟು ಬಿಡದೆ, ಆ ದಿನವು ಸಮೀಪಿಸುತ್ತಾ ಬರುತ್ತದೆಂದು ನೀವು ತಿಳಿದುಕೊಂಡಿರುವುದರಿಂದ ಒಬ್ಬರನ್ನೊಬ್ಬರು ಮತ್ತಷ್ಟು ಹೆಚ್ಚಾಗಿಯೇ ಪ್ರೋತ್ಸಾಹಿಸುತ್ತಿರೋಣ.
26ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೂ ಬೇಕೆಂದು ಪಾಪಮಾಡಿದರೆ ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ.
27ಬದಲಿಗೆ, ಅತ್ಯಂತ ಭಯಂಕರವಾದ ನ್ಯಾಯತೀರ್ಪಿನ ನಿರೀಕ್ಷೆ ಹಾಗೂ ದೇವರ ವಿರೋಧಿಗಳನ್ನು ದಹಿಸುವ ಕೋಪಾಗ್ನಿಯೂ ಮಾತ್ರ ಇರುವವು.
28ಮೋಶೆಯ ಧರ್ಮಶಾಸ್ತ್ರವನ್ನು ತಿರಸ್ಕಾರ ಮಾಡಿದವನಿಗೆ ಇಬ್ಬರ ಇಲ್ಲವೆ ಮೂವರ ಸಾಕ್ಷ್ಯಧಾರದ ಮೇಲೆ ಕರುಣೆಯಿಲ್ಲದೆ ಮರಣದಂಡನೆ ಆಗುತ್ತಿತಷ್ಟೆ.
ಇಂಗ್ಲಿಷ್ನಲ್ಲಿ
Let us not neglect meeting together, as some have made a habit, but let us encourage one another, and all the more as you see the Day approaching.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ಅವರು ಅಪೊಸ್ತಲರ ಬೋಧನೆಯಲ್ಲಿಯೂ, ಸಹೋದರರೊಂದಿಗೆ ಅನ್ಯೋನ್ಯತೆಯಲ್ಲಿಯೂ, ರೊಟ್ಟಿಮುರಿಯುವುದರಲ್ಲಿಯೂ, ಪ್ರಾರ್ಥನೆಗಳಲ್ಲಿಯೂ ನಿರತರಾಗಿದ್ದರು.ಆದ್ದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಪ್ರೋತ್ಸಾಹಿಸುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರಿ.ಏಕೆಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬರುತ್ತಾರೋ ಅಲ್ಲಿ ಅವರ ಮಧ್ಯದಲ್ಲಿ ನಾನು ಇದ್ದೇನೆ” ಅಂದನು.ನಿಮ್ಮಲ್ಲಿ ಒಬ್ಬರಾದರೂ ಪಾಪದಲ್ಲಿ ಸಿಕ್ಕಿ ಮೋಸಹೋಗಿ ಕಠಿಣರಾಗದಂತೆ, ‘ಇಂದು’ ಎಂದು ಕರೆಯಲ್ಪಡುವ ಅವಕಾಶ ಇನ್ನೂ ಇರುವಾಗಲೇ, ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ.ನಮ್ಮ ಕರ್ತನಾದ ಯೇಸುವಿನ ನಾಮದಲ್ಲಿ ನೀವೆಲ್ಲರೂ ಸೇರಿ ಬರುವಾಗ ನಾನು ಆತ್ಮದಿಂದ ನಿಮ್ಮೊಂದಿಗಿರುತ್ತೇನೆ ಹಾಗೂಆದಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿಕೊಳ್ಳಿರಿ.ವಾರದ ಮೊದಲನೆಯ ದಿನದಲ್ಲಿ ನಾವು ರೊಟ್ಟಿ ಮುರಿಯುವ ನಿಯಮಕ್ಕಾಗಿ ಸೇರಿಬಂದಾಗ ಪೌಲನು ಅಲ್ಲಿ ನೆರೆದಂತಹ ವಿಶ್ವಾಸಿಗಳಿಗೆ ಬೋಧನೆಮಾಡಿದನು. ಮರುದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಬೋಧಿಸುತ್ತಾ ಮಧ್ಯರಾತ್ರಿಯವರೆಗೂ ಉಪನ್ಯಾಸವನ್ನು ನೀಡಿದನು.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು