ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಇಬ್ರಿಯರಿಗೆ 11:6
ಬೈಬಲ್ ವಚನ · IRV
ಇಬ್ರಿಯರಿಗೆ 11:6
ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ ಮತ್ತು ತನ್ನನ್ನು ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬಬೇಕು.
ಸಂದರ್ಭದಲ್ಲಿ
3ವಿಶ್ವವು ದೇವರ ಮಾತಿನಿಂದಲೇ ನಿರ್ಮಿತವಾಯಿತೆಂದು ನಾವು ನಂಬಿಕೆಯಿಂದಲೇ ತಿಳಿದುಕೊಂಡಿದ್ದೇವೆ. ಈ ಕಾರಣದಿಂದ ಕಾಣಿಸುವ ಈ ಜಗತ್ತು ದೃಶ್ಯವಸ್ತುಗಳಿಂದ ಉಂಟಾಗಲಿಲ್ಲವೆಂದು ಗ್ರಹಿಸುತ್ತೇವೆ.
4ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಶ್ರೇಷ್ಠ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಇದರ ಮೂಲಕ ಅವನು ನೀತಿವಂತನೆಂದು ಸಾಕ್ಷಿ ಹೊಂದಿದನು. ದೇವರು ಅವನ ಕಾಣಿಕೆಗಳನ್ನು ಕುರಿತು ಪ್ರಶಂಸಿಸಿದನು. ಅವನು ಸತ್ತುಹೋಗಿದ್ದರೂ, ಅವನ ನಂಬಿಕೆಯ ಮೂಲಕ ಇನ್ನೂ ಮಾತನಾಡುವವನಾಗಿದ್ದಾನೆ.
5ನಂಬಿಕೆಯಿಂದಲೇ ಹನೋಕನು ಮರಣವನ್ನು ಅನುಭವಿಸದೇ ಒಯ್ಯಲ್ಪಟ್ಟನು. ದೇವರು ಅವನನ್ನು ತೆಗೆದುಕೊಂಡು ಹೋದದ್ದರಿಂದ ಅವನು ಯಾರಿಗೂ ಕಾಣಿಸಿಗಲಿಲ್ಲ. ಅವನು ಒಯ್ಯಲ್ಪಡುವುದಕ್ಕಿಂತ ಮೊದಲು ದೇವರನ್ನು ಮೆಚ್ಚಿಸುವವನಾಗಿದ್ದನೆಂದು ಸಾಕ್ಷಿ ಹೊಂದಿದನು.
6ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ ಮತ್ತು ತನ್ನನ್ನು ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬಬೇಕು.
7ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ದೈವೋಕ್ತಿಯನ್ನು ಹೊಂದಿ, ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ನಂಬಿಕೆಯಿಂದಲೇ ಅವನು ಲೋಕದವರು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡನು. ಆದುದ್ದರಿಂದ ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು.
8ನಂಬಿಕೆಯಿಂದಲೇ ಅಬ್ರಹಾಮನು ಕರೆಯಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟು ಹೋದನು. ತಾನು ಹೋಗುವುದು ಎಲ್ಲಿಗೆ ಎಂದು ತಿಳಿಯದೆ ಹೊರಟನು.
9ನಂಬಿಕೆಯಿಂದಲೇ ಅವನು ವಾಗ್ದಾನದ ದೇಶಕ್ಕೆ ಬಂದಾಗ, ಅಲ್ಲಿ ಅನ್ಯ ದೇಶದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿ ಬದುಕಿದನು. ಅದೇ ವಾಗ್ದಾನಕ್ಕೆ ಸಹಭಾಧ್ಯರಾಗಿದ್ದ ಇಸಾಕನೂ, ಯಾಕೋಬನೂ ಅವನಂತೆಯೇ ಗುಡಾರಗಳಲ್ಲಿ ವಾಸಿಸಿದರು.
ಇಂಗ್ಲಿಷ್ನಲ್ಲಿ
And without faith it is impossible to please God, because anyone who approaches Him must believe that He exists and that He rewards those who earnestly seek Him.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ, ಆತುರದಿಂದ ಹುಡುಕುವವರು ನನ್ನನ್ನು ಕಂಡುಕೊಳ್ಳುವರು.ನೀವು ನನ್ನನ್ನು ಹುಡುಕುವಿರಿ, ಮನಃಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ. ನಾನು ನಿಮಗೆ ದೊರೆಯುವೆನು, ನಿಮ್ಮನ್ನು ನಿಮ್ಮ ದುರವಸ್ಥೆಯಿಂದ ತಪ್ಪಿಸಿ, ನಾನು ನಿಮ್ಮನ್ನು ಅಟ್ಟಿಬಿಟ್ಟಿದ್ದ ಸಮಸ್ತ ದೇಶಗಳಿಂದಲೂ, ಸಕಲಜನಾಂಗಗಳ ಮಧ್ಯದಿಂದಲೂ ಒಟ್ಟುಗೂಡಿಸಿ ನಿಮ್ಮನ್ನು ಯಾವ ಸ್ಥಳದಿಂದ ಸೆರೆಗೆ ಸಾಗಿಸಿದೆನೋ ಅಲ್ಲಿಗೆ ತಿರುಗಿ ಬರಮಾಡುವೆನು, ಇದು ಯೆಹೋವನ ನುಡಿ” ಎಂಬುದೇ.ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.ಆತನ ಪರಿಶುದ್ಧ ನಾಮದಲ್ಲಿ ಹಿಗ್ಗಿರಿ; ಯೆಹೋವನ ದರ್ಶನವನ್ನು ಕೋರುವವರ ಹೃದಯವು ಹರ್ಷಿಸಲಿ. ಯೆಹೋವನನ್ನೂ, ಆತನ ಬಲವನ್ನೂ ಆಶ್ರಯಿಸಿರಿ; ನಿತ್ಯವೂ ಆತನ ದರ್ಶನವನ್ನು ಅಪೇಕ್ಷಿಸಿರಿ.ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.ನೀವಾದರೋ ದೇವರ ರಾಜ್ಯಕ್ಕಾಗಿ ತವಕಪಡಿರಿ. ಇದರ ಕೂಡ ಅವೂ ನಿಮಗೆ ದೊರಕುವವು.ನಾನು ಪೂರ್ಣಮನಸ್ಸಿನಿಂದ ನಿನ್ನನ್ನು ಹುಡುಕುತ್ತೇನೆ, ನಿನ್ನ ಆಜ್ಞೆಗಳಿಗೆ ತಪ್ಪಿಹೋಗದಂತೆ ನನ್ನನ್ನು ಕಾಪಾಡು.ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು