Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಇಬ್ರಿಯರಿಗೆ 13:17

ಬೈಬಲ್ ವಚನ · IRV

ಇಬ್ರಿಯರಿಗೆ 13:17

ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿರುವುದರಿಂದ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ದುಃಖಿಸದೆ ಸಂತೋಷದಿಂದ ಇದನ್ನು ಮಾಡುವಂತೆ ನಡೆದುಕೊಳ್ಳಿರಿ. ಏಕೆಂದರೆ ಅವರು ವ್ಯಸನದಿಂದಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ.

ಇಡೀ ಅಧ್ಯಾಯ ಓದಿ: ಇಬ್ರಿಯರಿಗೆ 13

ಸಂದರ್ಭದಲ್ಲಿ

14ಏಕೆಂದರೆ ಇಹದಲ್ಲಿ ಶಾಶ್ವತವಾದ ಪಟ್ಟಣವು ನಮಗಿಲ್ಲ. ಭವಿಷ್ಯತ್ತಿನಲ್ಲಿ ಬರುವ ಪಟ್ಟಣವನ್ನು ಎದುರುನೋಡುತ್ತಾ ಇದ್ದೇವೆ.

15ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರವೆಂಬ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ, ಆತನನ್ನು ನಾವು ಕರ್ತನೆಂದು ನಂಬಿ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.

16ಇದಲ್ಲದೆ ಪರೋಪಕಾರ ಮಾಡುವುದನ್ನು, ಬೇರೆಯವರಿಗೆ ಸಹಾಯ ಮಾಡುವುದನ್ನು ಮರೆಯಬೇಡಿರಿ. ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.

17ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿರುವುದರಿಂದ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ದುಃಖಿಸದೆ ಸಂತೋಷದಿಂದ ಇದನ್ನು ಮಾಡುವಂತೆ ನಡೆದುಕೊಳ್ಳಿರಿ. ಏಕೆಂದರೆ ಅವರು ವ್ಯಸನದಿಂದಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ.

18ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಸಜ್ಜನರಾಗಿ ನಡೆದುಕೊಳ್ಳಬೇಕೆಂದು ಅಪೇಕ್ಷಿಸುವವರಾಗಿದ್ದು ಒಳ್ಳೆಯ ಮನಸ್ಸಾಕ್ಷಿ ಹೊಂದಿದ್ದೇವೆಂದು ನಿಶ್ಚಯಿಸಿಕೊಂಡಿದ್ದೇವೆ.

19ಮತ್ತು ನಾನು ಅತಿ ಶೀಘ್ರವಾಗಿ ನಿಮ್ಮ ಬಳಿಗೆ ತಿರುಗಿ ಬರುವಂತೆ ನೀವು ಪ್ರಾರ್ಥಿಸಬೇಕೆಂದು ನಾನು ನಿಮ್ಮನ್ನು ಬಹಳವಾಗಿ ಕೇಳಿಕೊಳ್ಳುತ್ತೇನೆ.

20ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.

ಇಬ್ರಿಯರಿಗೆ 13

ಇಂಗ್ಲಿಷ್‌ನಲ್ಲಿ

Berean Standard BibleHebrews 13:17Obey your leaders and submit to them, for they watch over your souls as those who must give an account. To this end, allow them to lead with joy and not with grief, for that would be of no advantage to you.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

1 ಥೆಸ 5:12–13ಸಹೋದರರೇ, ಕರ್ತನ ಕಾರ್ಯಗಳಲ್ಲಿ ನಿಮ್ಮ ಮೇಲೆ ಮುಖ್ಯಸ್ಥರಾಗಿದ್ದು, ಪ್ರಯಾಸಪಡುತ್ತಾ ನಿಮಗೆ ಬುದ್ಧಿ ಹೇಳುತ್ತರೋ, ಅವರನ್ನು ಲಕ್ಷಿಸಿ ಅವರ ಕೆಲಸದ ನಿಮಿತ್ತ ಅವರನ್ನು ಪ್ರೀತಿಯಿಂದ ಬಹಳವಾಗಿ ಗೌರವಿಸಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ. ನಿಮ್ಮ ನಿಮ್ಮೊಳಗೆ ಸಮಾಧಾನವಾಗಿರಿ.
1 ತಿಮೊ 5:17ಚೆನ್ನಾಗಿ ಅಧಿಕಾರ ನಡಿಸುವ ಸಭೆಯ ಹಿರಿಯರನ್ನು, ಅವರೊಳಗೆ ವಿಶೇಷವಾಗಿ ದೇವರ ವಾಕ್ಯವನ್ನು ಸಾರುವುದರಲ್ಲಿಯೂ ಉಪದೇಶಿಸುವುದರಲ್ಲಿಯೂ ಕಷ್ಟಪಡುವವರನ್ನು ಎರಡುಪಟ್ಟು ಗೌರವಕ್ಕೆ ಯೋಗ್ಯರೆಂದು ಎಣಿಸಬೇಕು.
ಇಬ್ರಿ 13:7ನಿಮಗೆ ದೇವರ ವಾಕ್ಯವನ್ನು ಬೋಧಿಸಿದ ನಿಮ್ಮ ಸಭಾನಾಯಕರನ್ನು ನೆನಪುಮಾಡಿಕೊಳ್ಳಿರಿ. ಅವರು ಜೀವಾಂತ್ಯದವರೆಗೆ ಯಾವ ರೀತಿ ನಡೆದುಕೊಂಡುರೆಂಬುದನ್ನು ನೆನಪಿಸಿಕೊಂಡು ಮತ್ತು ಅವರ ನಂಬಿಕೆಯನ್ನು ಅನುಸರಿಸಿರಿ.
1 ಪೇತ್ರ 5:5ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”
ಅ. ಕೃ 20:28ಕರ್ತನು ತನ್ನ ಸ್ವಂತ ರಕ್ತದಿಂದ ಸಂಪಾದಿಸಿಕೊಂಡ ದೇವರ ಸಭೆಯನ್ನು ಪರಿಪಾಲಿಸುವುದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಗುಂಪಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವುದರಿಂದ ನಿಮ್ಮ ವಿಷಯದಲ್ಲಿಯೂ, ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.
1 ಪೇತ್ರ 5:2–3ನಿಮ್ಮ ಮೇಲ್ವಿಚಾರಣೆಯಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲವಂತದಿಂದಲ್ಲ ದೇವರ ಚಿತ್ತಾನುಸಾರ ಇಷ್ಟಪೂರ್ವಕವಾಗಿ, ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧ ಮನಸ್ಸಿನಿಂದಲೇ ಮೇಲ್ವಿಚಾರಣೆ ಮಾಡಿರಿ. ನಿಮ್ಮ ವಶಕ್ಕೆ ಒಪ್ಪಿಸಿಕೊಟ್ಟಿರುವವರ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.
1 ಕೊರಿ 16:16ನಾನು ನಿಮ್ಮಲ್ಲಿ ಬೇಡುವುದೇನಂದರೆ, ಸೇವೆಯಲ್ಲಿ ನಮಗೆ ಸಹಾಯಮಾಡುವ ಹಾಗೂ ಪ್ರಯಾಸಪಡುವವರೆಲ್ಲರಿಗೂ ನೀವು ಅಧೀನರಾಗಿರಬೇಕು.
ಯೆರೆ 13:17ನೀವು ಕೇಳದಿದ್ದರೆ ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿಮಿತ್ತ ಗೋಳಾಡುವುದು. ಯೆಹೋವನ ಮಂದೆಯು ಸೆರೆಯಾಗಿ ಹೋದುದರಿಂದ ಬಹಳವಾಗಿ ಅಳುವೆನು, ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವುದು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು