Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಇಬ್ರಿಯರಿಗೆ 13:4

ಬೈಬಲ್ ವಚನ · IRV

ಇಬ್ರಿಯರಿಗೆ 13:4

ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.

ಇಡೀ ಅಧ್ಯಾಯ ಓದಿ: ಇಬ್ರಿಯರಿಗೆ 13

ಸಂದರ್ಭದಲ್ಲಿ

1ಸಹೋದರ ಪ್ರೀತಿಯನ್ನು ಸತತವಾಗಿ ತೋರಿಸಿರಿ.

2ಅತಿಥಿ ಸತ್ಕಾರಮಾಡುವುದನ್ನು ಅಲಕ್ಷ್ಯಮಾಡಬೇಡಿರಿ. ಏಕೆಂದರೆ ಅದನ್ನು ಮಾಡುವುದರಲ್ಲಿ ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.

3ಸೆರೆಯವರ ಸಂಗಡ ನೀವೂ ಜೊತೆಸೆರೆಯವರೆಂದು ತಿಳಿದು, ಅವರಿಗುಂಟಾದ ಶಾರೀರಿಕ ಕಷ್ಟಾನುಭವವು ನಿಮಗೂ ಸಂಭವಿಸಿತೆಂದು ಭಾವಿಸಿಕೊಂಡು, ಅವರನ್ನು ಜ್ಞಾಪಕಮಾಡಿಕೊಳ್ಳಿರಿ.

4ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.

5ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ.

6ಆದ್ದರಿಂದ, “ಕರ್ತನು ನನ್ನ ಸಹಾಯಕನು ನಾನು ಭಯಪಡುವುದಿಲ್ಲ, ಮನುಷ್ಯನು ನನಗೆ ಏನು ಮಾಡಿಯಾನು?” ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.

7ನಿಮಗೆ ದೇವರ ವಾಕ್ಯವನ್ನು ಬೋಧಿಸಿದ ನಿಮ್ಮ ಸಭಾನಾಯಕರನ್ನು ನೆನಪುಮಾಡಿಕೊಳ್ಳಿರಿ. ಅವರು ಜೀವಾಂತ್ಯದವರೆಗೆ ಯಾವ ರೀತಿ ನಡೆದುಕೊಂಡುರೆಂಬುದನ್ನು ನೆನಪಿಸಿಕೊಂಡು ಮತ್ತು ಅವರ ನಂಬಿಕೆಯನ್ನು ಅನುಸರಿಸಿರಿ.

ಇಬ್ರಿಯರಿಗೆ 13

ಇಂಗ್ಲಿಷ್‌ನಲ್ಲಿ

Berean Standard BibleHebrews 13:4Marriage should be honored by all and the marriage bed kept undefiled, for God will judge the sexually immoral and adulterers.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಆದಿ 2:24ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು.
ಗಲಾ 5:19ಶರೀರಭಾವದ ಸ್ವಭಾವಗಳು ಪ್ರತ್ಯಕ್ಷವಾಗಿಯೇ ಇವೆ, ಅದು ಯಾವುವೆಂದರೆ, ಜಾರತ್ವ, ಬಂಡುತನ, ನಾಚಿಕೆಗೇಡಿತನ,
ಆದಿ 1:27–28ಹೀಗೆ ದೇವರು; “ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದನು. ದೇವರ ಸ್ವರೂಪದಲ್ಲಿ ಅವನನ್ನು ಉಂಟುಮಾಡಿದನು. ಅವರನ್ನು ಗಂಡುಹೆಣ್ಣಾಗಿ ಸೃಷ್ಟಿ ಮಾಡಿದನು.” ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ, “ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿರಿ. ಭೂಮಿಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನ ಮಾಡಿರಿ” ಎಂದು ಅವರಿಗೆ ಹೇಳಿದನು.
1 ಕೊರಿ 6:9ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಸುಳ್ಳನ್ನು ನಂಬಬೇಡಿರಿ. ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಪುರುಷಗಾಮಿಗಳು, ಕಳ್ಳರು,
ಗಲಾ 5:21ಮತ್ಸರ, ಕುಡುಕುತನ, ಗಲಭೆ, ಢಂಭಾಚಾರ ಇಂಥವುಗಳೇ. ಇಂಥ ಕಾರ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂದು ನಾನು ಈ ಮೊದಲು ಹೇಳಿದಂತೆಯೇ ಈಗಲೂ ನಿಮ್ಮನ್ನು ಎಚ್ಚರಿಸುತ್ತೇನೆ.
1 ಕೊರಿ 5:13ಹೊರಗಿರುವವರನ್ನು ತೀರ್ಪುಮಾಡುವವನು ದೇವರು. “ನಿಮ್ಮ ಮಧ್ಯದಲ್ಲಿರುವ ಆ ದುಷ್ಟ ವ್ಯಕ್ತಿಯನ್ನು ತೆಗೆದುಹಾಕಿರಿ.”
ಕೊಲೊ 3:5–6ಆದುದರಿಂದ ನಿಮ್ಮಲ್ಲಿರುವ ಲೌಕಿಕ ಆಸೆಗಳು ಅಂದರೆ, ಜಾರತ್ವ, ಅಶುದ್ಧತ್ವ, ಕಾಮಾಭಿಲಾಷೆ, ಕೆಟ್ಟ ಅಭಿಲಾಷೆ ಮತ್ತು ವಿಗ್ರಹಾರಾಧನೆಗೆ ಸಮವಾಗಿರುವ ದುರಾಶೆ ಇಂಥವುಗಳನ್ನು ಸಾಯಿಸಿರಿ. ಇವುಗಳ ನಿಮಿತ್ತ ಅವಿಧೇಯರಾಗುವವರ ಮೇಲೆ ದೇವರ ಕೋಪವು ಉಂಟಾಗುತ್ತದೆ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು