ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಇಬ್ರಿಯರಿಗೆ 13:5
ಬೈಬಲ್ ವಚನ · IRV
ಇಬ್ರಿಯರಿಗೆ 13:5
ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ.
ಸಂದರ್ಭದಲ್ಲಿ
2ಅತಿಥಿ ಸತ್ಕಾರಮಾಡುವುದನ್ನು ಅಲಕ್ಷ್ಯಮಾಡಬೇಡಿರಿ. ಏಕೆಂದರೆ ಅದನ್ನು ಮಾಡುವುದರಲ್ಲಿ ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.
3ಸೆರೆಯವರ ಸಂಗಡ ನೀವೂ ಜೊತೆಸೆರೆಯವರೆಂದು ತಿಳಿದು, ಅವರಿಗುಂಟಾದ ಶಾರೀರಿಕ ಕಷ್ಟಾನುಭವವು ನಿಮಗೂ ಸಂಭವಿಸಿತೆಂದು ಭಾವಿಸಿಕೊಂಡು, ಅವರನ್ನು ಜ್ಞಾಪಕಮಾಡಿಕೊಳ್ಳಿರಿ.
4ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.
5ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ.
6ಆದ್ದರಿಂದ, “ಕರ್ತನು ನನ್ನ ಸಹಾಯಕನು ನಾನು ಭಯಪಡುವುದಿಲ್ಲ, ಮನುಷ್ಯನು ನನಗೆ ಏನು ಮಾಡಿಯಾನು?” ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.
7ನಿಮಗೆ ದೇವರ ವಾಕ್ಯವನ್ನು ಬೋಧಿಸಿದ ನಿಮ್ಮ ಸಭಾನಾಯಕರನ್ನು ನೆನಪುಮಾಡಿಕೊಳ್ಳಿರಿ. ಅವರು ಜೀವಾಂತ್ಯದವರೆಗೆ ಯಾವ ರೀತಿ ನಡೆದುಕೊಂಡುರೆಂಬುದನ್ನು ನೆನಪಿಸಿಕೊಂಡು ಮತ್ತು ಅವರ ನಂಬಿಕೆಯನ್ನು ಅನುಸರಿಸಿರಿ.
8ಯೇಸು ಕ್ರಿಸ್ತನು ನಿನ್ನೇ ಇದ್ದ ಹಾಗೆಯೇ, ಈ ಹೊತ್ತು, ನಿರಂತರವೂ ಇರುವನು.
ಇಂಗ್ಲಿಷ್ನಲ್ಲಿ
Keep your lives free from the love of money and be content with what you have, for God has said: “Never will I leave you, never will I forsake you.”ಹಳೆಯ ಒಡಂಬಡಿಕೆಯಿಂದ ಉಲ್ಲೇಖ
ನೀವು ಶೂರರಾಗಿ ಧೈರ್ಯದಿಂದ ಇರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ ಸಂಗಡ ಇರುತ್ತಾನಲ್ಲಾ; ಆತನು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ” ಎಂದು ಹೇಳಿದನು.ನಿನ್ನ ಜೀವಮಾನದಲ್ಲೆಲ್ಲಾ ಒಬ್ಬನೂ ನಿನ್ನ ಮುಂದೆ ನಿಲ್ಲನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರುವೆನು.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ಯೆಹೋವನು ತಾನೇ ನಿನ್ನ ಮುಂದೆ ಹೋಗುವನು; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ, ಕೈಬಿಡುವುದಿಲ್ಲ; ಅಂಜಬೇಡ, ಧೈರ್ಯದಿಂದಿರು” ಎಂದು ಹೇಳಿದನು.ಯೆಹೋವನು ದಯದಿಂದ ನಿಮ್ಮನ್ನು ಸ್ವಕೀಯಜನವನ್ನಾಗಿ ಆರಿಸಿಕೊಂಡ ಮೇಲೆ ಆತನು ತನ್ನ ಮಹೋನ್ನತ ನಾಮದ ನಿಮಿತ್ತ ನಿಮ್ಮನ್ನು ಕೈಬಿಡುವುದೇ ಇಲ್ಲ.ಬಾಯಾರಿ ನಾಲಿಗೆ ಒಣಗಿ ನೀರನ್ನು ಹುಡುಕಿ ಹೊಂದದ ದೀನದರಿದ್ರರಿಗೆ ಯೆಹೋವನೆಂಬ ನಾನು ಪ್ರಸನ್ನನಾಗುವೆನು, ಇಸ್ರಾಯೇಲಿನ ದೇವರಾದ ನಾನು ಅವರನ್ನು ಕೈಬಿಡೆನು.ನಾನು ಬಾಲಕನಾಗಿದ್ದೆನು, ಈಗ ವೃದ್ಧನಾಗಿದ್ದೇನೆ; ಈ ವರೆಗೂ ನೀತಿವಂತನು ದಿಕ್ಕಿಲ್ಲದೆ ಬಿದ್ದಿರುವುದನ್ನಾಗಲಿ, ಅವನ ಸಂತತಿಯವರು ಭಿಕ್ಷೆಬೇಡಿ ತಿನ್ನುವುದನ್ನಾಗಲಿ ನೋಡಲಿಲ್ಲ.ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.ಆ ಮೇಲೆ ದಾವೀದನು ತನ್ನ ಮಗನಾದ ಸೊಲೊಮೋನನಿಗೆ, “ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು, ಅಂಜಬೇಡ, ಕಳವಳಗೊಳ್ಳಬೇಡ, ನನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇರುತ್ತಾನೆ. ಆತನು ತನ್ನ ಆಲಯದ ಎಲ್ಲಾ ಕೆಲಸಗಳು ತೀರುವವರೆಗೂ ನಿನ್ನನ್ನು ಕೈಬಿಡುವುದಿಲ್ಲ ತೊರೆಯುವುದಿಲ್ಲ.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು