Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಇಬ್ರಿಯರಿಗೆ 13:8

ಬೈಬಲ್ ವಚನ · IRV

ಇಬ್ರಿಯರಿಗೆ 13:8

ಯೇಸು ಕ್ರಿಸ್ತನು ನಿನ್ನೇ ಇದ್ದ ಹಾಗೆಯೇ, ಈ ಹೊತ್ತು, ನಿರಂತರವೂ ಇರುವನು.

ಇಡೀ ಅಧ್ಯಾಯ ಓದಿ: ಇಬ್ರಿಯರಿಗೆ 13

ಸಂದರ್ಭದಲ್ಲಿ

5ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ.

6ಆದ್ದರಿಂದ, “ಕರ್ತನು ನನ್ನ ಸಹಾಯಕನು ನಾನು ಭಯಪಡುವುದಿಲ್ಲ, ಮನುಷ್ಯನು ನನಗೆ ಏನು ಮಾಡಿಯಾನು?” ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.

7ನಿಮಗೆ ದೇವರ ವಾಕ್ಯವನ್ನು ಬೋಧಿಸಿದ ನಿಮ್ಮ ಸಭಾನಾಯಕರನ್ನು ನೆನಪುಮಾಡಿಕೊಳ್ಳಿರಿ. ಅವರು ಜೀವಾಂತ್ಯದವರೆಗೆ ಯಾವ ರೀತಿ ನಡೆದುಕೊಂಡುರೆಂಬುದನ್ನು ನೆನಪಿಸಿಕೊಂಡು ಮತ್ತು ಅವರ ನಂಬಿಕೆಯನ್ನು ಅನುಸರಿಸಿರಿ.

8ಯೇಸು ಕ್ರಿಸ್ತನು ನಿನ್ನೇ ಇದ್ದ ಹಾಗೆಯೇ, ಈ ಹೊತ್ತು, ನಿರಂತರವೂ ಇರುವನು.

9ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಿಕೊಳ್ಳಬೇಡಿರಿ. ಏಕೆಂದರೆ ದೇವರ ಕೃಪೆಯಿಂದ ಹೃದಯವನ್ನು ದೃಢಪಡಿಸಿಕೊಳ್ಳುವುದು ಒಳ್ಳೆಯದು. ಭೋಜನ ಪದಾರ್ಥಗಳ ಕುರಿತಾದ ನಿಯಮಗಳನ್ನು ಅನುಸರಿಸುವವರಿಗೆ ಏನೂ ಪ್ರಯೋಜನವಾಗುವುದಿಲ್ಲ.

10ನಮಗೊಂದು ಯಜ್ಞವೇದಿ ಉಂಟು ಈ ಯಜ್ಞವೇದಿಯ ಪದಾರ್ಥಗಳನ್ನು ತಿನ್ನುವುದಕ್ಕೆ ಗುಡಾರದಲ್ಲಿ ಸೇವೆ ನಡೆಸುವವರಿಗೆ ಹಕ್ಕಿಲ್ಲ.

11ಮಹಾಯಾಜಕನು ದೋಷಪರಿಹಾರಕ ಯಜ್ಞದ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ಥಾನದೊಳಗೆ ಹೋಗುತ್ತಾನೆ, ಆದರೆ ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲ.

ಇಬ್ರಿಯರಿಗೆ 13

ಇಂಗ್ಲಿಷ್‌ನಲ್ಲಿ

Berean Standard BibleHebrews 13:8Jesus Christ is the same yesterday and today and forever.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಮಲಾ 3:6“ಆದರೂ ಯೆಹೋವನಾದ ನಾನು ಮಾರ್ಪಟ್ಟಿಲ್ಲ. ಆದುದರಿಂದ ಯಾಕೋಬ ಸಂತತಿಯವರೇ ನೀವು ಅಳಿಯದೆ ಉಳಿದಿದ್ದೀರಿ.”
ಯಾಕೋ 1:17ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು ಸಕಲ ವಿಧವಾದ ಬೆಳಕಿಗೆ ಮೂಲಕರ್ತನಾದ ದೇವರಿಂದ ಇಳಿದು ಬರುತ್ತವೆ; ಆತನು ನೆರಳಿನಂತೆ ಬದಲಾಗುವವನಲ್ಲ, ಚಂಚಲಚಿತ್ತನೂ ಅಲ್ಲ.
ಪ್ರಕ 1:8“ನಾನೇ ಆದಿಯೂ ಅಂತ್ಯವೂ, ಇರುವಾತನೂ, ಇದ್ದಾತನೂ, ಬರುವಾತನೂ, ಸರ್ವಶಕ್ತನೂ” ಎಂದು ದೇವರಾದ ಕರ್ತನು ಹೇಳುತ್ತಾನೆ.
ಇಬ್ರಿ 1:12ಅವುಗಳನ್ನು ಮೇಲಂಗಿಯಂತೆ ಮಡಿಸುತ್ತೀ ಮತ್ತು ಅವು ವಸ್ತ್ರದಂತೆ ಬದಲಾಗುವವು. ನೀನಾದರೂ ಅನನ್ಯನು. ನಿನ್ನ ವರ್ಷಗಳಿಗೆ ಅಂತ್ಯವೇ ಇಲ್ಲ” ಎಂತಲೂ ಹೇಳುತ್ತಾನೆ.
ಯೆಶಾ 44:6ಇಸ್ರಾಯೇಲರ ಅರಸನೂ, ವಿಮೋಚಕನೂ ಆಗಿರುವ ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, “ನಾನೇ ಆದಿಯೂ, ನಾನೇ ಅಂತ್ಯವೂ. ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.
ಕೀರ್ತ 102:27–28ನೀನಾದರೋ ಏಕರೀತಿಯಾಗಿರುತ್ತಿ; ನಿನ್ನ ವರ್ಷಗಳು ಮುಗಿದುಹೋಗುವುದಿಲ್ಲ. ನಿನ್ನ ಸೇವಕರ ಮಕ್ಕಳು ಬಾಳುವರು. ಅವರ ಸಂತತಿಯವರು ನಿನ್ನ ಸನ್ನಿಧಿಯಲ್ಲಿ ಸ್ಥಿರವಾಗಿರುವರು” ಎಂದು ಮೊರೆಯಿಡುತ್ತೇನೆ.
ಕೀರ್ತ 90:2ಬೆಟ್ಟಗಳು ಉಂಟಾಗುವುದಕ್ಕಿಂತ ಮೊದಲೇ, ಭೂಮಿಯೂ ಅದರ ದೇಶಗಳೂ ನಿರ್ಮಾಣವಾಗುವುದಕ್ಕಿಂತ ಮೊದಲೇ, ಯುಗಯುಗಾಂತರಗಳಲ್ಲಿಯೂ ನೀನೇ ದೇವರು.
ಕೀರ್ತ 103:17ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳವರ ಮೇಲೆ, ಆತನ ದಯೆಯು ಯುಗಯುಗಾಂತರಗಳವರೆಗೂ ಇರುತ್ತದೆ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು