ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಇಬ್ರಿಯರಿಗೆ 4:12
ಬೈಬಲ್ ವಚನ · IRV
ಇಬ್ರಿಯರಿಗೆ 4:12
ಏಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಸಕ್ರಿಯವಾದದ್ದು ಮತ್ತು ಯಾವ ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು ಆಗಿದ್ದು, ಪ್ರಾಣ ಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದಾಗಿದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.
ಸಂದರ್ಭದಲ್ಲಿ
9ಆದಕಾರಣ ದೇವರ ಜನರಿಗೆ ಸಬ್ಬತೆಂಬ ವಿಶ್ರಾಂತಿಯು ಇನ್ನೂ ಉಂಟು.
10ಹೇಗೆಂದರೆ ದೇವರು ತನ್ನ ಕೆಲಸಗಳನ್ನು ಮುಗಿಸಿ ಹೇಗೆ ವಿಶ್ರಮಿಸಿಕೊಂಡನೋ ಹಾಗೆಯೇ ಆತನ ವಿಶ್ರಾಂತಿಯಲ್ಲಿ ಸೇರಿರುವವನು ಸಹ ತನ್ನ ಕೆಲಸಗಳನ್ನು ಮುಗಿಸಿ ವಿಶ್ರಮಿಸಿಕೊಂಡಿದ್ದಾನೆ.
11ಆದ್ದರಿಂದ ನಾವು ಈ ವಿಶ್ರಾಂತಿಯಲ್ಲಿ ಸೇರುವುದಕ್ಕೆ ಪ್ರಯತ್ನಿಸೋಣ. ನಮ್ಮಲ್ಲಿ ಒಬ್ಬರಾದರೂ ಅವರಂತೆ ಅವಿಧೇಯರಾಗಿ ಬಿದ್ದುಹೋಗದೆ ಇರೋಣ.
12ಏಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಸಕ್ರಿಯವಾದದ್ದು ಮತ್ತು ಯಾವ ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು ಆಗಿದ್ದು, ಪ್ರಾಣ ಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದಾಗಿದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.
13ಆತನ ದೃಷ್ಟಿಗೆ ಮರೆಯಾಗಿರುವ ಒಂದು ಸೃಷ್ಟಿಯೂ ಇಲ್ಲ. ಆತನ ಕಣ್ಣಿಗೆ ಮರೆಯಾದದ್ದು ಒಂದೂ ಇಲ್ಲ ಎಲ್ಲವೂ ನಗ್ನವಾಗಿಯೂ ಬಟ್ಟಬಯಲಾಗಿಯೂ ಇದೆ. ಅಂಥವನಿಗೆ ನಾವು ಲೆಕ್ಕಕೊಡಬೇಕಾಗಿದೆ.
14ಆಕಾಶಗಳನ್ನು ದಾಟಿಹೋದ ದೇವಕುಮಾರನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿದ್ದಾನೆ. ಆದುದರಿಂದ ನಮಗಿರುವ ನಂಬಿಕೆಯನ್ನು ದೃಢವಾಗಿ ಹಿಡಿಯೋಣ.
15ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ.
ಇಂಗ್ಲಿಷ್ನಲ್ಲಿ
For the word of God is living and active. Sharper than any double-edged sword, it pierces even to dividing soul and spirit, joints and marrow. It judges the thoughts and intentions of the heart.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ಹೊಟ್ಟೆಲ್ಲಿ? ಕಾಳೆಲ್ಲಿ? ನನ್ನ ವಾಕ್ಯವು ಬೆಂಕಿಗೂ, ಬಂಡೆಯನ್ನು ಒಡೆದುಬಿಡುವ ಚಮಟಿಗೆಗೂ ಸಮಾನವಾಗಿದೆಯಲ್ಲಾ. ಯೆಹೋವನೇ ಇದನ್ನು ನುಡಿದಿದ್ದಾನೆ.ಹಾಗೆಯೇ ನನ್ನ ಬಾಯಿಂದ ಹೊರಟ ಮಾತು, ನನ್ನ ಇಷ್ಟಾರ್ಥವನ್ನು ನೆರವೇರಿಸಿ, ನಾನು ಉದ್ದೇಶಿಸಿದ್ದನ್ನು ಕೈಗೂಡಿಸಿದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವುದಿಲ್ಲ.ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣವನ್ನು ಇಟ್ಟುಕೊಂಡು ಪವಿತ್ರಾತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿದುಕೊಳ್ಳಿರಿ.ನಿನ್ನ ವಾಕ್ಯವಿವರಣೆ ಬೆಳಕನ್ನು ಕೊಡುತ್ತದೆ, ಸರಳ ಹೃದಯರಿಗೆ ವಿವೇಚನೆಯನ್ನು ನೀಡುತ್ತದೆ.ಏಕೆಂದರೆ ನೀವು ಹೊಸದಾಗಿ ಹುಟ್ಟಿರುವಂಥದ್ದು ನಾಶವಾಗುವ ವಾಕ್ಯದಿಂದದ್ದಲ್ಲ. ಆದರೆ ನಾಶವಾಗದಂಥ ವಾಕ್ಯದಿಂದಲೇ. ಅದು ಸದಾ ಜೀವವುಳ್ಳ ದೇವರವಾಕ್ಯದ ಮೂಲಕ ಉಂಟಾಯಿತು.ನನ್ನ ಬಾಯಿಯನ್ನು ಹದವಾದ ಖಡ್ಗವನ್ನಾಗಿ ಮಾಡಿ, ತನ್ನ ಕೈಯ ನೆರಳಿನಲ್ಲಿ ನನ್ನನ್ನು ಹುದುಗಿಸಿದ್ದಾನೆ. ನನ್ನನ್ನು ಚೂಪಾದ ಬಾಣವನ್ನಾಗಿ ರೂಪಿಸಿ, ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ.ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು, ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಡುತ್ತಿತ್ತು. ಆತನ ಮುಖವು ಪ್ರಬಲವಾಗಿ ಪ್ರಕಾಶಿಸುವ ಸೂರ್ಯನಂತಿತ್ತು.ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ಅದು ಸತ್ಯವಾಗಿ ದೇವರ ವಾಕ್ಯವೇ. ಆ ವಾಕ್ಯವು, ನಂಬುವವರಾದ ನಿಮ್ಮೊಳಗೆ ಕೆಲಸ ಮಾಡುತ್ತದೆ.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು