Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಇಬ್ರಿಯರಿಗೆ 9:27

ಬೈಬಲ್ ವಚನ · IRV

ಇಬ್ರಿಯರಿಗೆ 9:27

ಒಂದೇ ಸಾರಿ ಸಾಯುವುದೂ ಆ ಮೇಲೆ ನ್ಯಾಯತೀರ್ಪು ಮನುಷ್ಯರಿಗೆ ಹೇಗೆ ನೇಮಕವಾಗಿದೆಯೋ,

ಇಡೀ ಅಧ್ಯಾಯ ಓದಿ: ಇಬ್ರಿಯರಿಗೆ 9

ಸಂದರ್ಭದಲ್ಲಿ

24ಯಾಕೆಂದರೆ ಕ್ರಿಸ್ತನು ನಿಜವಾದ ದೇವಾಲಯಕ್ಕೆ ಪ್ರತಿಬಿಂಬವಾಗಿ ಕೈಯಿಂದ ಕಟ್ಟಲ್ಪಟ್ಟ ಪವಿತ್ರ ಸ್ಥಳವನ್ನು ಪ್ರವೇಶಿಸದೆ, ದೇವರ ಸನ್ನಿಧಿಯಲ್ಲಿ ನಮಗೋಸ್ಕರ ಈಗ ಪ್ರತ್ಯಕ್ಷನಾಗಲು ಪರಲೋಕದೊಳಗೆ ಪ್ರವೇಶಿಸಿದನು.

25ಇದಲ್ಲದೆ, ಮಹಾಯಾಜಕನು ವರ್ಷ ವರ್ಷವೂ ಪ್ರಾಣಿಗಳ ರಕ್ತವನ್ನು ತೆಗೆದುಕೊಂಡು ಅತಿ ಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವ ಪ್ರಕಾರ, ಕ್ರಿಸ್ತನು ತನ್ನನ್ನು ಅನೇಕ ಸಾರಿ ಸಮರ್ಪಿಸುವುದಕ್ಕೆ ಅಲ್ಲಿಗೆ ಪ್ರವೇಶಿಸಲಿಲ್ಲ.

26ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕಾದಿಯಿಂದ ಎಷ್ಟೋ ಸಾರಿ ಬಾಧೆಪಡಬೇಕಾಗಿತ್ತು. ಆದರೆ ಒಂದೇ ಸಾರಿ, ಯುಗಗಳ ಸಮಾಪ್ತಿಯವರೆಗೂ, ಆತನು ಪಾಪ ನಿವಾರಣೆ ಮಾಡುವ ಉದ್ದೇಶದಿಂದ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷನಾದನು.

27ಒಂದೇ ಸಾರಿ ಸಾಯುವುದೂ ಆ ಮೇಲೆ ನ್ಯಾಯತೀರ್ಪು ಮನುಷ್ಯರಿಗೆ ಹೇಗೆ ನೇಮಕವಾಗಿದೆಯೋ,

28ಹಾಗೆಯೇ ಕ್ರಿಸ್ತನು ಸಹ ಬಹು ಜನರ ಪಾಪಗಳನ್ನು ಹೊತ್ತು ಕೊಳ್ಳುವುದಕ್ಕೊಸ್ಕರ ಒಂದೇ ಸಾರಿ ಸಮರ್ಪಿತನಾದನು. ಆತನು ಎರಡನೆಯ ಸಾರಿ ಪ್ರತ್ಯಕ್ಷನಾಗುವಂಥದ್ದು ಪಾಪವನ್ನು ಪರಿಹರಿಸುವುದಕ್ಕಾಗಿಯಲ್ಲ ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನು ಉಂಟುಮಾಡುವುದಕ್ಕಾಗಿಯೇ.

ಇಬ್ರಿಯರಿಗೆ 9

ಇಂಗ್ಲಿಷ್‌ನಲ್ಲಿ

Berean Standard BibleHebrews 9:27Just as man is appointed to die once, and after that to face judgment,

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

2 ಕೊರಿ 5:10ಯಾಕೆಂದರೆ ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡೆಸಿದ ಒಳ್ಳೆಯ ಅಥವಾ ಕೆಟ್ಟ ಕಾರ್ಯಕ್ಕೆ ತಕ್ಕ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ ಕ್ರಿಸ್ತನ ನ್ಯಾಯಾಸನದ ಮುಂದೆ ಯಥಾಸ್ಥಿತಿಯಲ್ಲಿ ಕಾಣಿಸಿಕೊಳ್ಳಬೇಕಾಗಿದೆ.
ಪ್ರಸ 12:14ಒಳ್ಳೆಯದಾಗಲೀ ಅಥವಾ ಕೆಟ್ಟದ್ದಾಗಲೀ, ಸಕಲ ರಹಸ್ಯ ಸಂಗತಿಗಳನ್ನು ವಿಮರ್ಶಿಸಿ, ನ್ಯಾಯವಿಚಾರಣೆಗೆ ದೇವರು ಪ್ರತಿಯೊಂದು ಕಾರ್ಯವನ್ನು ಗುರಿಮಾಡುವನು.
ಪ್ರಸ 12:7ಮಣ್ಣು ಭೂಮಿಗೆ ಸೇರಿ ಇದ್ದ ಹಾಗಾಗುವುದು, ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. ಇಷ್ಟರೊಳಗಾಗಿ ನಿನ್ನ ಸೃಷ್ಟಿ ಕರ್ತನನ್ನು ಸ್ಮರಿಸದಿರಬೇಡ.
ಅ. ಕೃ 17:31ಏಕೆಂದರೆ, ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವುದಕ್ಕೆ ಒಂದು ದಿನವನ್ನು ಗೊತ್ತು ಮಾಡಿದ್ದಾನೆ. ಅವನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ಇದನ್ನು ನಂಬುವುದಕ್ಕೆ ಎಲ್ಲರಿಗೂ ದೃಷ್ಟಾಂತವನ್ನು ಕೊಟ್ಟಿದ್ದಾನೆ” ಅಂದನು.
2 ಸಮು 14:14ನಾವು ಸಾಯುವವರು. ನೆಲದ ಮೇಲೆ ಚೆಲ್ಲಿದ ನೀರು ಪುನಃ ತೆಗೆದುಕೊಳ್ಳಲು ಆಗದಂತೆ ಇರುವ ನೀರಿನಂತೆ ನಾವು. ಮನುಷ್ಯರ ಪ್ರಾಣವನ್ನು ತೆಗೆಯುವುದಕ್ಕೆ ದೇವರಿಗೆ ಇಷ್ಟವಿಲ್ಲ. ತಳ್ಳಲ್ಪಟ್ಟವನು ತಿರುಗಿ ತನ್ನ ಬಳಿಗೆ ಬರುವ ಹಾಗೆ ಆತನು ಸದುಪಾಯಗಳನ್ನು ಕಲ್ಪಿಸುವವನಾಗಿರುತ್ತಾನೆ.
ಯೋಹಾ 5:26–29ತಂದೆಯು ತಾನು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ, ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಮಾಡಿದ್ದಾನೆ. ಮಗನು ಮನುಷ್ಯಕುಮಾರನಾಗಿರುವುದರಿಂದ ನ್ಯಾಯತೀರ್ಪು ಮಾಡುವ ಅಧಿಕಾರವನ್ನೂ ತಂದೆ ಆತನಿಗೆ ಕೊಟ್ಟಿದ್ದಾನೆ. ಅದಕ್ಕೆ ಆಶ್ಚರ್ಯಪಡಬೇಡಿರಿ. ಒಂದು ಕಾಲ ಬರುತ್ತದೆ, ಆಗ ಸಮಾಧಿಗಳಲ್ಲಿರುವವರೆಲ್ಲಾ ಆತನ ಸ್ವರವನ್ನು ಕೇಳಿ, ಎದ್ದು ಹೊರಗೆ ಬರುವರು. ಒಳ್ಳೆಯದನ್ನು ಮಾಡಿದವರಿಗೆ ನಿತ್ಯಜೀವಕ್ಕಾಗಿ ಪುನರುತ್ಥಾನವಾಗುವುದು. ಕೆಟ್ಟದ್ದನ್ನು ಮಾಡಿದವರು ಖಂಡನೆಗಾಗಿ ಪುನರುತ್ಥಾನವನ್ನೂ ಹೊಂದುವರು.
ಪ್ರಸ 9:5ಜೀವಿಸುವವರಿಗೆ ಸಾಯುತ್ತೇವೆಂಬ ತಿಳಿವಳಿಕೆಯು ಉಂಟು. ಸತ್ತವರಿಗೋ ಯಾವ ತಿಳಿವಳಿಕೆಯೂ ಇಲ್ಲ. ಅವರಿಗೆ ಇನ್ನು ಮೇಲೆ ಪ್ರತಿಫಲವು ಇಲ್ಲ. ಅವರ ಜ್ಞಾಪಕವೇ ಇಲ್ಲ.
ಯೂದ 1:15ಎಲ್ಲರಿಗೂ ನ್ಯಾಯತೀರಿಸುವುದಕ್ಕೂ, ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ಭಕ್ತಿಯಿಲ್ಲದ ಅವರ ಎಲ್ಲಾ ಕೃತ್ಯಗಳ ವಿಷಯವಾಗಿ ಮತ್ತು ಭಕ್ತಿಯಿಲ್ಲದ ಪಾಪಿಷ್ಠರು ತನಗೆ ವಿರೋಧವಾಗಿ ಹೇಳಿದ ಎಲ್ಲಾ ಕಠಿಣವಾದ ಮಾತುಗಳ ವಿಷಯವಾಗಿ ಅವರನ್ನು ಖಂಡಿಸುವುದಕ್ಕೆ ಬಂದಿರುವನು” ಎಂಬುದಾಗಿ ಪ್ರವಾದಿಸಿದನು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು