Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಯೆಶಾಯನು 40:31

ಬೈಬಲ್ ವಚನ · IRV

ಯೆಶಾಯನು 40:31

ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು ಏರುವರು; ಅವರು ಓಡಿ ದಣಿಯರು, ನಡೆದು ಬಳಲರು.

ಇಡೀ ಅಧ್ಯಾಯ ಓದಿ: ಯೆಶಾಯನು 40

ಸಂದರ್ಭದಲ್ಲಿ

28ನೀನು ಗ್ರಹಿಸಲಿಲ್ಲವೋ? ಕೇಳಲಿಲ್ಲವೋ? ಯೆಹೋವನು ನಿರಂತರ ದೇವರೂ, ಭೂಮಿಯ ಕಟ್ಟಕಡೆಗಳನ್ನು ನಿರ್ಮಿಸಿದವನೂ ಆಗಿದ್ದಾನೆ. ಆತನು ದಣಿದು ಬಳಲುವುದಿಲ್ಲ, ಆತನ ವಿವೇಕವು ಪರಿಶೋಧನೆಗೆ ಅಗಮ್ಯ.

29ಸೋತವನಿಗೆ ತ್ರಾಣವನ್ನು ಅನುಗ್ರಹಿಸಿ, ಬಲಹೀನನಿಗೆ ಬಹು ಬಲವನ್ನು ದಯಪಾಲಿಸುತ್ತಾನೆ.

30ಯುವಕರೂ ದಣಿದು ಬಳಲುವರು, ತರುಣರೂ ಸೊರಗಿ ಮುಗ್ಗರಿಸುವರು.

31ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು ಏರುವರು; ಅವರು ಓಡಿ ದಣಿಯರು, ನಡೆದು ಬಳಲರು.

ಯೆಶಾಯನು 40

ಇಂಗ್ಲಿಷ್‌ನಲ್ಲಿ

Berean Standard BibleIsaiah 40:31But those who wait upon the LORD will renew their strength; they will mount up with wings like eagles; they will run and not grow weary, they will walk and not faint.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಪ್ರಲಾ 3:25–26ಯೆಹೋವನು ತನ್ನನ್ನು ನಿರೀಕ್ಷಿಸುವವರಿಗೂ ಮತ್ತು ಹುಡುಕುವವರಿಗೂ ಮಹೋಪಕಾರಿಯಾಗಿದ್ದಾನೆ. ಯೆಹೋವನ ರಕ್ಷಣಕಾರ್ಯವನ್ನು ಎದುರುನೋಡುತ್ತಾ ಶಾಂತವಾಗಿ ಕಾದುಕೊಂಡಿರುವುದು ಒಳ್ಳೇಯದು.
2 ಕೊರಿ 4:16ಆದ್ದರಿಂದ ನಾವು ಧೈರ್ಯಗೆಡುವುದಿಲ್ಲ. ನಮ್ಮ ದೇಹವು ನಾಶವಾಗುತ್ತಾ ಇದ್ದರೂ ನಮ್ಮ ಅಂತರಂಗವು ದಿನೇ ದಿನೇ ಹೊಸದಾಗುತ್ತಾ ಬರುತ್ತದೆ.
ಕೀರ್ತ 27:13–14ಜೀವಲೋಕದಲ್ಲಿಯೇ ಯೆಹೋವನ ದಯೆಯನ್ನು ಅನುಭವಿಸುವೆನು ಎಂದು ದೃಢವಾಗಿ ನಂಬಿದ್ದೇನೆ. ಯೆಹೋವನನ್ನು ನಿರೀಕ್ಷಿಸಿಕೊಂಡಿರು, ದೃಢವಾಗಿರು; ನಿನ್ನ ಹೃದಯವು ಧೈರ್ಯದಿಂದಿರಲಿ; ಯೆಹೋವನನ್ನು ನಿರೀಕ್ಷಿಸಿಕೊಂಡೇ ಇರು.
ಕೀರ್ತ 103:5ಶ್ರೇಷ್ಠ ವರಗಳಿಂದ ನಿನ್ನ ಆಶೆಯನ್ನು ಪೂರ್ಣಗೊಳಿಸುತ್ತಾನೆ; ಹದ್ದಿಗೆ ಬರುವಂತೆಯೇ ನಿನಗೆ ಯೌವನವನ್ನು ತಿರುಗಿ ಬರಮಾಡುತ್ತಾನೆ.
2 ಕೊರಿ 12:9–10ಅದಕ್ಕಾತನು, “ನನ್ನ ಕೃಪೆಯೇ ನಿನಗೆ ಸಾಕು, ಬಲಹೀನತೆಯಲ್ಲಿಯೇ ನನ್ನ ಬಲವು ಪೂರ್ಣಸಾಧಕವಾಗುತ್ತದೆ” ಎಂದು ನನಗೆ ಹೇಳಿದನು. ಹೀಗಿರಲಾಗಿ, ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿರಬೇಕೆಂದು ನನಗುಂಟಾಗುವ ಬಲಹೀನತೆಯಲ್ಲಿಯೂ ಬಹು ಸಂತೋಷವಾಗಿ ಹೆಚ್ಚಳಪಡುವೆನು. ಆದ್ದರಿಂದ ಕ್ರಿಸ್ತನ ನಿಮಿತ್ತ ನನಗೆ ಬಲಹೀನತೆಯಲ್ಲಿಯೂ, ತಿರಸ್ಕಾರದಲ್ಲಿಯೂ, ಕೊರತೆಯಲ್ಲಿಯೂ, ಹಿಂಸೆಯಲ್ಲಿಯೂ ಮತ್ತು ಇಕ್ಕಟ್ಟೂ ಸಂಭವಿಸಿದಾಗಲೂ ಸಂತುಷ್ಟನಾಗಿದ್ದೇನೆ. ಯಾಕೆಂದರೆ ನಾನು ಯಾವಾಗ ದುರ್ಬಲನಾಗಿರುವೆನೋ, ಆವಾಗಲೇ ಬಲವುಳ್ಳವನೂ ಆಗಿರುತ್ತೇನೆ.
ಇಬ್ರಿ 12:1–2ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸಹನೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ.
ಗಲಾ 6:9ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳದೇ ಇರೋಣ. ಏಕೆಂದರೆ ಮನಗುಂದದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು.
ರೋಮಾ 8:25ಆದರೆ ಕಾಣದಿರುವುದನ್ನು ನಾವು ಎದುರುನೋಡುವವರಾಗಿರುವುದರಿಂದ ತಾಳ್ಮೆಯಿಂದ ಕಾದುಕೊಂಡಿದ್ದೇವೆ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು