ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಯೆಶಾಯನು 41:10
ಬೈಬಲ್ ವಚನ · IRV
ಯೆಶಾಯನು 41:10
ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.
ಸಂದರ್ಭದಲ್ಲಿ
7ಹಾಗೆಯೇ ಶಿಲ್ಪಿಯು ಎರಕದವನನ್ನೂ, ಸುತ್ತಿಗೆಯಿಂದ ಸಮಮಾಡುವವನು ಅಡಿಗಲ್ಲಿನ ಮೇಲೆ ಕುಟ್ಟುವವನನ್ನೂ ಪ್ರೋತ್ಸಾಹಗೊಳಿಸಿದರು. “ಬೆಸಿಗೆ ಚೆನ್ನಾಗಿದೆ” ಎಂದು ಹೇಳಿ ವಿಗ್ರಹವನ್ನು ಕದಲದಂತೆ ಮೊಳೆಗಳಿಂದ ಜಡಿದರು.
8ನನ್ನ ಸೇವಕನಾದ ಇಸ್ರಾಯೇಲೇ, ನಾನು ಆರಿಸಿಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ,
9ನಾನು ಭೂಮಿಯ ಕಟ್ಟಕಡೆಯಲ್ಲಿ ಹಿಡಿದು ದಿಗಂತಗಳಿಂದ ಕರೆದ ಜನವೇ, “ನೀನು ನನ್ನ ಸೇವಕನು, ನಾನು ನಿನ್ನನ್ನು ಆರಿಸಿಕೊಂಡೆನು, ತಳ್ಳಲಿಲ್ಲ” ಎಂದು ನಾನು ಹೇಳಿ ಸಂಬೋಧಿಸಿದ ಪ್ರಜೆಯೇ,
10ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.
11ಆಹಾ, ನಿನ್ನ ಮೇಲೆ ಕಿಡಿಕಿಡಿಯಾದವರು ಆಶಾಭಂಗಪಟ್ಟು ಅವಮಾನಹೊಂದುವರು, ನಿನ್ನ ಸಂಗಡ ವ್ಯಾಜ್ಯವಾಡಿದವರು ನಾಶವಾಗಿ ಇಲ್ಲದೆ ಹೋಗುವರು.
12ನಿನ್ನೊಡನೆ ಹೋರಾಡಿದವರನ್ನು ಹುಡುಕಿದರೂ ಅವರು ನಿನಗೆ ಕಾಣಿಸರು. ನಿನ್ನ ವಿರುದ್ಧವಾಗಿ ಯುದ್ಧ ಮಾಡಿದವರು ನಿರ್ನಾಮವಾಗುವರು.
13ಏಕೆಂದರೆ ಯೆಹೋವನೆಂಬ ನಾನೇ ನಿನ್ನ ಕೈಹಿಡಿಯುತ್ತೇನೆ. “ಭಯಪಡಬೇಡ, ನಿನಗೆ ಸಹಾಯಮಾಡುತ್ತೇನೆ.
ಇಂಗ್ಲಿಷ್ನಲ್ಲಿ
Do not fear, for I am with you; do not be afraid, for I am your God. I will strengthen you; I will surely help you; I will uphold you with My right hand of righteousness.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವನು” ಎಂದು ಹೇಳಿದನು.ಈಗಲಾದರೋ, ಯಾಕೋಬನ ವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ ರೂಪಿಸಿದವನಾದ ಯೆಹೋವನು ಹೀಗೆನ್ನುತ್ತಾನೆ, “ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರು ಹಿಡಿದು ಕರೆದೆನಲ್ಲಾ, ನೀನು ನನ್ನವನೇ. ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು, ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಳುಗಿಸುವುದಿಲ್ಲ, ಬೆಂಕಿಯಲ್ಲಿ ನಡೆಯುವಾಗ ನೀನು ಸುಟ್ಟುಹೋಗುವುದಿಲ್ಲ, ಜ್ವಾಲೆಯು ನಿನ್ನನ್ನು ದಹಿಸದು.ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು?ನೀವು ಶೂರರಾಗಿ ಧೈರ್ಯದಿಂದ ಇರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ ಸಂಗಡ ಇರುತ್ತಾನಲ್ಲಾ; ಆತನು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ” ಎಂದು ಹೇಳಿದನು. ಆಗ ಮೋಶೆ ಯೆಹೋಶುವನನ್ನು ಕರೆದು ಇಸ್ರಾಯೇಲರ ಮುಂದೆ ಅವನಿಗೆ, “ಯೆಹೋವನು ಇವರ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶಕ್ಕೆ ನೀನೇ ಇವರೊಡನೆ ಹೋಗಿ ಅದನ್ನು ಅವರಿಗೆ ಸ್ವಾಧೀನಪಡಿಸಬೇಕು. ಆದುದರಿಂದ ಶೂರನಾಗಿ ಧೈರ್ಯದಿಂದಿರು; ಯೆಹೋವನು ತಾನೇ ನಿನ್ನ ಮುಂದೆ ಹೋಗುವನು; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ, ಕೈಬಿಡುವುದಿಲ್ಲ; ಅಂಜಬೇಡ, ಧೈರ್ಯದಿಂದಿರು” ಎಂದು ಹೇಳಿದನು.ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.ಸೋತವನಿಗೆ ತ್ರಾಣವನ್ನು ಅನುಗ್ರಹಿಸಿ, ಬಲಹೀನನಿಗೆ ಬಹು ಬಲವನ್ನು ದಯಪಾಲಿಸುತ್ತಾನೆ. ಯುವಕರೂ ದಣಿದು ಬಳಲುವರು, ತರುಣರೂ ಸೊರಗಿ ಮುಗ್ಗರಿಸುವರು. ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು ಏರುವರು; ಅವರು ಓಡಿ ದಣಿಯರು, ನಡೆದು ಬಳಲರು.ಅದಕ್ಕಾತನು, “ನನ್ನ ಕೃಪೆಯೇ ನಿನಗೆ ಸಾಕು, ಬಲಹೀನತೆಯಲ್ಲಿಯೇ ನನ್ನ ಬಲವು ಪೂರ್ಣಸಾಧಕವಾಗುತ್ತದೆ” ಎಂದು ನನಗೆ ಹೇಳಿದನು. ಹೀಗಿರಲಾಗಿ, ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿರಬೇಕೆಂದು ನನಗುಂಟಾಗುವ ಬಲಹೀನತೆಯಲ್ಲಿಯೂ ಬಹು ಸಂತೋಷವಾಗಿ ಹೆಚ್ಚಳಪಡುವೆನು.ಏಕೆಂದರೆ ಯೆಹೋವನೆಂಬ ನಾನೇ ನಿನ್ನ ಕೈಹಿಡಿಯುತ್ತೇನೆ. “ಭಯಪಡಬೇಡ, ನಿನಗೆ ಸಹಾಯಮಾಡುತ್ತೇನೆ. ಕ್ರಿಮಿಪ್ರಾಯದವನಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ, ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾಮಿಯು ನಿನಗೆ ವಿಮೋಚಕನು” ಎಂದು ಯೆಹೋವನು ಹೇಳುತ್ತಾನೆ.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು