Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಯೆಶಾಯನು 43:18–19

ಬೈಬಲ್ ವಚನ · IRV

ಯೆಶಾಯನು 43:18–19

18ಹಿಂದಿನ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಬೇಡಿರಿ, ಪುರಾತನ ಕಾರ್ಯಗಳನ್ನು ಮರೆತುಬಿಡಿರಿ.

19ಇಗೋ, ಹೊಸ ಕಾರ್ಯವನ್ನು ಮಾಡುವೆನು, ಈಗ ತಲೆದೋರುತ್ತಲಿದೆ. ಇದು ನಿಮಗೆ ಕಾಣುವುದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಏರ್ಪಡಿಸಿ, ಅರಣ್ಯದಲ್ಲಿ ನದಿಗಳನ್ನು ಹರಿಸುವೆನು.

ಇಡೀ ಅಧ್ಯಾಯ ಓದಿ: ಯೆಶಾಯನು 43

ಸಂದರ್ಭದಲ್ಲಿ

15ನಾನು ಯೆಹೋವನು, ನಿಮ್ಮ ಸದಮಲಸ್ವಾಮಿಯು, ಇಸ್ರಾಯೇಲನ್ನು ಸೃಷ್ಟಿಸಿದವನು, ನಿಮ್ಮ ಅರಸನೂ ಆಗಿದ್ದೇನೆ.

16ಯಾರು ಸಮುದ್ರದಲ್ಲಿ ದಾರಿಮಾಡಿ ಜಲಪ್ರವಾಹಗಳಲ್ಲಿ ಮಾರ್ಗವನ್ನು ಏರ್ಪಡಿಸಿದನೋ,

17ಯಾರು ರಥಗಳನ್ನು, ಕುದರೆಗಳನ್ನು, ಸೈನ್ಯಗಳನ್ನು, ಪರಾಕ್ರಮಶಾಲಿಗಳನ್ನು ಹೊರಡಿಸಿ, ಅವು ಬಿದ್ದು ಏಳಲಾರದಂತೆಯೂ, ದೀಪದೋಪಾದಿಯಲ್ಲಿ ನಂದಿ ಆರಿಹೋಗುವಂತೆಯೂ ಮಾಡಿದವನು” ಯೆಹೋವನು ಹೀಗೆನ್ನುತ್ತಾನೆ,

18ಹಿಂದಿನ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಬೇಡಿರಿ, ಪುರಾತನ ಕಾರ್ಯಗಳನ್ನು ಮರೆತುಬಿಡಿರಿ.

19ಇಗೋ, ಹೊಸ ಕಾರ್ಯವನ್ನು ಮಾಡುವೆನು, ಈಗ ತಲೆದೋರುತ್ತಲಿದೆ. ಇದು ನಿಮಗೆ ಕಾಣುವುದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಏರ್ಪಡಿಸಿ, ಅರಣ್ಯದಲ್ಲಿ ನದಿಗಳನ್ನು ಹರಿಸುವೆನು.

20ಬಯಲಿನ ಮೃಗಗಳು, ನರಿಗಳು, ಗೂಬೆಗಳು ನನ್ನನ್ನು ಸನ್ಮಾನಿಸುತ್ತವೆ. ಅರಣ್ಯದಲ್ಲಿ ನೀರನ್ನು, ಮರುಭೂಮಿಯಲ್ಲಿ ನದಿಗಳನ್ನು ನಾನು ಆರಿಸಿಕೊಂಡ ನನ್ನ ಪ್ರಜೆಗಳಿಗೆ ಕುಡಿಯುವುದಕ್ಕೆ ಕೊಟ್ಟೆನು. ನಾನು ಸೃಷ್ಟಿಸಿಕೊಂಡ ಆಪ್ತಜನರ ಜಲಪಾನಕ್ಕಾಗಿ,

21ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ಸೃಷ್ಟಿಸಿಕೊಂಡಿದ್ದೇನೆ.

22“ಯಾಕೋಬೇ, ನೀನಾದರೋ ನನ್ನನ್ನು ಪ್ರಾರ್ಥಿಸಲಿಲ್ಲ, ಇಸ್ರಾಯೇಲೇ, ನೀನು ನನ್ನ ವಿಷಯದಲ್ಲಿ ಬೇಸರಗೊಂಡಿದ್ದಿ.

ಯೆಶಾಯನು 43

ಇಂಗ್ಲಿಷ್‌ನಲ್ಲಿ

Berean Standard BibleIsaiah 43:18–19“Do not call to mind the former things; pay no attention to the things of old. Behold, I am about to do something new; even now it is coming. Do you not see it? Indeed, I will make a way in the wilderness and streams in the desert.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಯೆಶಾ 48:6ನಡೆದ ಸಂಗತಿಗಳನ್ನು ನೀನು ಕೇಳಿದಿಯಲ್ಲಾ, ನಡೆದದ್ದನ್ನೆಲ್ಲಾ ನೋಡು, ನಿನ್ನವರೇ ಪ್ರಸಿದ್ಧಿಪಡಿಸಲಿ. ಇಂದಿನಿಂದ ಹೊಸ ಸಂಗತಿಗಳನ್ನು, ನೀನು ತಿಳಿಯದಿದ್ದ ಗುಪ್ತವಿಷಯಗಳನ್ನು ನಿನಗೆ ತಿಳಿಸುತ್ತೇನೆ.
ಯೆಶಾ 42:9ಇಗೋ ಮೊದಲನೆಯ ಸಂಗತಿಗಳು ನೆರವೇರಿವೆ, ಹೊಸ ಸಂಗತಿಗಳನ್ನು ಪ್ರಕಟಿಸುತ್ತೇನೆ. ಅವು ತಲೆದೋರುವುದಕ್ಕೆ ಮೊದಲು ಅವುಗಳನ್ನು ನಿಮಗೆ ತಿಳಿಸುತ್ತೇನೆ.”
2 ಕೊರಿ 5:17ಆದ್ದರಿಂದ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು.
ಪ್ರಕ 21:5ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, “ಇಗೋ, ನಾನು ಎಲ್ಲವನ್ನು ನೂತನಗೊಳಿಸುತ್ತೇನೆ” ಎಂದನು. ಮತ್ತು ಒಬ್ಬನು ನನಗೆ, “ನೀನು ಇದನ್ನು ಬರೆ. ಏಕೆಂದರೆ ಈ ಮಾತುಗಳು ನಂಬತಕ್ಕವೂ, ಸತ್ಯವಾದವೂ ಆಗಿವೆ” ಎಂದು ಹೇಳಿದನು.
ಯೆಶಾ 41:18ಬೋಳುಗುಡ್ಡಗಳಲ್ಲಿ ನದಿಗಳನ್ನು, ಕಣಿವೆಗಳಲ್ಲಿ ಒರತೆಗಳನ್ನು ಹೊರಡಿಸಿ, ಅರಣ್ಯವನ್ನು ಕೆರೆಯಾಗಿಯೂ, ಮರುಭೂಮಿಯನ್ನು ಬುಗ್ಗೆಗಳನ್ನಾಗಿಯೂ ಮಾಡುವೆನು.
ಯೆಶಾ 65:17“ಇಗೋ, ನೂತನ ಆಕಾಶಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಸೃಷ್ಟಿಸುವೆನು; ಮೊದಲಿದ್ದದ್ದನ್ನು ಯಾರೂ ಜ್ಞಾಪಿಸಿಕೊಳ್ಳರು, ಅದು ನೆನಪಿಗೆ ಬಾರದು.
ಲೂಕ 3:4–6ಇದು ಯೆಶಾಯನೆಂಬ ಪ್ರವಾದಿಯ ಗ್ರಂಥದಲ್ಲಿ ಬರೆದಿರುವ ಮಾತಿಗೆ ಅನುಸಾರವಾಗಿ ನಡೆಯಿತು. ಆ ಮಾತು ಏನೆಂದರೆ, “‘ಕರ್ತನ ದಾರಿಯನ್ನು ಸಿದ್ಧಮಾಡಿರಿ, ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ. ಎಲ್ಲಾ ಹಳ್ಳಕೊಳ್ಳಗಳು ಮುಚ್ಚಲ್ಪಡುವವು, ಎಲ್ಲಾ ಬೆಟ್ಟಗುಡ್ಡಗಳು ತಗ್ಗಿಸಲ್ಪಡುವುದು, ಡೊಂಕಾಗಿರುವಂಥದು ನೆಟ್ಟಗಾಗುವುದು, ಕೊರಕಲಾದ ದಾರಿಗಳು ಸಮವಾಗುವವು. ಎಲ್ಲಾ ಮನುಷ್ಯರೂ ದೇವರಿಂದಾಗುವ ರಕ್ಷಣೆಯನ್ನು ಕಾಣುವರು’ ಎಂಬುದಾಗಿ ಮರುಭೂಮಿಯಲ್ಲಿ ಕೂಗುವವನ ಶಬ್ದವದೆ” ಎಂಬುದೇ.
ಯೆಶಾ 35:6–10ಕುಂಟನು ಜಿಂಕೆಯಂತೆ ಹಾರುವನು, ಮೂಕನ ನಾಲಿಗೆಯು ಹರ್ಷಧ್ವನಿಗೈಯುವುದು, ಅರಣ್ಯದಲ್ಲಿ ಒರತೆಗಳು ಒಡೆಯುವವು, ಮರುಭೂಮಿಯಲ್ಲಿ ನದಿಗಳು ಹುಟ್ಟಿ ಹರಿಯುವವು. ಬೆಂಗಾಡು ಸರೋವರವಾಗುವುದು, ಒಣನೆಲದಲ್ಲಿ ಬುಗ್ಗೆಗಳು ಹರಿಯುವವು; ನರಿಗಳು ಮಲಗುತ್ತಿದ್ದ ಸ್ಥಳವು ಆಪುಜಂಬುಗಳ ಪ್ರದೇಶವಾಗುವುದು. ಅಲ್ಲಿ ರಾಜಮಾರ್ಗವಿರುವುದು. ಅದು ಪರಿಶುದ್ಧ ಮಾರ್ಗ ಎನಿಸಿಕೊಳ್ಳುವುದು. ಯಾವ ಅಶುದ್ಧನೂ ಅದರ ಮೇಲೆ ಹಾದುಹೋಗನು. ಆದರೆ ಅದು ದೇವಜನರಿಗಾಗಿಯೇ ಇರುವುದು. ಅಲ್ಲಿ ಹೋಗುವ ಮೂಢನೂ ದಾರಿತಪ್ಪನು. ಸಿಂಹವು ಅಲ್ಲಿ ಇರದು. ಇಲ್ಲವೆ ಕ್ರೂರವಾದ ಮೃಗಗಳು ಅದರ ಮೇಲೆ ಹೋಗುವುದಿಲ್ಲ. ಅದು ಅಲ್ಲಿ ಕಾಣುವುದೇ ಇಲ್ಲ. ಬಿಡುಗಡೆಯಾದವರೇ ಅಲ್ಲಿ ನಡೆಯುವರು. ಯೆಹೋವನು ವಿಮೋಚಿಸಿದವರು ಹಿಂದಿರುಗಿ, ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು, ದುಃಖವೂ, ನಿಟ್ಟುಸಿರೂ ಓಡಿಹೋಗುವವು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು