Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಯಾಕೋಬನು 1:12

ಬೈಬಲ್ ವಚನ · IRV

ಯಾಕೋಬನು 1:12

ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದಂತೆ ಜೀವದ ಕಿರೀಟವನ್ನು ಹೊಂದುವನು.

ಇಡೀ ಅಧ್ಯಾಯ ಓದಿ: ಯಾಕೋಬನು 1

ಸಂದರ್ಭದಲ್ಲಿ

9ದೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತ ಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ.

10ಐಶ್ವರ್ಯವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ; ಏಕೆಂದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು.

11ಸೂರ್ಯನು ಉದಯಿಸಿದ ಮೇಲೆ ಸುಡುವ ಬಿಸಿಲಿಗೆ ಹುಲ್ಲು ಬಾಡಿ, ಹೂವು ಉದುರಿ ಅದರ ರೂಪದ ಸೊಗಸು ನಾಶವಾಗುತ್ತದೆ; ಹಾಗೆಯೇ ಐಶ್ವರ್ಯವಂತನು ತನ್ನ ಪ್ರಯತ್ನಗಳಲ್ಲಿ ಕುಂದಿಹೋಗುವನು.

12ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದಂತೆ ಜೀವದ ಕಿರೀಟವನ್ನು ಹೊಂದುವನು.

13ಯಾರಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ “ಈ ಪ್ರೇರಣೆಯು ತನಗೆ ದೇವರಿಂದ ಉಂಟಾಯಿತೆಂದು” ಹೇಳಬಾರದು. ಏಕೆಂದರೆ ದೇವರು ಕೆಟ್ಟದ್ದಕ್ಕೆ ಪ್ರೇರಣೆ ನೀಡುವವನಲ್ಲ. ಮತ್ತು ಆತನು ಯಾರನ್ನೂ ಪಾಪಕ್ಕೆ ಪ್ರೇರೇಪಿಸಿ ಶೋಧಿಸುವುದೂ ಇಲ್ಲ.

14ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಗಳಿಂದ ಸೆಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ.

15ಆ ಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ. ಪಾಪವು ಪೂರ್ಣವಾಗಿ ಬೆಳೆದು ಮರಣವನ್ನು ತರುತ್ತದೆ.

ಯಾಕೋಬನು 1

ಇಂಗ್ಲಿಷ್‌ನಲ್ಲಿ

Berean Standard BibleJames 1:12Blessed is the man who perseveres under trial, because when he has stood the test, he will receive the crown of life that God has promised to those who love Him.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

1 ಪೇತ್ರ 5:10ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು.
1 ಪೇತ್ರ 1:6–9ಆದ್ದರಿಂದ ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ವಿಧ ಕಷ್ಟಗಳಲ್ಲಿ ದುಃಖಿಸುವವರಾಗಿದ್ದರೂ, ಹರ್ಷಿಸುವವರಾಗಿದ್ದೀರಿ. ನಾಶವಾಗುವಂತಹದ್ದೂ, ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ. ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ. ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು, ನಿಮ್ಮ ನಂಬಿಕೆಯ ಅಂತ್ಯಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿ ಹೇಳಲಸಾಧ್ಯವಾದಂತಹ ಮಹಿಮೆಯುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.
ಪ್ರಕ 2:10ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತು ಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವ ತನಕ ನಂಬಿಗಸ್ತನಾಗಿರು, ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.
ಯಾಕೋ 5:11ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಪರಿಗಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣಾಸಾಗರನೂ ಮತ್ತು ದಯಾಳುವೂ ಆಗಿದ್ದಾನೆಂದು ತಿಳಿದಿರುವಿರಿ.
ರೋಮಾ 8:28ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ.
ಮತ್ತಾ 10:22ಮತ್ತು ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕಡೆಯವರೆಗೂ ತಾಳಿಕೊಳ್ಳುವವನು ರಕ್ಷಣೆಹೊಂದುವನು.
1 ಕೊರಿ 9:25ಪ್ರತಿಯೊಬ್ಬ ಕ್ರೀಡಾಪಟುವು ತನ್ನ ತರಬೇತಿಯ ಎಲ್ಲಾ ವಿಷಯಗಳಲ್ಲಿ ಶಮೆದಮೆಯುಳ್ಳವನಾಗಿರುತ್ತಾನೆ. ಅವರು ಬಾಡಿ ಹೋಗುವ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುತ್ತಾರೆ; ನಾವಾದರೋ ಬಾಡಿಹೋಗದ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುವವರಾಗಿದ್ದೇವೆ.
2 ತಿಮೊ 4:8ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗಾಗಿ ಸಿದ್ಧವಾಗಿದೆ, ಅದನ್ನು ನೀತಿವಂತನಾದ ನ್ಯಾಯಾಧಿಪತಿಯಾಗಿರುವ ಕರ್ತನು ಆ ದಿನದಲ್ಲಿ ನನಗೆ ಕೊಡುವನು, ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು