ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಯಾಕೋಬನು 1:17
ಬೈಬಲ್ ವಚನ · IRV
ಯಾಕೋಬನು 1:17
ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು ಸಕಲ ವಿಧವಾದ ಬೆಳಕಿಗೆ ಮೂಲಕರ್ತನಾದ ದೇವರಿಂದ ಇಳಿದು ಬರುತ್ತವೆ; ಆತನು ನೆರಳಿನಂತೆ ಬದಲಾಗುವವನಲ್ಲ, ಚಂಚಲಚಿತ್ತನೂ ಅಲ್ಲ.
ಸಂದರ್ಭದಲ್ಲಿ
14ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಗಳಿಂದ ಸೆಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ.
15ಆ ಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ. ಪಾಪವು ಪೂರ್ಣವಾಗಿ ಬೆಳೆದು ಮರಣವನ್ನು ತರುತ್ತದೆ.
16ನನ್ನ ಪ್ರಿಯ ಸಹೋದರರೇ, ಮೋಸಹೋಗಬೇಡಿರಿ.
17ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು ಸಕಲ ವಿಧವಾದ ಬೆಳಕಿಗೆ ಮೂಲಕರ್ತನಾದ ದೇವರಿಂದ ಇಳಿದು ಬರುತ್ತವೆ; ಆತನು ನೆರಳಿನಂತೆ ಬದಲಾಗುವವನಲ್ಲ, ಚಂಚಲಚಿತ್ತನೂ ಅಲ್ಲ.
18ದೇವರು ತನ್ನ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ಜೀವಕೊಟ್ಟಿವುದರಿಂದ ನಾವು ಆತನ ಸರ್ವ ಸೃಷ್ಟಿಯಲ್ಲಿ ಪ್ರಥಮ ಫಲವಾದೆವು.
19ನನ್ನ ಪ್ರಿಯ ಸಹೋದರರೇ, ನೀವು ಇದನ್ನು ಚೆನ್ನಾಗಿ ತಿಳಿದುಕೊಳ್ಳಿರಿ, ಪ್ರತಿಯೊಬ್ಬನೂ ಕಿವಿಗೊಡುವುದರಲ್ಲಿ ಚುರುಕಾಗಿಯೂ, ಮಾತನಾಡುವುದರಲ್ಲಿ ನಿಧಾನವಾಗಿಯೂ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.
20ಏಕೆಂದರೆ ಮನುಷ್ಯನು ಕೋಪಗೊಂಡಾಗ ದೇವರು ಬಯಸುವ ನೀತಿ ಕಾರ್ಯಗಳನ್ನು ಮಾಡಲು ಸಾಧ್ಯವಾಗುವುದಿಲ್ಲ.
ಇಂಗ್ಲಿಷ್ನಲ್ಲಿ
Every good and perfect gift is from above, coming down from the Father of the heavenly lights, with whom there is no change or shifting shadow.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ಯೋಹಾನನು “ಪರಲೋಕದಿಂದ ಅನುಗ್ರಹಿಸದ ಹೊರತು ಮನುಷ್ಯನು ಏನ್ನನ್ನೂ ಹೊಂದಲಾರನು.ಹಾಗಾದರೆ ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಉಡುಗೊರೆಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯ ವರಗಳನ್ನು ಕೊಡುವನಲ್ಲವೇ?ಯೇಸು ಕ್ರಿಸ್ತನು ನಿನ್ನೇ ಇದ್ದ ಹಾಗೆಯೇ, ಈ ಹೊತ್ತು, ನಿರಂತರವೂ ಇರುವನು.ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, “ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ, ಆದರೆ ಅವನು ಜೀವದ ಬೆಳಕನ್ನು ಹೊಂದಿರುವನು” ಎಂದು ಹೇಳಿದನು.ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ. ಮಾನವನಂತೆ ಮನಸ್ಸನ್ನು ಬದಲಾಯಿಸುವವನಲ್ಲ. ತಾನು ಹೇಳಿದ ಪ್ರಕಾರ ನಡೆಯದಿರುತ್ತಾನೆಯೇ? ಮಾತುಕೊಟ್ಟ ನಂತರ ನೆರವೇರಿಸುವುದಿಲ್ಲವೋ?ಯೆಹೋವ ದೇವರು ಸೂರ್ಯನೂ, ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ, ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನೋ?ನಾವು ಆತನಿಂದ ಕೇಳಿ ನಿಮಗೆ ತಿಳಿಸುತ್ತಿರುವ ಸಂದೇಶ ಯಾವುದೆಂದರೆ; ದೇವರು ಬೆಳಕಾಗಿದ್ದಾನೆ; ಮತ್ತು ಆತನಲ್ಲಿ ಸ್ವಲ್ಪವೂ ಕತ್ತಲೆಯಿಲ್ಲ ಎಂಬುದೇ.ಯೆಹೋವನೇ ಜ್ಞಾನವನ್ನು ಕೊಡುವಾತನು, ಆತನ ಬಾಯಿಂದಲೇ ತಿಳಿವಳಿಕೆಯೂ, ವಿವೇಕವೂ ಹೊರಟು ಬರುತ್ತವೆ.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು