Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಯಾಕೋಬನು 1:19

ಬೈಬಲ್ ವಚನ · IRV

ಯಾಕೋಬನು 1:19

ನನ್ನ ಪ್ರಿಯ ಸಹೋದರರೇ, ನೀವು ಇದನ್ನು ಚೆನ್ನಾಗಿ ತಿಳಿದುಕೊಳ್ಳಿರಿ, ಪ್ರತಿಯೊಬ್ಬನೂ ಕಿವಿಗೊಡುವುದರಲ್ಲಿ ಚುರುಕಾಗಿಯೂ, ಮಾತನಾಡುವುದರಲ್ಲಿ ನಿಧಾನವಾಗಿಯೂ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.

ಇಡೀ ಅಧ್ಯಾಯ ಓದಿ: ಯಾಕೋಬನು 1

ಸಂದರ್ಭದಲ್ಲಿ

16ನನ್ನ ಪ್ರಿಯ ಸಹೋದರರೇ, ಮೋಸಹೋಗಬೇಡಿರಿ.

17ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು ಸಕಲ ವಿಧವಾದ ಬೆಳಕಿಗೆ ಮೂಲಕರ್ತನಾದ ದೇವರಿಂದ ಇಳಿದು ಬರುತ್ತವೆ; ಆತನು ನೆರಳಿನಂತೆ ಬದಲಾಗುವವನಲ್ಲ, ಚಂಚಲಚಿತ್ತನೂ ಅಲ್ಲ.

18ದೇವರು ತನ್ನ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ಜೀವಕೊಟ್ಟಿವುದರಿಂದ ನಾವು ಆತನ ಸರ್ವ ಸೃಷ್ಟಿಯಲ್ಲಿ ಪ್ರಥಮ ಫಲವಾದೆವು.

19ನನ್ನ ಪ್ರಿಯ ಸಹೋದರರೇ, ನೀವು ಇದನ್ನು ಚೆನ್ನಾಗಿ ತಿಳಿದುಕೊಳ್ಳಿರಿ, ಪ್ರತಿಯೊಬ್ಬನೂ ಕಿವಿಗೊಡುವುದರಲ್ಲಿ ಚುರುಕಾಗಿಯೂ, ಮಾತನಾಡುವುದರಲ್ಲಿ ನಿಧಾನವಾಗಿಯೂ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.

20ಏಕೆಂದರೆ ಮನುಷ್ಯನು ಕೋಪಗೊಂಡಾಗ ದೇವರು ಬಯಸುವ ನೀತಿ ಕಾರ್ಯಗಳನ್ನು ಮಾಡಲು ಸಾಧ್ಯವಾಗುವುದಿಲ್ಲ.

21ಆದಕಾರಣ ಎಲ್ಲಾ ನೀಚತನವನ್ನೂ, ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಮನಸ್ಸಿನೊಳಗೆ ಬೇರೂರಿರುವ ದೇವರ ವಾಕ್ಯವನ್ನು ನಮ್ರತೆಯಿಂದ ಸ್ವೀಕರಿಸಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುವುದಕ್ಕೆ ಸಾಮರ್ಥ್ಯವುಳ್ಳದ್ದಾಗಿರುತ್ತದೆ.

22ದೇವರ ವಾಕ್ಯದ ಪ್ರಕಾರ ನಡೆಯುವವರಾಗಿರಿ, ಅದನ್ನು ಕೇವಲ ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳಬೇಡಿರಿ.

ಯಾಕೋಬನು 1

ಇಂಗ್ಲಿಷ್‌ನಲ್ಲಿ

Berean Standard BibleJames 1:19My beloved brothers, understand this: Everyone should be quick to listen, slow to speak, and slow to anger,

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಜ್ಞಾನೋ 17:27ಮಿತವಾಗಿ ಮಾತನಾಡುವವನು ಜ್ಞಾನಿ, ಶಾಂತಾತ್ಮನು ವಿವೇಕಿ.
ಜ್ಞಾನೋ 21:23ತನ್ನ ಬಾಯನ್ನೂ, ನಾಲಿಗೆಯನ್ನೂ ಕಾಯುವವನು ತೊಂದರೆಗಳಿಂದ ರಕ್ಷಿಸಿಕೊಳ್ಳುವನು.
ಜ್ಞಾನೋ 14:29ದೀರ್ಘಶಾಂತನು ಕೇವಲ ಬುದ್ಧಿವಂತನು, ಮುಂಗೋಪಿಯು ಮೂರ್ಖತನವನ್ನು ಧ್ವಜವಾಗಿ ಎತ್ತುವನು.
ಜ್ಞಾನೋ 10:19ಮಾತಾಳಿಗೆ ಪಾಪ ತಪ್ಪದು, ಮೌನಿಯು ವಿವೇಕಿ.
ಜ್ಞಾನೋ 18:13ಗಮನಿಸದೆ ಉತ್ತರಕೊಡುವವನು, ಮೂರ್ಖನೆಂಬ ಅವಮಾನಕ್ಕೆ ಗುರಿಯಾಗುವನು.
ಎಫೆ 4:26“ಕೋಪಗೊಳ್ಳಬೇಕಾಗಿ ಬಂದರೂ ಪಾಪಮಾಡಬೇಡಿರಿ,” ಸೂರ್ಯನು ಮುಳುಗುವುದಕ್ಕಿಂತ ಮೊದಲೇ ನಿಮ್ಮ ಸಿಟ್ಟು ತೀರಿಹೋಗಲಿ.
ಜ್ಞಾನೋ 13:3ಬಾಯನ್ನು ಕಾಯುವವನು ಜೀವವನ್ನು ಕಾಯುತ್ತಾನೆ, ತುಟಿಗಳನ್ನು ತೆರೆದುಬಿಡುವವನು ನಾಶವಾಗುವನು.
ಜ್ಞಾನೋ 16:32ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠ, ತನ್ನನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಬಲಿಷ್ಠ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು