Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಯಾಕೋಬನು 1:2–4

ಬೈಬಲ್ ವಚನ · IRV

ಯಾಕೋಬನು 1:2–4

2ನನ್ನ ಸಹೋದರರೇ, ನೀವು ನಾನಾವಿಧವಾದ ಕಷ್ಟಗಳನ್ನು ಅನುಭವಿಸುವಾಗ ಅದನ್ನು ಕೇವಲ ಆನಂದಕರವಾದದ್ದೆಂದು ತಿಳಿಯಿರಿ.

3ಏಕೆಂದರೆ ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ನಿಮಗೆ ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ.

4ಆ ತಾಳ್ಮೆಯು ಸಂಪೂರ್ಣವಾಗಿ ನಿಮ್ಮಲ್ಲಿ ಫಲಿಸಲಿ, ಆಗ ನೀವು ಸರ್ವಸುಗುಣಸಂಪನ್ನರೂ, ಪರಿಪೂರ್ಣರೂ, ಯಾವುದಕ್ಕೂ ಕಡಿಮೆಯಿಲ್ಲದವರೂ ಆಗುವಿರಿ.

ಇಡೀ ಅಧ್ಯಾಯ ಓದಿ: ಯಾಕೋಬನು 1

ಸಂದರ್ಭದಲ್ಲಿ

1ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬನು ಅನ್ಯದೇಶಗಳಲ್ಲಿ ಚದುರಿರುವ ಇಸ್ರಾಯೇಲ್ಯರ ಹನ್ನೆರಡು ಗೋತ್ರದವರಿಗೂ ಬರೆಯುವುದೇನೆಂದರೆ, “ನಿಮಗೆ ಶುಭವಾಗಲಿ.”

2ನನ್ನ ಸಹೋದರರೇ, ನೀವು ನಾನಾವಿಧವಾದ ಕಷ್ಟಗಳನ್ನು ಅನುಭವಿಸುವಾಗ ಅದನ್ನು ಕೇವಲ ಆನಂದಕರವಾದದ್ದೆಂದು ತಿಳಿಯಿರಿ.

3ಏಕೆಂದರೆ ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ನಿಮಗೆ ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ.

4ಆ ತಾಳ್ಮೆಯು ಸಂಪೂರ್ಣವಾಗಿ ನಿಮ್ಮಲ್ಲಿ ಫಲಿಸಲಿ, ಆಗ ನೀವು ಸರ್ವಸುಗುಣಸಂಪನ್ನರೂ, ಪರಿಪೂರ್ಣರೂ, ಯಾವುದಕ್ಕೂ ಕಡಿಮೆಯಿಲ್ಲದವರೂ ಆಗುವಿರಿ.

5ನಿಮ್ಮಲ್ಲಿ ಯಾರಿಗಾದರು ಜ್ಞಾನದ ಕೊರತೆಯಿರುವುದಾದರೆ ಅವರು ದೇವರನ್ನು ಬೇಡಿಕೊಳ್ಳಲಿ, ಅದು ಅವರಿಗೆ ದೊರಕುವುದು. ಯಾಕೆಂದರೆ ದೇವರು ಹಂಗಿಸದೆ ಎಲ್ಲರಿಗೂ ಉದಾರವಾಗಿ ಕೊಡುವಾತನಾಗಿದ್ದಾನೆ.

6ಆದರೆ ದೇವರ ಬಳಿ ಬೇಡುವವನು ಸ್ವಲ್ಪವೂ ಸಂದೇಹಪಡದೆ ನಂಬಿಕೆಯಿಂದ ಬೇಡಿಕೊಳ್ಳಲಿ. ಸಂದೇಹಪಡುವವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ಅಲೆಯಂತೆ ಅತ್ತಿತ್ತ ಅಲೆಯುತ್ತಿರುತ್ತಾನೆ.

7ಇಂಥವನು ತಾನು ಕರ್ತನಿಂದ ಬೇಡಿಕೊಂಡಿದ್ದೆಲ್ಲವನ್ನು ಹೊಂದುವೆನೆಂದು ಭಾವಿಸದೆ ಇರಲಿ.

ಯಾಕೋಬನು 1

ಇಂಗ್ಲಿಷ್‌ನಲ್ಲಿ

Berean Standard BibleJames 1:2–4Consider it pure joy, my brothers, when you encounter trials of many kinds, because you know that the testing of your faith develops perseverance. Allow perseverance to finish its work, so that you may be mature and complete, not lacking anything.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

1 ಪೇತ್ರ 1:6–9ಆದ್ದರಿಂದ ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ವಿಧ ಕಷ್ಟಗಳಲ್ಲಿ ದುಃಖಿಸುವವರಾಗಿದ್ದರೂ, ಹರ್ಷಿಸುವವರಾಗಿದ್ದೀರಿ. ನಾಶವಾಗುವಂತಹದ್ದೂ, ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ. ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ. ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು, ನಿಮ್ಮ ನಂಬಿಕೆಯ ಅಂತ್ಯಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿ ಹೇಳಲಸಾಧ್ಯವಾದಂತಹ ಮಹಿಮೆಯುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.
ಯಾಕೋ 1:12ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದಂತೆ ಜೀವದ ಕಿರೀಟವನ್ನು ಹೊಂದುವನು.
2 ಕೊರಿ 12:9–10ಅದಕ್ಕಾತನು, “ನನ್ನ ಕೃಪೆಯೇ ನಿನಗೆ ಸಾಕು, ಬಲಹೀನತೆಯಲ್ಲಿಯೇ ನನ್ನ ಬಲವು ಪೂರ್ಣಸಾಧಕವಾಗುತ್ತದೆ” ಎಂದು ನನಗೆ ಹೇಳಿದನು. ಹೀಗಿರಲಾಗಿ, ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿರಬೇಕೆಂದು ನನಗುಂಟಾಗುವ ಬಲಹೀನತೆಯಲ್ಲಿಯೂ ಬಹು ಸಂತೋಷವಾಗಿ ಹೆಚ್ಚಳಪಡುವೆನು. ಆದ್ದರಿಂದ ಕ್ರಿಸ್ತನ ನಿಮಿತ್ತ ನನಗೆ ಬಲಹೀನತೆಯಲ್ಲಿಯೂ, ತಿರಸ್ಕಾರದಲ್ಲಿಯೂ, ಕೊರತೆಯಲ್ಲಿಯೂ, ಹಿಂಸೆಯಲ್ಲಿಯೂ ಮತ್ತು ಇಕ್ಕಟ್ಟೂ ಸಂಭವಿಸಿದಾಗಲೂ ಸಂತುಷ್ಟನಾಗಿದ್ದೇನೆ. ಯಾಕೆಂದರೆ ನಾನು ಯಾವಾಗ ದುರ್ಬಲನಾಗಿರುವೆನೋ, ಆವಾಗಲೇ ಬಲವುಳ್ಳವನೂ ಆಗಿರುತ್ತೇನೆ.
ಮತ್ತಾ 5:10–12ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಪರಲೋಕ ರಾಜ್ಯವು ಅವರದು. “ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ನಿಂದಿಸಿ ಹಿಂಸೆಪಡಿಸಿ ನಿಮ್ಮ ಮೇಲೆ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು. ಸಂತೋಷಪಡಿರಿ, ಉಲ್ಲಾಸಪಡಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು; ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನೂ ಅವರು ಹೀಗೆಯೇ ಹಿಂಸೆಪಡಿಸಿದರಲ್ಲಾ.
ರೋಮಾ 5:3–4ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಕಷ್ಟಸಂಕಟಗಳಲ್ಲಿಯೂ ಉಲ್ಲಾಸವಾಗಿದ್ದೇವೆ. ಏಕೆಂದರೆ ಕಷ್ಟಸಂಕಟಗಳು ತಾಳ್ಮೆಯನ್ನು, ತಾಳ್ಮೆಯೂ ಸದ್ಗುಣವನ್ನು, ಸದ್ಗುಣವು ನಿರೀಕ್ಷೆಯನ್ನು ಉಂಟುಮಾಡುತ್ತದೆಂದು ಬಲ್ಲೆವು.
ಲೂಕ 6:22–23“ಮನುಷ್ಯಕುಮಾರನ ನಿಮಿತ್ತವಾಗಿ ಜನರು ನಿಮ್ಮನ್ನು ಹಗೆಮಾಡಿ ನಿಮಗೆ ಬಹಿಷ್ಕಾರ ಹಾಕಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದೆಂದು ತೆಗೆದುಹಾಕಿದರೆ ನೀವು ಧನ್ಯರು. ಆ ದಿನದಲ್ಲಿ ಸಂತೋಷಿಸಿ, ಕುಣಿದಾಡುವಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು ಎಂದು ತಿಳಿದುಕೊಳ್ಳಿರಿ. ಈ ಜನರ ಪೂರ್ವಿಕರು ಪ್ರವಾದಿಗಳಿಗೂ ಹಾಗೆಯೇ ಮಾಡಿದರು.
ಫಿಲಿಪ್ಪಿ 1:29ಕ್ರಿಸ್ತನ ಮೇಲೆ ನಂಬಿಕೆಯಿಡುವುದು ಮಾತ್ರವಲ್ಲ ಆತನಿಗೋಸ್ಕರ ಬಾಧೆಯನ್ನನುಭವಿಸುವುದು ನಿಮಗೆ ವರವಾಗಿ ದೊರಕಿದೆ.
2 ಪೇತ್ರ 2:9ಕರ್ತನು ಭಕ್ತರನ್ನು ಕಷ್ಟಗಳಿಂದ ರಕ್ಷಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವನಾಗಿದ್ದಾನೆ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು