Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಯಾಕೋಬನು 1:27

ಬೈಬಲ್ ವಚನ · IRV

ಯಾಕೋಬನು 1:27

ಸಂಕಟದಲ್ಲಿ ಬಿದ್ದಿರುವ ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಪರಾಂಬರಿಸಿ ತನಗೆ ಇಹಲೋಕದ ದೋಷವು ಹತ್ತದಂತೆ ತನ್ನನ್ನು ತಾನು ಕಾಪಾಡಿಕೊಳ್ಳುವುದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ, ನಿರ್ಮಲವೂ ಆಗಿರುವ ಭಕ್ತಿ.

ಇಡೀ ಅಧ್ಯಾಯ ಓದಿ: ಯಾಕೋಬನು 1

ಸಂದರ್ಭದಲ್ಲಿ

24ಏಕೆಂದರೆ ಇವನು ತನ್ನನ್ನು ತಾನೇ ನೋಡಿ ನಂತರ ತಾನು ಹೀಗಿದ್ದೇನೆಂಬುದನ್ನು ಆ ಕ್ಷಣವೇ ಮರೆತುಬಿಡುವನು.

25ಆದರೆ ಬಿಡುಗಡೆಯನ್ನು ಉಂಟುಮಾಡುವ ಪರಿಪೂರ್ಣವಾದ ಧರ್ಮಶಾಸ್ತ್ರವನ್ನು ಲಕ್ಷ್ಯಕೊಟ್ಟು ಓದಿ, ಮನನ ಮಾಡಿ ಅದನ್ನು ಅನುಸರಿಸುವವನು ವಾಕ್ಯವನ್ನು ಕೇಳಿ ಮರೆತು ಹೋಗದೆ ಅದರ ಪ್ರಕಾರ ನಡೆಯುತ್ತಾ ತನ್ನ ನಡತೆಯಿಂದ, ಕ್ರಿಯೆಗಳಿಂದ ಧನ್ಯನಾಗುವನು.

26ತನ್ನನ್ನು ಸದ್ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿಯು ವ್ಯರ್ಥವಾಗಿದೆ.

27ಸಂಕಟದಲ್ಲಿ ಬಿದ್ದಿರುವ ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಪರಾಂಬರಿಸಿ ತನಗೆ ಇಹಲೋಕದ ದೋಷವು ಹತ್ತದಂತೆ ತನ್ನನ್ನು ತಾನು ಕಾಪಾಡಿಕೊಳ್ಳುವುದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ, ನಿರ್ಮಲವೂ ಆಗಿರುವ ಭಕ್ತಿ.

ಯಾಕೋಬನು 1

ಇಂಗ್ಲಿಷ್‌ನಲ್ಲಿ

Berean Standard BibleJames 1:27Pure and undefiled religion before our God and Father is this: to care for orphans and widows in their distress, and to keep oneself from being polluted by the world.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಯೆಶಾ 1:16–17ನಿಮ್ಮನ್ನು ತೊಳೆದು ಶುದ್ಧರಾಗಿ, ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ, ದುರಾಚಾರವನ್ನು ಬಿಡಿ, ಸದಾಚಾರವನ್ನು ಅಭ್ಯಾಸ ಮಾಡಿಕೊಳ್ಳಲು ಕಲಿಯಿರಿ, ನ್ಯಾಯವನ್ನು ಅನುಸರಿಸಿ ನಡೆಯಿರಿ. ಹಿಂಸೆಗೆ ಒಳಗಾದವನಿಗೆ ಸಹಾಯಮಾಡಿರಿ. ಅನಾಥನಿಗೆ ನ್ಯಾಯತೀರಿಸಿರಿ. ವಿಧವೆಯ ಪಕ್ಷವಾಗಿ ವಾದಿಸಿರಿ.”
1 ಯೋಹಾ 3:17–19ಆದರೆ ಈ ಲೋಕದ ಸಂಪತ್ತುಳ್ಳ ಯಾರಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕನಿಕರಪಡದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರಲು ಸಾಧ್ಯವೇ? ನನ್ನ ಪ್ರಿಯ ಮಕ್ಕಳೇ, ನೀವು ಬರೀ ಮಾತಿನಿಂದಾಗಲಿ, ಬಾಯುಪಚಾರದಿಂದಾಗಲಿ, ಪ್ರೀತಿಸುವವರಾಗಿರದೆ ಕ್ರಿಯೆಗಳಿಂದಲೂ ಮತ್ತು ನಿಜ ಪ್ರೀತಿಯಿಂದ ಪ್ರೀತಿಸುವವರಾಗಿರಬೇಕು. ನಾವು ಸತ್ಯಕ್ಕೆ ಸೇರಿದವರೆಂಬುದು ಇದರಿಂದಲೇ ನಮಗೆ ತಿಳಿಯುತ್ತದೆ, ನಮ್ಮ ಹೃದಯವು ದೇವರ ಸಮಕ್ಷಮದಲ್ಲಿ ದೋಷರಹಿತವಾಗಿರುತ್ತದೆ.
ಗಲಾ 6:9–10ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳದೇ ಇರೋಣ. ಏಕೆಂದರೆ ಮನಗುಂದದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು. ಆದ್ದರಿಂದ ಅವಕಾಶ ಸಿಕ್ಕಿದಾಗಲೆಲ್ಲಾ ಎಲ್ಲರಿಗೂ ಒಳ್ಳೆಯದನ್ನು ಮಾಡೋಣ, ವಿಶೇಷವಾಗಿ ಒಂದೇ ಮನೆಯವರಂತಿರುವ ಕ್ರೈಸ್ತ ವಿಶ್ವಾಸಿಗಳಿಗೆ ಮಾಡೋಣ.
ರೋಮಾ 12:2ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.
ಯೆಶಾ 58:6–7ನೋಡಿರಿ, ಕೇಡಿನ ಬಂಧನಗಳನ್ನು ಬಿಚ್ಚುವುದು, ನೊಗಹೊರಿಸುವ ಹುರಿಯನ್ನು ಕಳಚುವುದು, ಜಜ್ಜಿ ಹೋದವರನ್ನು ಬಿಡುಗಡೆ ಮಾಡುವುದು, ನೊಗಗಳನ್ನೆಲ್ಲಾ ಮುರಿಯುವುದು, ಹಸಿದವರಿಗೆ ಅನ್ನವನ್ನು ಹಂಚುವುದು, ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯವರನ್ನು ಕಂಡಾಗೆಲ್ಲಾ ಅವರಿಗೆ ಹೊದಿಸುವುದು, ನಿನ್ನಂತೆ ಮನುಷ್ಯನಾಗಿರುವ ಯಾರಿಗೇ ಆಗಲಿ ಮುಖತಪ್ಪಿಸಿಕೊಳ್ಳದಿರುವುದು, ಇವುಗಳೇ ನನಗೆ ಇಷ್ಟವಾದ ಉಪವಾಸ ವ್ರತವಲ್ಲವೇ.
1 ಯೋಹಾ 2:15–17ಲೋಕವನ್ನಾಗಲಿ ಲೋಕದಲ್ಲಿರುವವುಗಳನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕವನ್ನು ಪ್ರೀತಿಸಿದರೆ ತಂದೆಯ ಮೇಲಿನ ಪ್ರೀತಿಯು ಅವನಲ್ಲಿಲ್ಲ. ಲೋಕದಲ್ಲಿರುವ ಶರೀರದಾಶೆ, ಕಣ್ಣಿನಾಶೆ, ಬದುಕುಬಾಳಿನ ಗರ್ವ, ಇವು ತಂದೆಗೆ ಸಂಬಂಧಪಟ್ಟವುಗಳಲ್ಲ. ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ. ಲೋಕವೂ ಅದರ ಆಸೆಯೂ ಗತಿಸಿಹೋಗುತ್ತವೆ. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಸದಾಕಾಲಕ್ಕೂ ಇರುವನು.
ಯೋಬ 31:15–20ನನ್ನನ್ನು ಗರ್ಭದಲ್ಲಿ ನಿರ್ಮಿಸಿದಾತನೇ ಅವನನ್ನೂ ನಿರ್ಮಿಸಲಿಲ್ಲವೋ? ಆತನೊಬ್ಬನೇ ನಮ್ಮಿಬ್ಬರನ್ನೂ ಗರ್ಭದಲ್ಲಿ ರೂಪಿಸಿದನಲ್ಲವೇ. ನಾನು ಬಡವರ ಇಷ್ಟವನ್ನು ಭಂಗಪಡಿಸಿದೆನೋ? ಅಥವಾ ವಿಧವೆಯ ಕಣ್ಣುಗಳನ್ನು ಮಂಕಾಗಿಸಿದೆನೋ? ಅಥವಾ ನನಗಿರುವ ತುತ್ತು ಅನ್ನದಲ್ಲಿ ಅನಾಥರಿಗೆ ಏನೂ ಕೊಡದೆ, ನಾನೊಬ್ಬನೇ ತಿಂದೆನೋ? ಹಾಗಲ್ಲ, ನಾನು ಬಾಲ್ಯದಿಂದಲೂ ತಂದೆಯ ರೀತಿಯಲ್ಲಿ ಅನಾಥನನ್ನು ಸಾಕುತ್ತಾ, ನಾನು ಹುಟ್ಟಿದಂದಿನಿಂದಲು ಅನಾಥಳಿಗೆ ದಾರಿತೋರಿಸುತ್ತಾ ಇದ್ದೇನಷ್ಟೆ. ಬಟ್ಟೆಯಿಲ್ಲದೆ ಅಳಿದುಹೋಗುವವನನ್ನೂ, ಹೊದಿಕೆಯಿಲ್ಲದ ಬಡವನನ್ನೂ ನಾನು ಕಂಡಾಗೆಲ್ಲಾ, ಅವರ ಸೊಂಟವು ನನ್ನ ಕುರಿಗಳ ಉಣ್ಣೆಯಿಂದ ಬೆಚ್ಚಗಾಗಿ, ನಾನು ಅವರಿಂದ ಹರಸಲ್ಪಡಲಿಲ್ಲವೋ?

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು