Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಯಾಕೋಬನು 1:5

ಬೈಬಲ್ ವಚನ · IRV

ಯಾಕೋಬನು 1:5

ನಿಮ್ಮಲ್ಲಿ ಯಾರಿಗಾದರು ಜ್ಞಾನದ ಕೊರತೆಯಿರುವುದಾದರೆ ಅವರು ದೇವರನ್ನು ಬೇಡಿಕೊಳ್ಳಲಿ, ಅದು ಅವರಿಗೆ ದೊರಕುವುದು. ಯಾಕೆಂದರೆ ದೇವರು ಹಂಗಿಸದೆ ಎಲ್ಲರಿಗೂ ಉದಾರವಾಗಿ ಕೊಡುವಾತನಾಗಿದ್ದಾನೆ.

ಇಡೀ ಅಧ್ಯಾಯ ಓದಿ: ಯಾಕೋಬನು 1

ಸಂದರ್ಭದಲ್ಲಿ

2ನನ್ನ ಸಹೋದರರೇ, ನೀವು ನಾನಾವಿಧವಾದ ಕಷ್ಟಗಳನ್ನು ಅನುಭವಿಸುವಾಗ ಅದನ್ನು ಕೇವಲ ಆನಂದಕರವಾದದ್ದೆಂದು ತಿಳಿಯಿರಿ.

3ಏಕೆಂದರೆ ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ನಿಮಗೆ ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ.

4ಆ ತಾಳ್ಮೆಯು ಸಂಪೂರ್ಣವಾಗಿ ನಿಮ್ಮಲ್ಲಿ ಫಲಿಸಲಿ, ಆಗ ನೀವು ಸರ್ವಸುಗುಣಸಂಪನ್ನರೂ, ಪರಿಪೂರ್ಣರೂ, ಯಾವುದಕ್ಕೂ ಕಡಿಮೆಯಿಲ್ಲದವರೂ ಆಗುವಿರಿ.

5ನಿಮ್ಮಲ್ಲಿ ಯಾರಿಗಾದರು ಜ್ಞಾನದ ಕೊರತೆಯಿರುವುದಾದರೆ ಅವರು ದೇವರನ್ನು ಬೇಡಿಕೊಳ್ಳಲಿ, ಅದು ಅವರಿಗೆ ದೊರಕುವುದು. ಯಾಕೆಂದರೆ ದೇವರು ಹಂಗಿಸದೆ ಎಲ್ಲರಿಗೂ ಉದಾರವಾಗಿ ಕೊಡುವಾತನಾಗಿದ್ದಾನೆ.

6ಆದರೆ ದೇವರ ಬಳಿ ಬೇಡುವವನು ಸ್ವಲ್ಪವೂ ಸಂದೇಹಪಡದೆ ನಂಬಿಕೆಯಿಂದ ಬೇಡಿಕೊಳ್ಳಲಿ. ಸಂದೇಹಪಡುವವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ಅಲೆಯಂತೆ ಅತ್ತಿತ್ತ ಅಲೆಯುತ್ತಿರುತ್ತಾನೆ.

7ಇಂಥವನು ತಾನು ಕರ್ತನಿಂದ ಬೇಡಿಕೊಂಡಿದ್ದೆಲ್ಲವನ್ನು ಹೊಂದುವೆನೆಂದು ಭಾವಿಸದೆ ಇರಲಿ.

8ಏಕೆಂದರೆ ಅವನು ಎರಡು ಮನಸ್ಸುಳ್ಳವನು, ತನ್ನ ನಡತೆಯಲ್ಲಿ ಚಂಚಲನಾಗಿದ್ದಾನೆ.

ಯಾಕೋಬನು 1

ಇಂಗ್ಲಿಷ್‌ನಲ್ಲಿ

Berean Standard BibleJames 1:5Now if any of you lacks wisdom, he should ask God, who gives generously to all without finding fault, and it will be given to him.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಜ್ಞಾನೋ 2:3–6ಬುದ್ಧಿಗಾಗಿ ಮೊರೆಯಿಟ್ಟು, ವಿವೇಕಕ್ಕಾಗಿ ಕೂಗಿಕೋ. ಅದನ್ನು ಬೆಳ್ಳಿಯಂತೆಯು ಮತ್ತು ನಿಕ್ಷೇಪದಂತೆಯು ಹುಡುಕು; ಆಗ ನೀನು ಯೆಹೋವನ ಭಯವನ್ನು ಅರಿತು, ದೈವಜ್ಞಾನವನ್ನು ಪಡೆದುಕೊಳ್ಳುವಿ. ಯೆಹೋವನೇ ಜ್ಞಾನವನ್ನು ಕೊಡುವಾತನು, ಆತನ ಬಾಯಿಂದಲೇ ತಿಳಿವಳಿಕೆಯೂ, ವಿವೇಕವೂ ಹೊರಟು ಬರುತ್ತವೆ.
ಯೋಹಾ 15:7ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನಾದರೂ ಬೇಡಿಕೊಳ್ಳಿರಿ ಅದು ನಿಮಗೆ ದೊರೆಯುವುದು.
ಯೆರೆ 29:12–13ನೀವು ನನಗೆ ಮೊರೆಯಿಡುವಿರಿ, ನನ್ನನ್ನು ಪ್ರಾರ್ಥಿಸಲು ಹೋಗುವಿರಿ; ನಾನು ಕಿವಿಗೊಡುವೆನು. ನೀವು ನನ್ನನ್ನು ಹುಡುಕುವಿರಿ, ಮನಃಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ.
ಜ್ಞಾನೋ 3:5–7ಸ್ವಬುದ್ಧಿಯನ್ನೇ ಆಧಾರಮಾಡಿಕೊಳ್ಳದೆ ಪೂರ್ಣಮನಸ್ಸಿನಿಂದ ಯೆಹೋವನಲ್ಲಿ ಭರವಸವಿಡು. ನಿನ್ನ ಎಲ್ಲಾ ನಡವಳಿಕೆಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು; ಆತನೇ ನಿನ್ನ ಮಾರ್ಗಗಳನ್ನು ಸರಾಗಮಾಡುವನು. ನೀನೇ ಬುದ್ಧಿವಂತನು ಎಂದೆಣಿಸದೆ, ಯೆಹೋವನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು.
1 ಯೋಹಾ 5:14–15ಮತ್ತು ದೇವರ ಚಿತ್ತಾನುಸಾರವಾಗಿ ಏನಾದರೂ ಬೇಡಿಕೊಂಡರೆ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬ ಭರವಸೆಯು ಆತನಲ್ಲಿ ನಮಗುಂಟು. ನಾವು ಏನು ಬೇಡಿಕೊಂಡರೂ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬುದು ನಮಗೆ ತಿಳಿದಿದ್ದರೆ, ನಾವು ಬೇಡಿದವುಗಳು ಆತನಿಂದ ನಮಗೆ ದೊರೆಯುತ್ತವೆಂಬುದು ನಮಗೆ ತಿಳಿಯುತ್ತದೆ.
2 ಪೂರ್ವ 1:10ನಿನ್ನ ಪ್ರಜೆಗಳಾದ ಈ ಮಹಾ ಜನಾಂಗವನ್ನು ಮುನ್ನಡೆಸುವುದಕ್ಕೂ, ಆಳುವುದಕ್ಕೂ, ನ್ಯಾಯತೀರಿಸುವುದಕ್ಕೂ ಜ್ಞಾನ ವಿವೇಕಗಳನ್ನು ಅನುಗ್ರಹಿಸು” ಎಂದು ಕೇಳಿದನು.
ಮತ್ತಾ 7:7–11“ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು; ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನೂ ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯಲ್ಪಡುವುದು. “ನಿಮ್ಮಲ್ಲಿ ಯಾವನು ರೊಟ್ಟಿ ಕೇಳುವ ಮಗನಿಗೆ ಕಲ್ಲನ್ನು ಕೊಡುವನೋ? ಮೀನು ಕೇಳಿದರೆ ಹಾವನ್ನು ಕೊಡುವನೋ? ಹಾಗಾದರೆ ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಉಡುಗೊರೆಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯ ವರಗಳನ್ನು ಕೊಡುವನಲ್ಲವೇ?
ಯಾಕೋ 3:17ಆದರೆ ಮೇಲಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದ್ದು, ಕರುಣೆ ಮತ್ತು ಒಳ್ಳೆ ಫಲಗಳಿಂದ ತುಂಬಿರುವಂಥದ್ದು, ಪಕ್ಷಪಾತವಿಲ್ಲದ್ದು, ಪ್ರಾಮಾಣಿಕವಾದ್ದದು ಆಗಿದೆ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು