Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಯಾಕೋಬನು 4:17

ಬೈಬಲ್ ವಚನ · IRV

ಯಾಕೋಬನು 4:17

ಹೀಗಿರುವುದರಿಂದ ಒಳ್ಳೆಯದನ್ನು ಮಾಡಬೇಕೆಂದು ಗೊತ್ತಿದರೂ ಅದನ್ನು ಮಾಡದೆ ಇರುವವನು ಪಾಪ ಮಾಡುವವನಾಗಿದ್ದಾನೆ.

ಇಡೀ ಅಧ್ಯಾಯ ಓದಿ: ಯಾಕೋಬನು 4

ಸಂದರ್ಭದಲ್ಲಿ

14ನಾಳೆ ಏನಾಗುವುದೋ ನಿಮಗೆ ತಿಳಿಯದು. ನಿಮ್ಮ ಜೀವಮಾನವು ಎಂಥದ್ದು? ನೀವು ಸ್ವಲ್ಪ ಹೊತ್ತು ಕಾಣಿಸಿಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದ್ದೀರಿ.

15ಆದುದರಿಂದ ನೀವು ಅಂಥ ಮಾತನ್ನು ಬಿಟ್ಟು “ಕರ್ತನ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ ಆ ಕೆಲಸವನ್ನಾಗಲಿ ಮಾಡುವೆವು” ಎಂದು ಹೇಳಬೇಕು.

16ಆದರೆ ನೀವು ನಿಮ್ಮ ಅಹಂನಿಂದ ಹೊಗಳಿಕೊಳ್ಳುತ್ತೀರಿ. ಅಂಥ ಹೊಗಳಿಕೆಯೆಲ್ಲಾ ಕೆಟ್ಟದ್ದೇ.

17ಹೀಗಿರುವುದರಿಂದ ಒಳ್ಳೆಯದನ್ನು ಮಾಡಬೇಕೆಂದು ಗೊತ್ತಿದರೂ ಅದನ್ನು ಮಾಡದೆ ಇರುವವನು ಪಾಪ ಮಾಡುವವನಾಗಿದ್ದಾನೆ.

ಯಾಕೋಬನು 4

ಇಂಗ್ಲಿಷ್‌ನಲ್ಲಿ

Berean Standard BibleJames 4:17Anyone, then, who knows the right thing to do, yet fails to do it, is guilty of sin.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಯೋಹಾ 9:41ಯೇಸು ಅವರಿಗೆ, “ನೀವು ಕುರುಡರಾಗಿದ್ದರೆ ನಿಮಗೆ ಪಾಪವು ಇರುತ್ತಿರಲಿಲ್ಲ. ಆದರೆ ‘ನಿಮಗೆ ಕಣ್ಣುಕಾಣುತ್ತವೆ’ ಎಂದು ನೀವು ಹೇಳುವುದರಿಂದ ನಿಮ್ಮ ಪಾಪ ನಿಮಗೆ ಉಳಿದಿದೆ” ಎಂದನು.
ಯೋಹಾ 13:17ನೀವು ಇವುಗಳನ್ನು ತಿಳಿದುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.
ಯೋಹಾ 15:22ನಾನು ಬಾರದೆ ಮತ್ತು ಅವರ ಸಂಗಡ ಮಾತನಾಡದೆ ಹೋಗಿದ್ದಾರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಅವರ ಪಾಪಕ್ಕಾಗಿ ಈಗ ಯಾವ ನೆಪವೂ ಇಲ್ಲ.
2 ಪೇತ್ರ 2:21ಅವರು ನೀತಿಮಾರ್ಗವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯನ್ನು ಬಿಟ್ಟು ದೂರ ಹೋಗುವುದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಹೋಗಿದ್ದರೆ ಚೆನ್ನಾಗಿತ್ತು.
ಲೂಕ 12:47–48ತನ್ನ ಯಜಮಾನನ ಇಷ್ಟಾರ್ಥವನ್ನು ಆಳು ಅರಿತುಕೊಂಡಿದ್ದರೂ ಅಜಾಗರೂಕನಾಗಿ ಅವನ ಚಿತ್ತಕ್ಕನುಸಾರ ನಡೆಯದಿದ್ದರೆ ಕಠಿಣವಾದ ಶಿಕ್ಷೆಗೆ ಗುರಿಯಾಗುವನು. ತಿಳಿಯದೆ ಅಜಾಗರೂಕನಾಗಿದ್ದರೆ ಕಡಿಮೆ ಶಿಕ್ಷೆಗೆ ಗುರಿಯಾಗುತ್ತಾನೆ. ಯಾವನಿಗೆ ಬಹಳವಾಗಿ ಕೊಡಲ್ಪಟ್ಟಿದೆಯೋ ಅವನ ಕಡೆಯಿಂದ ಬಹಳವಾಗಿ ನಿರೀಕ್ಷಿಸಲ್ಪಡುವುದು. ಇದಲ್ಲದೆ ಯಾವನ ವಶಕ್ಕೆ ಬಹಳವಾಗಿ ಒಪ್ಪಿಸಿದೆಯೋ ಅವನ ಕಡೆಯಿಂದ ಇನ್ನೂ ಹೆಚ್ಚಾಗಿ ಕೇಳಲ್ಪಡುವುದು.
ರೋಮಾ 1:32ಇಂಥವುಗಳನ್ನು ನಡಿಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೇವವಿಧಿಯು ಅವರಿಗೆ ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವುದಲ್ಲದೆ ಮಾಡುವವರನ್ನೂ ಹೊಗಳುತ್ತಾ ಪ್ರೇರೇಪಿಸುತ್ತಾರೆ.
ರೋಮಾ 1:20–21ಹೇಗೆಂದರೆ ಕಣ್ಣಿಗೆ ಕಾಣದಿರುವ ಆತನ ಗುಣಲಕ್ಷಣಗಳು ಅಂದರೆ ಆತನ ನಿತ್ಯ ಶಕ್ತಿಯೂ, ದೈವತ್ವವೂ, ಜಗದುತ್ಪತ್ತಿ ಮೊದಲುಗೊಂಡು ಆತನು ಮಾಡಿದ ಸೃಷ್ಟಿಗಳ ಮೂಲಕ ಬುದ್ಧಿಗೆ ಗೊತ್ತಾಗಿ ಕಾಣಬರುತ್ತದೆ. ಹೀಗಿರುವುದರಿಂದ ಅವರು ನೆಪವನ್ನು ಹೇಳಲು ಆಗುವುದಿಲ್ಲ. ಯಾಕೆಂದರೆ ದೇವರ ವಿಷಯವಾಗಿ ಅವರಿಗೆ ತಿಳಿವಳಿಕೆಯಿದ್ದರೂ ಅವರು ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ. ಆತನ ಉಪಕಾರಗಳನ್ನು ನೆನಸಿ ಆತನನ್ನು ಸ್ತುತಿಸಲಿಲ್ಲ. ಅವರು ಎಷ್ಟೇ ವಿಚಾರ ಮಾಡಿದರೂ ಫಲ ಕಾಣಲಿಲ್ಲ. ವಿವೇಕವಿಲ್ಲದ ಅವರ ಮನಸ್ಸು ಕತ್ತಲಾಗಿಬಿಟ್ಟಿದೆ.
ರೋಮಾ 7:13ಹಾಗಾದರೆ ಒಳ್ಳೆಯದೆ ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಅಲ್ಲ. ಪಾಪವೇ ಮರಣಕ್ಕೆ ಕಾರಣವಾದದ್ದು. ಅದು ಹಿತವಾದದರ ಮೂಲಕ ನನಗೆ ಮರಣವನ್ನು ಉಂಟುಮಾಡಿದ್ದರಿಂದ ಪಾಪವೇ ಎಂದು ಕಾಣಿಸಿಕೊಂಡಿತು. ಮತ್ತು ಆಜ್ಞೆಯ ಮೂಲಕ ಪಾಪವು ಕೇವಲ ಪಾಪಸ್ವರೂಪವೇ ಎಂದು ಸ್ಪಷ್ಟವಾಯಿತು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು