Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಯಾಕೋಬನು 4:7

ಬೈಬಲ್ ವಚನ · IRV

ಯಾಕೋಬನು 4:7

ಹೀಗಿರಲಾಗಿ ದೇವರಿಗೆ ಅಧೀನರಾಗಿದ್ದು ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿ ಹೋಗುವನು.

ಇಡೀ ಅಧ್ಯಾಯ ಓದಿ: ಯಾಕೋಬನು 4

ಸಂದರ್ಭದಲ್ಲಿ

4ವ್ಯಭಿಚಾರಿಗಳೇ, ಇಹಲೋಕದ ಗೆಳೆತನವು ದೇವರಿಗೆ ಹಗೆತನವೆಂದು ನಿಮಗೆ ತಿಳಿಯದೋ? ಆದ್ದರಿಂದ ಲೋಕಕ್ಕೆ ಸ್ನೇಹಿತನಾಗಿರಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.

5ದೇವರು ನಮ್ಮಲ್ಲಿ ಇರಿಸಿರುವ ಪವಿತ್ರಾತ್ಮನು ಅಭಿಮಾನತಾಪದಿಂದ ನಮಗೋಸ್ಕರ ಹಂಬಲಿಸುತ್ತಾನೆಂಬ ವೇದೋಕ್ತಿ ಬರಿ ಮಾತೆಂದು ನೀವು ಭಾವಿಸುತ್ತೀರೋ?

6ಆತನು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದುದರಿಂದ, “ದೇವರು ಅಹಂಕಾರಿಗಳಿಗೆ ಎದುರಾಳಿಯಾಗಿದ್ದಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ” ಎಂದು ಧರ್ಮಶಾಸ್ತ್ರವು ಹೇಳುತ್ತದೆ.

7ಹೀಗಿರಲಾಗಿ ದೇವರಿಗೆ ಅಧೀನರಾಗಿದ್ದು ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿ ಹೋಗುವನು.

8ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ.

9ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಿಮ್ಮ ನಗುವನ್ನು ಬಿಟ್ಟು ಗೋಳಾಡಿರಿ. ಸಂತೋಷವನ್ನು ಬಿಟ್ಟು ಶೋಕಿಸಿರಿ.

10ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆಗ ಆತನು ನಿಮ್ಮನ್ನು ಮೇಲಕ್ಕೆತ್ತುವನು.

ಯಾಕೋಬನು 4

ಇಂಗ್ಲಿಷ್‌ನಲ್ಲಿ

Berean Standard BibleJames 4:7Submit yourselves, then, to God. Resist the devil, and he will flee from you.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

1 ಪೇತ್ರ 5:8–9ಸ್ವಸ್ಥಚಿತ್ತರಾಗಿರಿ ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ. ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ. ಲೋಕದಲ್ಲಿರುವ ನಿಮ್ಮ ಸಹೋದರರೂ ಅಂಥ ಬಾಧೆಗಳನ್ನೇ ಅನುಭವಿಸುತ್ತಿದ್ದಾರೆಂಬುದು ನಿಮಗೆ ತಿಳಿದಿದೆ.
ಎಫೆ 4:27ಸೈತಾನನಿಗೆ ಅವಕಾಶಕೊಡಬೇಡಿರಿ.
ಎಫೆ 6:11–12ಸೈತಾನನ ತಂತ್ರೋಪಾಯಗಳನ್ನು ನೀವು ಎದುರಿಸಿ ನಿಲ್ಲುವುದಕ್ಕೆ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ. ನಮಗೆ ಹೋರಾಟವಿರುವುದು ಮನುಷ್ಯಮಾತ್ರದವರ ಸಂಗಡವಲ್ಲ. ರಾಜತ್ವಗಳ ಮೇಲೆಯೂ, ಅಧಿಕಾರಿಗಳ ಮೇಲೆಯೂ, ಈ ಅಂಧಕಾರದ ಲೋಕಾಧಿಪತಿಗಳ ಮೇಲೆಯೂ, ಆಕಾಶ ಮಂಡಲಗಳಲ್ಲಿರುವ ದುರಾತ್ಮಗಳ ಸೇನೆಯ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ.
1 ಪೇತ್ರ 5:6ಹೀಗಿರುವುದರಿಂದ ದೇವರ ಬಲವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ. ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ಎತ್ತುವನು.
ಇಬ್ರಿ 12:9ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದ ಲೌಕಿಕ ತಂದೆಗಳನ್ನು ನಾವು ಸನ್ಮಾನಿಸಿತ್ತೇವಲ್ಲ. ನಮ್ಮ ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಹೆಚ್ಚಾಗಿ ಅಧೀನರಾಗಿ ಜೀವಿಸಬೇಕಲ್ಲವೇ?
ರೋಮಾ 10:3ಅವರು ದೇವರಿಂದ ದೊರಕುವ ನೀತಿಯನ್ನರಿಯದೆ ಸ್ವಂತ ನೀತಿಯನ್ನೇ; ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದುದ್ದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.
ಮತ್ತಾ 11:29ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು.
2 ಪೂರ್ವ 30:8ಈಗ ನೀವು ನಿಮ್ಮ ಪೂರ್ವಿಕರಂತೆ ರಾಜಾಜ್ಞೆಗೆ ಮಣಿಯದವರಾಗಿರಬೇಡಿರಿ, ಯೆಹೋವನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಯೆಹೋವನು ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡಿರುವ ಪವಿತ್ರಾಲಯಕ್ಕೆ ಬಂದು ಆತನನ್ನು ಆರಾಧಿಸಿರಿ. ಆಗ ನಿಮ್ಮ ಮೇಲಿರುವ ಆತನ ಉಗ್ರಕೋಪವು ತೊಲಗಿಹೋಗುವುದು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು