ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಯಾಕೋಬನು 5:16
ಬೈಬಲ್ ವಚನ · IRV
ಯಾಕೋಬನು 5:16
ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ,, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ.
ಸಂದರ್ಭದಲ್ಲಿ
13ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದರೆ, ಅವನು ದೇವರನ್ನು ನಂಬಿಕೆಯಿಂದ ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷಪಡುವವನು ಇದ್ದರೆ, ಅವನು ದೇವರಿಗೆ ಸ್ತುತಿಗೀತೆಗಳನ್ನು ಹಾಡಲಿ.
14ನಿಮ್ಮಲ್ಲಿ ಯಾವನಾದರೂ ಅಸ್ವಸ್ಥನಾಗಿರುವವನು ಇದ್ದರೆ, ಅವನು ಸಭೆಯ ಹಿರಿಯರನ್ನು ಕರೆದು ಪ್ರಾರ್ಥಿಸುವಂತೆ ವಿನಂತಿಸಲಿ. ಅವರು ಕರ್ತನ ಹೆಸರಿನಲ್ಲಿ ಅವನಿಗೆ ಎಣ್ಣೆ ಹಚ್ಚಿ ಅವನಿಗೋಸ್ಕರ ದೇವರನ್ನು ಪ್ರಾರ್ಥಿಸಲಿ.
15ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುವುದು ಮತ್ತು ಕರ್ತನು ಅವನನ್ನು ಎಬ್ಬಿಸುವನು; ಅವನು ಪಾಪ ಮಾಡಿದವನಾಗಿದ್ದರೆ, ದೇವರು ಆ ಪಾಪಗಳನ್ನು ಕ್ಷಮಿಸುವನು.
16ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ,, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ.
17ಎಲೀಯನು ನಮಗೆ ಸಮಾನವಾದ ಸ್ವಭಾವವುಳ್ಳವನಾಗಿದ್ದನು, ಅವನು ಮಳೆ ಬರಬಾರದೆಂದು ಭಕ್ತಿಯಿಂದ ಪ್ರಾರ್ಥಿಸಲು ಮೂರು ವರ್ಷ ಆರು ತಿಂಗಳವರೆಗೂ ಭೂಮಿಯ ಮೇಲೆ ಮಳೆ ಬೀಳಲಿಲ್ಲ.
18ತಿರುಗಿ ಅವನು ಪ್ರಾರ್ಥನೆ ಮಾಡಲು ಆಕಾಶವು ಮಳೆಗರೆಯಿತು, ಭೂಮಿಯು ಫಲಕೊಟ್ಟಿತು.
19ನನ್ನ ಸಹೋದರರೇ, ನಿಮ್ಮಲ್ಲಿ ಯಾರಾದರು ಸತ್ಯ ಮಾರ್ಗವನ್ನು ಬಿಟ್ಟು ತಪ್ಪಿ ನಡೆಯುತ್ತಿದ್ದರೆ ಮತ್ತೊಬ್ಬನು ಅವನನ್ನು ಸನ್ಮಾರ್ಗಕ್ಕೆ ತಂದರೆ;
ಇಂಗ್ಲಿಷ್ನಲ್ಲಿ
Therefore confess your sins to each other and pray for each other so that you may be healed. The prayer of a righteous man has great power to prevail.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ನೀವು ನನಗೆ ಮೊರೆಯಿಡುವಿರಿ, ನನ್ನನ್ನು ಪ್ರಾರ್ಥಿಸಲು ಹೋಗುವಿರಿ; ನಾನು ಕಿವಿಗೊಡುವೆನು. ನೀವು ನನ್ನನ್ನು ಹುಡುಕುವಿರಿ, ಮನಃಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ.ಯೆಹೋವನು ದುಷ್ಟರಿಗೆ ದೂರ, ಶಿಷ್ಟರ ಬಿನ್ನಹಕ್ಕೆ ಹತ್ತಿರ.ನೀವು ನಂಬಿಕೊಂಡು ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನೆಲ್ಲಾ ಹೊಂದುವಿರಿ” ಅಂದನು.ಯೆಹೋವನು ನೀತಿವಂತರನ್ನು ಕಟಾಕ್ಷಿಸುತ್ತಾನೆ; ಅವರು ಮೊರೆಯಿಡುವಾಗ ಕಿವಿಗೊಡುತ್ತಾನೆ.ಪಾಪಿಷ್ಠರ ಪ್ರಾರ್ಥನೆಯನ್ನು ದೇವರು ಕೇಳುವುದಿಲ್ಲ, ಆದರೆ ಯಾರು ಭಕ್ತರಾಗಿದ್ದು ಆತನ ಚಿತ್ತದಂತೆ ನಡೆಯುತ್ತಾರೋ ಅವರ ಪ್ರಾರ್ಥನೆಯನ್ನು ಕೇಳುತ್ತಾನೆಂದು ಬಲ್ಲೆವು.ಯೆಹೋವನಿಗೆ ಮೊರೆಯಿಡುವವರು, ಯಥಾರ್ಥವಾಗಿ ಮೊರೆಯಿಡುವುದಾದರೆ ಆತನು ಹತ್ತಿರವಾಗಿಯೇ ಇದ್ದಾನೆ. ತನ್ನಲ್ಲಿ ಭಯಭಕ್ತಿಯುಳ್ಳವರ ಇಷ್ಟವನ್ನು ನೆರವೇರಿಸುತ್ತಾನೆ, ಅವರ ಕೂಗನ್ನು ಕೇಳಿ ರಕ್ಷಿಸುತ್ತಾನೆ.‘ನನ್ನನ್ನು ಕೇಳಿಕೋ, ನಾನು ನಿನಗೆ ಸದುತ್ತರವನ್ನು ದಯಪಾಲಿಸಿ, ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು