Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಯೆರೆಮೀಯನು 1:5

ಬೈಬಲ್ ವಚನ · IRV

ಯೆರೆಮೀಯನು 1:5

“ನಾನು ನಿನ್ನನ್ನು ಗರ್ಭದಲ್ಲಿ ರೂಪಿಸುವುದಕ್ಕೆ ಮುಂಚೆ ತಿಳಿದಿದ್ದೆನು; ನೀನು ಉದರದಿಂದ ಬರುವುದಕ್ಕೆ ಮೊದಲೇ ನಿನ್ನನ್ನು ಪ್ರತಿಷ್ಠಿಸಿದ್ದೆನು. ಜನಾಂಗಗಳಿಗೆ ಪ್ರವಾದಿಯನ್ನಾಗಿ ನಿನ್ನನ್ನು ನೇಮಿಸಿದ್ದೇನೆ” ಎಂಬ ವಾಕ್ಯವನ್ನು ದಯಪಾಲಿಸಿದನು.

ಇಡೀ ಅಧ್ಯಾಯ ಓದಿ: ಯೆರೆಮೀಯನು 1

ಸಂದರ್ಭದಲ್ಲಿ

2ಯೆಹೂದದ ಅರಸನೂ, ಆಮೋನನ ಮಗನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಲ್ಲಿ ಯೆಹೋವನಿಂದ ಈ ವಾಕ್ಯವನ್ನು ಹೊಂದಿದನು.

3ಇದಲ್ಲದೆ ಯೆಹೂದದ ಅರಸನೂ, ಯೋಷೀಯನ ಮಗನೂ ಆದ ಯೆಹೋಯಾಕೀಮನ ಕಾಲದಿಂದ ಯೆಹೂದದ ಅರಸನೂ, ಯೋಷೀಯನ ಮಗನೂ ಆದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೆಯ ವರ್ಷದ ಐದನೆಯ ತಿಂಗಳಿನಲ್ಲಿ ಯೆರೂಸಲೇಮಿನವರು ಸೆರೆಹೋಗುವ ತನಕ ಅವನು ಯೆಹೋವನ ವಾಕ್ಯವನ್ನು ಹೊಂದುತ್ತಾ ಇದ್ದನು.

4ಕರ್ತನಾದ ಯೆಹೋವನು ನನಗೆ,

5“ನಾನು ನಿನ್ನನ್ನು ಗರ್ಭದಲ್ಲಿ ರೂಪಿಸುವುದಕ್ಕೆ ಮುಂಚೆ ತಿಳಿದಿದ್ದೆನು; ನೀನು ಉದರದಿಂದ ಬರುವುದಕ್ಕೆ ಮೊದಲೇ ನಿನ್ನನ್ನು ಪ್ರತಿಷ್ಠಿಸಿದ್ದೆನು. ಜನಾಂಗಗಳಿಗೆ ಪ್ರವಾದಿಯನ್ನಾಗಿ ನಿನ್ನನ್ನು ನೇಮಿಸಿದ್ದೇನೆ” ಎಂಬ ವಾಕ್ಯವನ್ನು ದಯಪಾಲಿಸಿದನು.

6ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ನಾನು ಮಾತು ಬಲ್ಲವನಲ್ಲ, ಬಾಲಕನು” ಎಂದು ಅರಿಕೆ ಮಾಡಿದೆನು.

7ಆಗ ಯೆಹೋವನು ನನಗೆ, “ಬಾಲಕನು ಎನ್ನಬೇಡ; ನಾನು ಯಾರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಅವರೆಲ್ಲರ ಬಳಿಗೆ ನೀನು ಖಂಡಿತವಾಗಿ ಹೋಗುವಿ; ನಾನು ಆಜ್ಞಾಪಿಸುವುದನ್ನೆಲ್ಲಾ ಖಂಡಿತವಾಗಿ ನುಡಿಯುವಿ.

8ಅವರಿಗೆ ಅಂಜಬೇಡ; ನಿನ್ನನ್ನು ಉದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು” ಎಂದು ಹೇಳಿದನು.

ಯೆರೆಮೀಯನು 1

ಇಂಗ್ಲಿಷ್‌ನಲ್ಲಿ

Berean Standard BibleJeremiah 1:5“Before I formed you in the womb I knew you, and before you were born I set you apart and appointed you as a prophet to the nations.”

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಕೀರ್ತ 139:16ನಾನು ಇನ್ನೂ ಕೇವಲ ಪಿಂಡವಾಗಿರುವಾಗ, ನಿನ್ನ ಕಣ್ಣುಗಳು ನನ್ನನ್ನು ನೋಡಿದವು, ನನ್ನ ಆಯುಷ್ಕಾಲದ ಪ್ರಥಮದಿನವು ಪ್ರಾರಂಭವಾಗುವ ಮೊದಲೇ, ಅದರ ಎಲ್ಲಾ ದಿನಗಳು ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು.
ಯೆಶಾ 49:1ದ್ವೀಪನಿವಾಸಿಗಳೇ, ನನ್ನ ಕಡೆಗೆ ಕಿವಿಗೊಡಿರಿ, ದೂರದ ಜನಾಂಗಗಳೇ, ಆಲಿಸಿರಿ! ನಾನು ಗರ್ಭದಲ್ಲಿದ್ದಾಗಲೇ ಯೆಹೋವನು ನನ್ನನ್ನು ಕರೆದನು, ತಾಯಿಯ ಉದರದಲ್ಲಿದ್ದಂದಿನಿಂದಲೂ ನನ್ನ ಹೆಸರನ್ನು ಹೇಳುತ್ತಿದ್ದಾನೆ.
ಗಲಾ 1:15–16ಆದರೆ ನಾನು ನನ್ನ ತಾಯಿಯ ಗರ್ಭದಲ್ಲಿದ್ದಾಗಲೇ ನನ್ನನ್ನು ಪ್ರತ್ಯೇಕಿಸಿ, ತನ್ನ ಕೃಪೆಯಿಂದ ಕರೆದ ದೇವರು, ತನ್ನ ಮಗನನ್ನು ನನ್ನೊಳಗೆ ಪ್ರಕಟಪಡಿಸುವುದಕ್ಕೆ ಮತ್ತು ಅನ್ಯಜನರಲ್ಲಿ ಆತನನ್ನು ನಾನು ಪ್ರಸಿದ್ಧಿಪಡಿಸುವವನಾಗಬೇಕೆಂದು ಇಚ್ಛಿಸಿದನು. ನಾನು ಕೂಡಲೇ ಮನುಷ್ಯರ ಆಲೋಚನೆಯನ್ನು ಕೇಳದೆ,
ಕೀರ್ತ 71:5–6ಕರ್ತನಾದ ಯೆಹೋವನೇ, ಬಾಲ್ಯದಿಂದ ನನ್ನ ನಿರೀಕ್ಷೆಯೂ, ಭರವಸವೂ ನೀನಲ್ಲವೋ? ನಾನು ಹುಟ್ಟಿದಂದಿನಿಂದ ನಿನ್ನನ್ನೇ ಅವಲಂಬಿಸಿಕೊಂಡಿದ್ದೇನೆ. ತಾಯಿ ಹೆತ್ತಂದಿನಿಂದ ನನ್ನ ಉದ್ಧಾರಕನು ನೀನೇ. ನಾನು ಯಾವಾಗಲೂ ಹಿಗ್ಗುತ್ತಿರುವುದು ನಿನ್ನಲ್ಲಿಯೇ.
ರೋಮಾ 8:29ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡನೋ ಅವರನ್ನು ತನ್ನ ಮಗನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದನು.
ಯೆಶಾ 49:5ಆಹಾ, ನಾನು ಯೆಹೋವನ ದೃಷ್ಟಿಯಲ್ಲಿ ಮಾನ್ಯನು, ನನ್ನ ದೇವರೇ ನನಗೆ ಬಲವು. ಯಾಕೋಬ್ಯರನ್ನು ತನ್ನ ಕಡೆಗೆ ಸೇರಿಸಿಕೊಳ್ಳಬೇಕೆಂತಲೂ, ಇಸ್ರಾಯೇಲ್ ತನ್ನ ಕಡೆಗೆ ಕೂಡಿಬರಬೇಕೆಂತಲೂ ಆತನು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನಲ್ಲವೆ.
ಯೆಶಾ 44:2ನಿನ್ನನ್ನು ನಿರ್ಮಾಣಮಾಡಿ, ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯ ಮಾಡುವವನಾದ ಯೆಹೋವನು ಹೀಗೆನ್ನುತ್ತಾನೆ, “ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಯೆಶುರೂನೇ, ಭಯಪಡಬೇಡ!
2 ತಿಮೊ 2:19–21ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ “ತನ್ನವರು ಯಾರೆಂಬುದನ್ನು ಕರ್ತನು ತಿಳಿದಿದ್ದಾನೆ” ಎಂತಲೂ “ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಲಿಖಿತವಾಗಿದೆ. ದೊಡ್ಡ ಮನೆಯಲ್ಲಿ ಬೆಳ್ಳಿ ಬಂಗಾರದ ಪಾತ್ರೆಗಳಲ್ಲದೆ, ಮರದ ಪಾತ್ರೆಗಳೂ, ಮಣ್ಣಿನ ಪಾತ್ರೆಗಳೂ ಇರುತ್ತವೆ. ಅವುಗಳಲ್ಲಿ ಕೆಲವನ್ನು ಉತ್ತಮವಾದ ಬಳಕೆಗೂ ಕೆಲವನ್ನು ಹೀನವಾದ ಬಳಕೆಗೂ ಬಳಸಲಾಗುತ್ತದೆ. ಹೀಗಿರಲಾಗಿ ಒಬ್ಬನು ಹೀನ ನಡತೆಯುಳ್ಳವರ ಸಹವಾಸವನ್ನು ಬಿಟ್ಟು ತನ್ನನ್ನು ಶುದ್ಧಮಾಡಿಕೊಂಡರೆ, ಅವನು ಉತ್ತಮವಾದ ಬಳಕೆಗೆ ಯೋಗ್ಯನಾಗಿರುವನು. ಅವನು ದೇವರ ಸೇವೆಗೆ ಪ್ರತಿಷ್ಠಿತನಾಗಿಯೂ, ಯಜಮಾನನಿಗೆ ಉಪಯುಕ್ತನಾಗಿಯೂ, ಸಕಲ ಸತ್ಕ್ರಿಯೆಗಳನ್ನು ಮಾಡುವುದಕ್ಕೆ ಸಿದ್ಧನಾಗಿಯೂ ಇರುವನು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು