ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಯೆರೆಮೀಯನು 29:11
ಬೈಬಲ್ ವಚನ · IRV
ಯೆರೆಮೀಯನು 29:11
ಇವರಿಗೆ ಒಳ್ಳೆಯದಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ.
ಸಂದರ್ಭದಲ್ಲಿ
8ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಿಮ್ಮ ಮಧ್ಯದಲ್ಲಿರುವ ನಿಮ್ಮ ಪ್ರವಾದಿಗಳಿಂದಲೂ, ಶಕುನದವರಿಂದಲೂ ಮೋಸಹೋಗಬೇಡಿರಿ; ನಿಮಗಾಗಿ ಕನಸುಕಂಡು ಹೇಳುವವರಿಗೆ ಕಿವಿಗೊಡಬೇಡಿರಿ.
9ಅವರು ನನ್ನ ಹೆಸರಿನಲ್ಲಿ ನಿಮಗೆ ಸುಳ್ಳನ್ನು ಸಾರುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ. ಇದು ಯೆಹೋವನ ನುಡಿ” ಎಂದು ಬರೆಯಲ್ಪಟ್ಟಿತು.
10ಯೆಹೋವನು ಇಂತೆನ್ನುತ್ತಾನೆ, “ಬಾಬೆಲ್ ರಾಜ್ಯವು ಎಪ್ಪತ್ತು ವರ್ಷ ಪ್ರಬಲಿಸಿದ ಮೇಲೆ ನಾನು ನಿಮ್ಮನ್ನು ಕಟಾಕ್ಷಿಸಿ, ಈ ಸ್ಥಳಕ್ಕೆ ತಿರುಗಿ ಬರಮಾಡುವೆನೆಂಬ ನನ್ನ ಶುಭವಾಕ್ಯವನ್ನು ನಿಮಗಾಗಿ ನೆರವೇರಿಸುವೆನು.
11ಇವರಿಗೆ ಒಳ್ಳೆಯದಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ.
12ನೀವು ನನಗೆ ಮೊರೆಯಿಡುವಿರಿ, ನನ್ನನ್ನು ಪ್ರಾರ್ಥಿಸಲು ಹೋಗುವಿರಿ; ನಾನು ಕಿವಿಗೊಡುವೆನು.
13ನೀವು ನನ್ನನ್ನು ಹುಡುಕುವಿರಿ, ಮನಃಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ.
14ನಾನು ನಿಮಗೆ ದೊರೆಯುವೆನು, ನಿಮ್ಮನ್ನು ನಿಮ್ಮ ದುರವಸ್ಥೆಯಿಂದ ತಪ್ಪಿಸಿ, ನಾನು ನಿಮ್ಮನ್ನು ಅಟ್ಟಿಬಿಟ್ಟಿದ್ದ ಸಮಸ್ತ ದೇಶಗಳಿಂದಲೂ, ಸಕಲಜನಾಂಗಗಳ ಮಧ್ಯದಿಂದಲೂ ಒಟ್ಟುಗೂಡಿಸಿ ನಿಮ್ಮನ್ನು ಯಾವ ಸ್ಥಳದಿಂದ ಸೆರೆಗೆ ಸಾಗಿಸಿದೆನೋ ಅಲ್ಲಿಗೆ ತಿರುಗಿ ಬರಮಾಡುವೆನು, ಇದು ಯೆಹೋವನ ನುಡಿ” ಎಂಬುದೇ.
ಇಂಗ್ಲಿಷ್ನಲ್ಲಿ
For I know the plans I have for you, declares the LORD, plans to prosper you and not to harm you, to give you a future and a hope.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ಯೆಹೋವನು ಹೀಗೆನ್ನುತ್ತಾನೆ, “ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ, ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ. ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ, ನಿಮ್ಮ ಮಾರ್ಗಗಳಿಗಿಂತ ನನ್ನ ಮಾರ್ಗಗಳೂ, ನಿಮ್ಮ ಆಲೋಚನೆಗಳಿಗಿಂತ ನನ್ನ ಆಲೋಚನೆಗಳೂ ಅಷ್ಟು ಉನ್ನತವಾಗಿವೆ. ಮಳೆಯೂ, ಹಿಮವೂ ಆಕಾಶದಿಂದ ಬಿದ್ದು, ಭೂಮಿಯನ್ನು ತೋಯಿಸಿ, ಹಸರುಗೊಳಿಸಿ ಫಲಿಸುವಂತೆ ಮಾಡಿ, ಬಿತ್ತುವವನಿಗೆ ಬೀಜವನ್ನು, ಉಣ್ಣುವವನಿಗೆ ಆಹಾರವನ್ನು ಒದಗಿಸಿದ ಹೊರತು ಹೇಗೆ ಆಕಾಶಕ್ಕೆ ಸುಮ್ಮನೆ ಹಿಂದಿರುಗುವುದಿಲ್ಲವೋ, ಹಾಗೆಯೇ ನನ್ನ ಬಾಯಿಂದ ಹೊರಟ ಮಾತು, ನನ್ನ ಇಷ್ಟಾರ್ಥವನ್ನು ನೆರವೇರಿಸಿ, ನಾನು ಉದ್ದೇಶಿಸಿದ್ದನ್ನು ಕೈಗೂಡಿಸಿದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವುದಿಲ್ಲ. ನೀವು ಆನಂದಭರಿತರಾಗಿ ಹೊರಡುವಿರಿ, ಸಮಾಧಾನದಿಂದ ಮೆರವಣಿಗೆಯಾಗಿ ಬರುವಿರಿ; ಬೆಟ್ಟ ಗುಡ್ಡಗಳು ನಿಮ್ಮ ಮುಂದೆ ಜಯಘೋಷ ಮಾಡುವವು.ಯೆಹೋವನ ಆಲೋಚನೆಯೋ ಶಾಶ್ವತವಾಗಿಯೇ ನಿಲ್ಲುವುದು; ಆತನ ಸಂಕಲ್ಪವು ಎಂದಿಗೂ ಕದಲುವುದಿಲ್ಲ.ಆಹಾ, ಅವು ಯೆಹೋವನ ಆಲೋಚನೆಗಳನ್ನು ತಿಳಿದಿಲ್ಲ, ಆತನ ಸಂಕಲ್ಪವನ್ನು ಗ್ರಹಿಸಲಿಲ್ಲ, ಕಣಕ್ಕೆ ಹಾಕಿದ ಸಿವುಡುಗಳ ಹಾಗೆ ಅವುಗಳನ್ನು ಕೂಡಿಸಿದ್ದಾನಲ್ಲಾ.ಯೆಹೋವನೇ, ನನ್ನ ದೇವರೇ, ನಿನಗೆ ಸಮಾನನಾದ ದೇವರು ಯಾರು? ನಮ್ಮ ಹಿತಕ್ಕಾಗಿ ನೀನು ಮಾಡಿದ ಆಲೋಚನೆಗಳೂ, ಅದ್ಭುತಕಾರ್ಯಗಳೂ ಎಷ್ಟೋ ವಿಶೇಷವಾಗಿವೆ; ಅವುಗಳನ್ನು ವಿವರಿಸಿ ಹೇಳೋಣವೆಂದರೆ ಅಸಾಧ್ಯ; ಅವು ಅಸಂಖ್ಯಾತವಾಗಿವೆ.ಆತನಂತು ಒಂದೇ ಮನಸ್ಸುಳ್ಳವನಾಗಿದ್ದಾನೆ, ತಿರುಗಿಸಬಲ್ಲವರು ಯಾರು? ತಾನು ಬಯಸಿದ್ದನ್ನೇ ಮಾಡುತ್ತಾನೆ.ಯೆಹೋವನ ರಕ್ಷಣಕಾರ್ಯವನ್ನು ಎದುರುನೋಡುತ್ತಾ ಶಾಂತವಾಗಿ ಕಾದುಕೊಂಡಿರುವುದು ಒಳ್ಳೇಯದು.ಆರಂಭದಲ್ಲಿಯೇ ಅಂತ್ಯವನ್ನು ತಿಳಿಸಿದ್ದೇನೆ. ‘ನನ್ನ ಸಂಕಲ್ಪವು ನಿಲ್ಲುವುದು, ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವೆನು’ ಎಂದು ಹೇಳಿ ಇನ್ನೂ ನಡೆಯದಿರುವ ಕಾರ್ಯಗಳನ್ನು ಪುರಾತನಕಾಲದಲ್ಲಿಯೇ ಅರುಹಿದ್ದೇನೆ. ಮೂಡಲಿಂದ ಒಂದು ಪಕ್ಷಿಯನ್ನು ಬರಮಾಡು, ದೂರದೇಶದಿಂದ ನನ್ನ ಸಂಕಲ್ಪವನ್ನು ನೆರವೇರಿಸುವ ಮನುಷ್ಯನು ಬರಲಿ ಎಂದು ಕರೆದಿದ್ದೇನೆ. ಎಂದು ನಾನೇ ನುಡಿದಿದ್ದೇನೆ, ನಾನು ಅದನ್ನು ಈಡೇರಿಸುವೆನು. ಆಲೋಚಿಸಿದ್ದೇನೆ, ನಾನು ಅದನ್ನು ಸಾಧಿಸುವೆನು.ತರುವಾಯ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು. ನಿಮ್ಮ ಪುತ್ರಪುತ್ರಿಯರು ಪ್ರವಾದಿಸುವರು. ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು. ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು. ಇದಲ್ಲದೆ ಆ ದಿನಗಳಲ್ಲಿ ದಾಸದಾಸಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು. ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನು ಮಾಡುವೆನು. ರಕ್ತ, ಬೆಂಕಿ, ಧೂಮಸ್ತಂಭ ಈ ಉತ್ಪಾತಗಳನ್ನು ಉಂಟುಮಾಡುವೆನು. ಯೆಹೋವನ ಮಹಾ ಭಯಂಕರವಾದ ದಿನವು ಬರುವುದಕ್ಕಿಂತ ಮೊದಲು, ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು. ಆದರೂ ಯೆಹೋವನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವುದು. ಯೆಹೋವನು ತಿಳಿಸಿದಂತೆ ಚೀಯೋನಿನ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ಅನೇಕರು ಉಳಿಯುವರು. ಯೆಹೋವನು ಹೇಳಿದಂತೆಯೇ, ಉಳಿದವರಲ್ಲಿ ಯೆಹೋವನಿಂದ ಕರೆಯಲ್ಪಟ್ಟವರು ಬದುಕುವರು.”ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು