ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಯೋಹಾನನು 1:1
ಬೈಬಲ್ ವಚನ · IRV
ಯೋಹಾನನು 1:1
ಆದಿಯಲ್ಲಿ ವಾಕ್ಯವಿತ್ತು; ಆ ವಾಕ್ಯವು ದೇವರೊಂದಿಗಿತ್ತು; ಆ ವಾಕ್ಯವು ದೇವರಾಗಿತ್ತು.
ಸಂದರ್ಭದಲ್ಲಿ
1ಆದಿಯಲ್ಲಿ ವಾಕ್ಯವಿತ್ತು; ಆ ವಾಕ್ಯವು ದೇವರೊಂದಿಗಿತ್ತು; ಆ ವಾಕ್ಯವು ದೇವರಾಗಿತ್ತು.
2ಆ ವಾಕ್ಯವೆಂಬಾತನು ಆದಿಯಲ್ಲಿ ದೇವರೊಂದಿಗಿದ್ದನು.
3ಸಮಸ್ತವೂ ಆತನ ಮೂಲಕವಾಗಿ ಸೃಷ್ಟಿಯಾಯಿತು. ಸೃಷ್ಟಿಯಾದ ಎಲ್ಲವುಗಳಲ್ಲಿ ಆತನಿಲ್ಲದೆ ಒಂದಾದರೂ ಸೃಷ್ಟಿಯಾಗಲಿಲ್ಲ.
4ಆತನಲ್ಲಿ ಜೀವವಿತ್ತು. ಆ ಜೀವವು ಮನುಷ್ಯರಿಗೆ ಬೆಳಕಾಗಿತ್ತು.
ಇಂಗ್ಲಿಷ್‌ನಲ್ಲಿ
Berean Standard BibleJohn 1:1
In the beginning was the Word, and the Word was with God, and the Word was God.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ಆದಿ 1:1
ಆದಿಯಲ್ಲಿ ದೇವರು ಆಕಾಶವನ್ನು, ಭೂಮಿಯನ್ನು ಸೃಷ್ಟಿಮಾಡಿದನು.ಯೋಹಾ 17:5
ಈಗ ತಂದೆಯೇ, ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲು, ನಿನ್ನ ಬಳಿಯಲ್ಲಿ ನನಗಿದ್ದ ಮಹಿಮೆಯಂತೆಯೇ ನಿನ್ನೊಂದಿಗೆ ನನ್ನನ್ನು ಮಹಿಮೆಪಡಿಸು.ಪ್ರಕ 19:13
ಆತನು ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿಕೊಂಡಿದ್ದನು. ಆತನಿಗೆ ದೇವರ ವಾಕ್ಯವೆಂದು ಹೆಸರು.ಕೊಲೊ 1:17
ಆತನು ಎಲ್ಲಕ್ಕೂ ಮೊದಲು ಇದ್ದಾತನು, ಆತನಲ್ಲಿ ಸಮಸ್ತವು ಒಂದಾಗಿ ನೆಲೆಗೊಂಡಿದ್ದೆ.ಯೋಹಾ 1:14
ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.1 ಯೋಹಾ 1:1–2
ನಾವು ನಿಮಗೆ ಪ್ರಚುರಪಡಿಸುವ ಜೀವವಾಕ್ಯವು ಆದಿಯಿಂದ ಇದ್ದದ್ದು. ನಾವು ಅದನ್ನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು, ಮನಸ್ಸಿಟ್ಟು ಗ್ರಹಿಸಿ ಕೈಯಿಂದ ಮುಟ್ಟಿದ್ದೂ ಆಗಿರುವಂತದ್ದು. ಆ ಜೀವವು ಪ್ರತ್ಯಕ್ಷವಾಯಿತು. ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತಿದ್ದೇವೆ.ಪ್ರಕ 22:13
ನಾನೇ ಆದಿಯೂ, ಅಂತ್ಯವೂ, ಮೊದಲನೆಯವನೂ, ಕಡೆಯವನೂ, ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು