ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಯೋಹಾನನು 10:10
ಬೈಬಲ್ ವಚನ · IRV
ಯೋಹಾನನು 10:10
ಕಳ್ಳನಾದರೋ ಕದ್ದುಕೊಳ್ಳುವುದಕ್ಕೂ, ಕೊಯ್ಯುವುದಕ್ಕೂ ಮತ್ತು ನಾಶಮಾಡುವುದಕ್ಕೂ ಬರುತ್ತಾನೆಯೇ ಹೊರತು ಮತ್ತಾವುದಕ್ಕೂ ಬರುವುದಿಲ್ಲ. ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಅದು ಸಮೃದ್ಧಿಯಾಗಿರಬೇಕೆಂತಲೂ ಬಂದೆನು.
ಸಂದರ್ಭದಲ್ಲಿ
7ಆಗ ಯೇಸು ಪುನಃ ಅವರಿಗೆ, “ನಿಮಗೆ ನಿಜನಿಜವಾಗಿ ಹೇಳುತ್ತೇನೆ; ಕುರಿಗಳಿಗೆ ನಾನೇ ಬಾಗಿಲಾಗಿದ್ದೇನೆ,
8ನನಗಿಂತ ಮೊದಲು ಬಂದವರೆಲ್ಲರು ಕಳ್ಳರೂ, ದರೋಡೆಕೋರರೂ ಆಗಿದ್ದರು. ಆದರೆ ಕುರಿಗಳು ಅವರಿಗೆ ಕಿವಿಗೊಡಲಿಲ್ಲ.
9ನಾನೇ ಆ ಬಾಗಿಲು. ನನ್ನ ಮುಖಾಂತರವಾಗಿ ಯಾವನಾದರೂ ಒಳಗೆ ಪ್ರವೇಶಿಸಿದರೆ ಅವನು ಸುರಕ್ಷಿತನಾಗಿದ್ದು ಒಳಗೆ ಹೋಗುವನು, ಹೊರಗೆ ಬರುವನು ಮತ್ತು ಮೇವನ್ನು ಕಂಡುಕೊಳ್ಳುವನು.
10ಕಳ್ಳನಾದರೋ ಕದ್ದುಕೊಳ್ಳುವುದಕ್ಕೂ, ಕೊಯ್ಯುವುದಕ್ಕೂ ಮತ್ತು ನಾಶಮಾಡುವುದಕ್ಕೂ ಬರುತ್ತಾನೆಯೇ ಹೊರತು ಮತ್ತಾವುದಕ್ಕೂ ಬರುವುದಿಲ್ಲ. ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಅದು ಸಮೃದ್ಧಿಯಾಗಿರಬೇಕೆಂತಲೂ ಬಂದೆನು.
11“ನಾನೇ ಒಳ್ಳೆಯ ಕುರುಬನು. ಒಳ್ಳೆಯ ಕುರುಬನು ತನ್ನ ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.
12ಕೂಲಿಯಾಳು ಕುರಿಗಳ ಕುರುಬನೂ ಒಡೆಯನೂ ಆಗಿರದೆ, ಅವನು ತೋಳ ಬರುವುದನ್ನು ನೋಡುತ್ತಲೇ ಕುರಿಗಳನ್ನು ಬಿಟ್ಟು ಓಡಿ ಹೋಗುತ್ತಾನೆ. ಆಗ ತೋಳವು ಕುರಿಗಳನ್ನು ಹಿಡಿದುಕೊಂಡು ಮಂದೆಯನ್ನು ಚದರಿಸುತ್ತದೆ.
13ಅವನು ಕೇವಲ ಕೂಲಿಯಾಳಾಗಿರುವುದರಿಂದ, ಕುರಿಗಳ ಚಿಂತೆ ಅವನಿಗಿಲ್ಲದೆ ಓಡಿ ಹೋಗುತ್ತಾನೆ.
ಇಂಗ್ಲಿಷ್ನಲ್ಲಿ
The thief comes only to steal and kill and destroy. I have come that they may have life, and have it in all its fullness.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ಮನುಷ್ಯಕುಮಾರನು ದಾರಿತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವುದಕ್ಕೆ ಬಂದನು” ಎಂದು ಹೇಳಿದನು.ನಾನೇ ಪರಲೋಕದಿಂದ ಇಳಿದು ಬಂದ ಜೀವವುಳ್ಳ ರೊಟ್ಟಿ. ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಸದಾ ಕಾಲವು ಬದುಕುವನು; ಮತ್ತು ನಾನು ಕೊಡುವ ರೊಟ್ಟಿ ನನ್ನ ದೇಹವೇ, ಅದನ್ನು ಲೋಕದ ಜೀವಕ್ಕಾಗಿ ಕೊಡುವೆನು” ಎಂದು ಹೇಳಿದನು.ಯಾರಾದರೂ ನನ್ನ ಮಾತುಗಳನ್ನು ಕೇಳಿದರೂ ಅದನ್ನು ಕೈಕೊಂಡು ನಡೆಯದೆ ಹೋದರೆ, ನಾನು ಅವನಿಗೆ ತೀರ್ಪುಮಾಡುವುದಿಲ್ಲ. ಲೋಕಕ್ಕೆ ತೀರ್ಪುಮಾಡುವುದಕ್ಕಾಗಿ ನಾನು ಬಂದಿಲ್ಲ, ಆದರೆ ಲೋಕವನ್ನು ರಕ್ಷಿಸುವುದಕ್ಕಾಗಿ ಬಂದಿದ್ದೇನಷ್ಟೇ.ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ಅಪರಾಧಿಯೆಂದು ಖಂಡಿಸಲಿಕ್ಕೆ ಕಳುಹಿಸಲಿಲ್ಲ.ದೇವರು ಕೊಡುವ ಆ ರೊಟ್ಟಿ ಯಾವುದೆಂದರೆ, ಪರಲೋಕದಿಂದ ಇಳಿದು ಬಂದು ಲೋಕಕ್ಕೆ ಜೀವವನ್ನು ಉಂಟುಮಾಡುವಂಥದ್ದೇ” ಎಂದು ಹೇಳಿದನು.ಕ್ರಿಸ್ತಯೇಸು ಪಾಪಿಗಳನ್ನು ರಕ್ಷಿಸುವುದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂಬ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಇದೆ, ಯಾಕೆಂದರೆ ಆ ಎಲ್ಲಾ ಪಾಪಿಗಳಲ್ಲಿ ನಾನೇ ಪ್ರಮುಖನು.ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವುದಕ್ಕಾಗಿ ಬರಲಿಲ್ಲ, ಸೇವೆ ಮಾಡುವುದಕ್ಕೂ, ಅನೇಕರ ವಿಮೋಚನೆಗಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದನು” ಎಂದು ಹೇಳಿದನು.“ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಕುರಿಹಟ್ಟಿಯೊಳಗೆ ಬಾಗಿಲಿನಿಂದ ಬಾರದೆ, ಬೇರೆ ಕಡೆಯಿಂದ ಹತ್ತಿ ಬರುವವನು ಕಳ್ಳನೂ, ದರೋಡೆಕೋರನೂ ಆಗಿದ್ದಾನೆ.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು