ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಯೋಹಾನನು 13:34–35
ಬೈಬಲ್ ವಚನ · IRV
ಯೋಹಾನನು 13:34–35
34ನಾನು ನಿಮಗೆ ಒಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ಏನೆಂದರೆ, ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು, ಎಂಬುದೇ.
35ನಿಮ್ಮೊಳಗೆ ಪರಸ್ಪರ ಪ್ರೀತಿಯಿರುವುದಾದರೆ ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳುವರು” ಎಂದನು.
ಸಂದರ್ಭದಲ್ಲಿ
31ಅವನು ಹೊರಗೆ ಹೋದ ಮೇಲೆ ಯೇಸುವು, “ಈಗ ಮನುಷ್ಯಕುಮಾರನು ಮಹಿಮೆ ಹೊಂದುತ್ತಾನೆ, ಮತ್ತು ದೇವರು ಆತನಲ್ಲಿ ಮಹಿಮೆ ಹೊಂದಿದ್ದಾನೆ.
32ದೇವರು ಆತನಲ್ಲಿ ಮಹಿಮೆ ಹೊಂದಿರುವುದರಿಂದ, ದೇವರು ಸಹ ಮನುಷ್ಯಕುಮಾರನನ್ನು ತನ್ನಲ್ಲಿ ಮಹಿಮೆಪಡಿಸುವನು. ತಕ್ಷಣವೇ ಮಹಿಮೆಪಡಿಸುವನು.
33ನನ್ನ ಮಕ್ಕಳೇ, ಇನ್ನು ಸ್ವಲ್ಪ ಕಾಲವೇ ನಾನು ನಿಮ್ಮ ಜೊತೆಯಲ್ಲಿ ಇರುತ್ತೇನೆ. ನೀವು ನನ್ನನ್ನು ಹುಡುಕುವಿರಿ ಆದರೆ ‘ನಾನು ಹೋಗುವಲ್ಲಿಗೆ ನೀವು ಬರಲಾರಿರಿ’ ಎಂದು ನಾನು ಯೆಹೂದ್ಯರಿಗೆ ಹೇಳಿದಂತೆಯೇ ನಿಮಗೂ ಈಗ ಹೇಳುತ್ತೇನೆ.
34ನಾನು ನಿಮಗೆ ಒಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ಏನೆಂದರೆ, ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು, ಎಂಬುದೇ.
35ನಿಮ್ಮೊಳಗೆ ಪರಸ್ಪರ ಪ್ರೀತಿಯಿರುವುದಾದರೆ ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳುವರು” ಎಂದನು.
36ಸೀಮೋನ್ ಪೇತ್ರನು ಆತನಿಗೆ, “ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ?” ಎಂದು ಕೇಳಿದ್ದಕ್ಕೆ ಯೇಸು ಅವನಿಗೆ, “ನಾನು ಹೋಗುವ ಕಡೆಗೆ, ಈಗ ನೀನು ನನ್ನನ್ನು ಹಿಂಬಾಲಿಸಲಾರೆ. ಅನಂತರ ನೀನು ನನ್ನನ್ನು ಹಿಂಬಾಲಿಸುವೆ” ಎಂದನು.
37ಪೇತ್ರನು ಆತನಿಗೆ, “ಕರ್ತನೇ, ನಾನು ಈಗ ನಿನ್ನನ್ನು ಏಕೆ ಹಿಂಬಾಲಿಸಲಾರೆನು? ನಿನಗಾಗಿ ನನ್ನ ಪ್ರಾಣವನ್ನೇ ಕೊಡುವೆನು” ಎಂದು ಹೇಳಿದನು.
38ಆಗ ಯೇಸು ಅವನಿಗೆ, “ನೀನು ನನಗಾಗಿ ಪ್ರಾಣವನ್ನೇ ಕೊಡುವೆಯಾ? ನಿನಗೆ ನಿಜನಿಜವಾಗಿ ಹೇಳುತ್ತೇನೆ: ನೀನು ನನ್ನನ್ನು ಮೂರು ಸಾರಿ ನಿರಾಕರಿಸುವ ತನಕ ಕೋಳಿಯು ಕೂಗುವುದೇ ಇಲ್ಲ” ಎಂದನು.
ಇಂಗ್ಲಿಷ್ನಲ್ಲಿ
A new commandment I give you: Love one another. As I have loved you, so you also must love one another. By this everyone will know that you are My disciples, if you love one another.”ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.“‘ನಿಮ್ಮ ಸ್ವಜನರಲ್ಲಿ ಯಾರಿಗೂ ಕೇಡಿಗೆ ಕೇಡನ್ನು ಮಾಡದೆ, ಮನಸ್ಸಿನಲ್ಲಿ ಮತ್ಸರವನ್ನು ಇಟ್ಟುಕೊಳ್ಳದೆ, ನಿಮ್ಮ ನೆರೆಯವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ನಾನು ಯೆಹೋವನು.ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂತಲೇ ಇವುಗಳನ್ನು ನಾನು ನಿಮಗೆ ಆಜ್ಞಾಪಿಸುತ್ತಿದ್ದೇನೆ.ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಿಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನೊಬ್ಬರು ಶುದ್ಧಹೃದಯದಿಂದಲೂ, ಯಥಾರ್ಥವಾಗಿಯೂ ಪ್ರೀತಿಸಿರಿ.ಒಬ್ಬನು, “ತಾನು ದೇವರನ್ನು ಪ್ರೀತಿಸುತ್ತೇನೆ” ಎಂದು ಹೇಳಿ ತನ್ನ ಸಹೋದರನನ್ನು ದ್ವೇಷಿಸಿದರೆ ಅವನು ಸುಳ್ಳುಗಾರನಾಗಿದ್ದಾನೆ. ಏಕೆಂದರೆ ತನ್ನೊಂದಿಗೆ ಇರುವ ಸಹೋದರನನ್ನು ಪ್ರೀತಿಸದವನು, ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಬಲ್ಲನು? ದೇವರನ್ನು ಪ್ರೀತಿಸುವವನು, ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಆಜ್ಞೆಯನ್ನು ನಾವು ಆತನಿಂದ ಹೊಂದಿದ್ದೇವೆ.ದೇವರ ಆಜ್ಞೆ ಯಾವುದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನನ್ನು ನಂಬಿ ಆತನು ನಮಗೆ ಕೊಟ್ಟಿರುವ ಆಜ್ಞೆಗಳ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ.ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ. ಒಂದು ಅಂಗ ಗೌರವಿಸಲ್ಪಟ್ಟರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ. ನೀವು ಕ್ರಿಸ್ತನ ದೇಹವು ಮತ್ತು ಒಬ್ಬೊಬ್ಬರಾಗಿ ಅದಕ್ಕೆ ಅಂಗಗಳಾಗಿದ್ದೀರಿ.ಒಬ್ಬರು ಮತ್ತೊಬ್ಬರ ಭಾರವನ್ನು ಹೊತ್ತುಕೊಳ್ಳಲಿ, ಹೀಗೆ ಕ್ರಿಸ್ತನ ನೀತಿನಿಯಮಗಳನ್ನು ನೆರವೇರಿಸಿರಿ.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು