ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಯೋಹಾನನು 14:1
ಬೈಬಲ್ ವಚನ · IRV
ಯೋಹಾನನು 14:1
“ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.
ಸಂದರ್ಭದಲ್ಲಿ
1“ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.
2ನನ್ನ ತಂದೆಯ ಮನೆಯಲ್ಲಿ ಅನೇಕ ವಾಸಸ್ಥಾನಗಳಿವೆ, ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು. ನಾನು ನಿಮಗಾಗಿ ಸ್ಥಳವನ್ನು ಸಿದ್ಧಮಾಡುವುದಕ್ಕೆ ಹೋಗುತ್ತೇನಲ್ಲಾ!
3ನಾನು ಹೋಗಿ ನಿಮಗಾಗಿ ಸ್ಥಳವನ್ನು ಸಿದ್ಧಪಡಿಸಿದ ಮೇಲೆ, ಪುನಃ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು. ಏಕೆಂದರೆ, ನಾನಿರುವಲ್ಲಿ ನೀವು ಸಹ ಇರಬೇಕು.
4ನಾನು ಹೋಗುವ ಸ್ಥಳದ ಮಾರ್ಗವು ನಿಮಗೆ ತಿಳಿದಿದೆ” ಎಂದನು.
ಇಂಗ್ಲಿಷ್ನಲ್ಲಿ
“Do not let your hearts be troubled. You believe in God; believe in Me as well.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ಸ್ಥಿರಚಿತ್ತನನ್ನು ಶಾಂತಿಯಲ್ಲಿ ನೆಲೆಗೊಳಿಸಿ ಕಾಯುವಿ; ಅವನಿಗೆ ನಿನ್ನಲ್ಲಿ ಭರವಸವಿದೆ.ಹಾಗೆಯೇ, ನಿಮಗೂ ಈಗ ದುಃಖವಿದ್ದರೂ ನಾನು ನಿಮ್ಮನ್ನು ತಿರುಗಿ ನೋಡುವೆನು, ಆಗ ನಿಮ್ಮ ಹೃದಯಕ್ಕೆ ಆನಂದವಾಗುವುದು, ಮತ್ತು ನಿಮ್ಮ ಆನಂದವನ್ನು ಯಾರು ನಿಮ್ಮಿಂದ ತೆಗೆದು ಹಾಕಲು ಸಾಧ್ಯವಿಲ್ಲ. ಆ ದಿನದಲ್ಲಿ ನೀವು ನನ್ನನ್ನು ಏನೂ ಕೇಳುವುದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು.ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು; ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ.” ಮತ್ತು ರಕ್ಷಣೆಯೆಂಬ ಬಾವಿಗಳಿಂದ ಉಲ್ಲಾಸದೊಡನೆ ನೀವು ನೀರನ್ನು ಸೇದುವಿರಿ.ಅದಕ್ಕಾತನು, “ನನ್ನ ಕೃಪೆಯೇ ನಿನಗೆ ಸಾಕು, ಬಲಹೀನತೆಯಲ್ಲಿಯೇ ನನ್ನ ಬಲವು ಪೂರ್ಣಸಾಧಕವಾಗುತ್ತದೆ” ಎಂದು ನನಗೆ ಹೇಳಿದನು. ಹೀಗಿರಲಾಗಿ, ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿರಬೇಕೆಂದು ನನಗುಂಟಾಗುವ ಬಲಹೀನತೆಯಲ್ಲಿಯೂ ಬಹು ಸಂತೋಷವಾಗಿ ಹೆಚ್ಚಳಪಡುವೆನು. ಆದ್ದರಿಂದ ಕ್ರಿಸ್ತನ ನಿಮಿತ್ತ ನನಗೆ ಬಲಹೀನತೆಯಲ್ಲಿಯೂ, ತಿರಸ್ಕಾರದಲ್ಲಿಯೂ, ಕೊರತೆಯಲ್ಲಿಯೂ, ಹಿಂಸೆಯಲ್ಲಿಯೂ ಮತ್ತು ಇಕ್ಕಟ್ಟೂ ಸಂಭವಿಸಿದಾಗಲೂ ಸಂತುಷ್ಟನಾಗಿದ್ದೇನೆ. ಯಾಕೆಂದರೆ ನಾನು ಯಾವಾಗ ದುರ್ಬಲನಾಗಿರುವೆನೋ, ಆವಾಗಲೇ ಬಲವುಳ್ಳವನೂ ಆಗಿರುತ್ತೇನೆ.“ನಾನು ನನ್ನ ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ. ನಾನು ಹೋಗಿ ಪುನಃ ನಿಮ್ಮ ಬಳಿಗೆ ಬರುತ್ತೇನೆ ಎಂದು ನಿಮಗೆ ಹೇಳಿದ್ದನ್ನು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನಾನು ತಂದೆಯ ಬಳಿಗೆ ಹೋಗುತ್ತೇನೆಂದು ಹೇಳಿದ್ದಕ್ಕೆ ಸಂತೋಷಪಡುತ್ತಿದ್ದೀರಿ, ಏಕೆಂದರೆ ತಂದೆಯು ನನಗಿಂತಲೂ ದೊಡ್ಡವನು.ಮಗನನ್ನು ನೋಡಿ ತಂದೆಯಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ನನ್ನ ತಂದೆಯ ಚಿತ್ತವಾಗಿದೆ, ಮತ್ತು ನಾನು ಕಡೆ ದಿನದಲ್ಲಿ ಅವನನ್ನು ಎಬ್ಬಿಸುವೆನು” ಎಂದು ಹೇಳಿದನು.ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ ದೇವರೂ ಆಗಿದ್ದಾನೆ. ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು. ನನ್ನ ದೇವರೇ, ನನ್ನ ಪ್ರಾಣವು ಕುಗ್ಗಿಹೋಗಿದೆ; ಆದುದರಿಂದ ಯೊರ್ದನ್ ಹೊಳೆಯ ದೇಶ, ಹೆರ್ಮೋನ್ ಪರ್ವತ, ಮಿಸಾರ್ ಬೆಟ್ಟ ಇವುಗಳಲ್ಲಿರುವವನಾಗಿ ನಿನ್ನನ್ನು ಸ್ಮರಿಸುತ್ತೇನೆ.ಯೇಸು ಕೂಗಿ ಹೇಳಿದ ಮಾತೇನಂದರೆ, “ನನ್ನನ್ನು ನಂಬುವವನು ನನ್ನನ್ನೇ ನಂಬುವವನಲ್ಲದೇ ನನ್ನನ್ನು ಕಳುಹಿಸಿಕೊಟ್ಟಾತನನ್ನು ಸಹ ನಂಬುವವನಾಗಿದ್ದಾನೆ.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು