Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಯೋಹಾನನು 14:15

ಬೈಬಲ್ ವಚನ · IRV

ಯೋಹಾನನು 14:15

“ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವಿರಿ.

ಇಡೀ ಅಧ್ಯಾಯ ಓದಿ: ಯೋಹಾನನು 14

ಸಂದರ್ಭದಲ್ಲಿ

12“ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನನ್ನನ್ನು ನಂಬುವವನು ನಾನು ಮಾಡುವ ಕಾರ್ಯಗಳನ್ನು ತಾನು ಸಹ ಮಾಡುತ್ತಾನೆ; ಮತ್ತು ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಮಾಡುವನು, ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ.

13ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ನೆರವೇರಿಸುವೆನು. ಹೀಗೆ ಮಗನ ಮೂಲಕವಾಗಿ ತಂದೆಗೆ ಮಹಿಮೆ ಉಂಟಾಗುವುದು.

14ನೀವು ನನ್ನ ಹೆಸರಿನಲ್ಲಿ ನನ್ನನ್ನು ಏನಾದರೂ ಬೇಡಿಕೊಂಡರೆ ನಾನು ಅದನ್ನು ನೆರವೇರಿಸುವೆನು.

15“ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವಿರಿ.

16ಆಗ ನಾನು ತಂದೆಯನ್ನು ಕೇಳಿಕೊಳ್ಳುವೆನು, ಆತನು ನಿಮಗೆ ಬೇರೊಬ್ಬ ಸಹಾಯಕನನ್ನು ಸದಾಕಾಲವೂ ನಿಮ್ಮೊಂದಿಗೆ ಇರುವುದಕ್ಕೆ ಕಳುಹಿಸಿ ಕೊಡುವನು.

17ಆ ಸಹಾಯಕನು ಯಾರೆಂದರೆ ಸತ್ಯದ ಆತ್ಮನೇ. ಲೋಕವು ಆತನನ್ನು ನೋಡದೆಯೂ, ತಿಳಿಯದೆಯೂ ಇರುವುದರಿಂದ ಆತನನ್ನು ಸ್ವೀಕರಿಸಲಾರದು. ನೀವು ಆತನನ್ನು ಬಲ್ಲಿರಿ, ಹೇಗೆಂದರೆ ಆತನು ನಿಮ್ಮೊಂದಿಗೆ ವಾಸಮಾಡುತ್ತಾನೆ ಮತ್ತು ನಿಮ್ಮೊಳಗೆ ಇರುವನು.

18“ನಾನು ನಿಮ್ಮನ್ನು ಅನಾಥರನ್ನಾಗಿ ಬಿಡುವುದಿಲ್ಲ, ನಿಮ್ಮ ಬಳಿಗೆ ಬರುತ್ತೇನೆ.

ಯೋಹಾನನು 14

ಇಂಗ್ಲಿಷ್‌ನಲ್ಲಿ

Berean Standard BibleJohn 14:15If you love Me, you will keep My commandments.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

1 ಯೋಹಾ 2:3–5ನಾವು ಆತನ ಆಜ್ಞೆಗಳನ್ನು ಅರಿತು ನಡೆಯುವುದರಿಂದಲೇ ಆತನನ್ನು ನಾವು ಬಲ್ಲವರಾಗಿದ್ದೇವೆಂದು ತಿಳಿದುಕೊಳ್ಳುತ್ತೇವೆ. ಒಬ್ಬನು, “ನಾನು ಆತನನ್ನು ಬಲ್ಲೆನು” ಎಂದು ಹೇಳಿ ಆತನ ಆಜ್ಞೆಗಳಂತೆ ನಡೆಯದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ. ಸತ್ಯವೆಂಬುದು ಅವನಲ್ಲಿ ಇಲ್ಲ. ಯಾರಾದರೂ ಆತನ ವಾಕ್ಯವನ್ನು ಅನುಸರಿಸಿ ನಡೆದರೆ ಅವನಲ್ಲಿ ನಿಜವಾಗಿ ದೇವರ ಮೇಲಣ ಪ್ರೀತಿಯು ಪರಿಪೂರ್ಣವಾಗಿದೆ. ಇಂತಹ ಕಾರ್ಯದಿಂದ ನಾವು ಆತನಲ್ಲಿ ಇದ್ದೇವೆಂಬುದನ್ನು ತಿಳಿದುಕೊಳ್ಳುತ್ತೇವೆ.
1 ಯೋಹಾ 5:2–3ನಾವು ದೇವರನ್ನು ಪ್ರೀತಿಸಿ ಆತನ ಆಜ್ಞೆಗಳನ್ನು ಅನುಸರಿಸುವುದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬುದನ್ನು ತಿಳಿದುಕೊಳ್ಳುತ್ತೇವೆ. ದೇವರ ಮೇಲಿನ ಪ್ರೀತಿ ಏನೆಂದರೆ ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವುದೇ. ಆತನ ಆಜ್ಞೆಗಳು ಕಷ್ಟಕರವಾದವುಗಳಲ್ಲ.
ಯೋಹಾ 14:21–24ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಕೊಂಡು ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ತಂದೆಗೆ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ಪ್ರಕಟಪಡಿಸಿ ತೋರಿಸುವೆನು” ಎಂದು ಹೇಳಿದನು. ಯೂದನು, (ಇವನು ಇಸ್ಕರಿಯೋತನಲ್ಲ) “ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಮಾತ್ರ ಕಾಣಿಸಿಕೊಳ್ಳುವುದಕ್ಕೆ ಕಾರಣವೇನು?” ಎಂದು ಕೇಳಿದನು. ಯೇಸು ಅವನಿಗೆ, “ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ನನ್ನ ಮಾತಿನಂತೆ ನಡೆಯುವನು. ಅವನನ್ನು ನನ್ನ ತಂದೆಯು ಪ್ರೀತಿಸುವನು ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು, ಅವನೊಂದಿಗೆ ನೆಲೆಸುವೆವು. ನನ್ನನ್ನು ಪ್ರೀತಿಸದವನು, ನನ್ನ ಮಾತುಗಳನ್ನು ಕೈಕೊಂಡು ನಡೆಯುವುದಿಲ್ಲ. ನೀವು ಕೇಳಿದ ಮಾತು ನನ್ನದಲ್ಲ. ನನ್ನನ್ನು ಕಳುಹಿಸಿದ ತಂದೆಯದೇ ಆಗಿದೆ.
2 ಯೋಹಾ 1:6ದೇವರ ಆಜ್ಞೆಗಳನ್ನು ಅನುಸರಿಸಿ, ವಿಧೇಯರಾಗಿ ನಡೆಯುವುದೇ ಪ್ರೀತಿಯಾಗಿದೆ. ಪ್ರೀತಿಯಲ್ಲಿ ನಡೆಯಬೇಕೆಂಬುದೇ, ನೀವು ಮೊದಲಿನಿಂದಲೂ ಕೇಳಿದ ಆಜ್ಞೆಯಾಗಿದೆ.
ಯೋಹಾ 15:10–14ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಗೊಂಡು ಆತನ ಪ್ರೀತಿಯಲ್ಲಿ ನೆಲೆಗೊಂಡಿರುವ ಪ್ರಕಾರ, ನೀವು ನನ್ನ ಆಜ್ಞೆಗಳನ್ನು ಕೈಕೊಂಡು ನಡೆದರೆ, ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ. ನನ್ನಲ್ಲಿರುವ ಆನಂದವು ನಿಮ್ಮಲ್ಲಿಯೂ ಇರಬೇಕೆಂದೂ, ಆ ನಿಮ್ಮ ಆನಂದವು ಪರಿಪೂರ್ಣವಾಗಬೇಕೆಂದೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ. ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನನ್ನ ಆಜ್ಞೆಯಾಗಿದೆ. ತನ್ನ ಪ್ರಾಣವನ್ನೇ ಸ್ನೇಹಿತರಿಗೋಸ್ಕರ ಕೊಡುವ ಪ್ರೀತಿಗಿಂತ ಹೆಚ್ಚಿನ ಪ್ರೀತಿಯು ಯಾವುದೂ ಇಲ್ಲ. ನಾನು ನಿಮಗೆ ಕೊಟ್ಟ ಆಜ್ಞೆಗಳ ಪ್ರಕಾರ ನೀವು ನಡೆದರೆ, ನೀವು ನನ್ನ ಸ್ನೇಹಿತರು.
1 ಯೋಹಾ 4:19–20ದೇವರು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ. ಒಬ್ಬನು, “ತಾನು ದೇವರನ್ನು ಪ್ರೀತಿಸುತ್ತೇನೆ” ಎಂದು ಹೇಳಿ ತನ್ನ ಸಹೋದರನನ್ನು ದ್ವೇಷಿಸಿದರೆ ಅವನು ಸುಳ್ಳುಗಾರನಾಗಿದ್ದಾನೆ. ಏಕೆಂದರೆ ತನ್ನೊಂದಿಗೆ ಇರುವ ಸಹೋದರನನ್ನು ಪ್ರೀತಿಸದವನು, ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಬಲ್ಲನು?
2 ಕೊರಿ 5:14–15ಯಾಕೆಂದರೆ ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಪಡಿಸುತ್ತದೆ; ಎಲ್ಲರಿಗೋಸ್ಕರ ಒಬ್ಬನು ಸತ್ತಮೇಲೆ ಎಲ್ಲರೂ ಸತ್ತಂತಾಯಿತೆಂದು ನಿಶ್ಚಯಿಸಿಕೊಂಡಿದ್ದೇವೆ. ಕ್ರಿಸ್ತನು ಎಲ್ಲರಿಗೋಸ್ಕರ ಸತ್ತದ್ದರಿಂದಾಗಿ ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೇ ತಮಗೋಸ್ಕರ ಸತ್ತು ಎದ್ದು ಬಂದಾತನಿಗಾಗಿ ಜೀವಿಸಬೇಕು.
1 ಪೇತ್ರ 1:8–9ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ. ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು, ನಿಮ್ಮ ನಂಬಿಕೆಯ ಅಂತ್ಯಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿ ಹೇಳಲಸಾಧ್ಯವಾದಂತಹ ಮಹಿಮೆಯುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು