Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಯೋಹಾನನು 14:27

ಬೈಬಲ್ ವಚನ · IRV

ಯೋಹಾನನು 14:27

“ನಾನು ನನ್ನ ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.

ಇಡೀ ಅಧ್ಯಾಯ ಓದಿ: ಯೋಹಾನನು 14

ಸಂದರ್ಭದಲ್ಲಿ

24ನನ್ನನ್ನು ಪ್ರೀತಿಸದವನು, ನನ್ನ ಮಾತುಗಳನ್ನು ಕೈಕೊಂಡು ನಡೆಯುವುದಿಲ್ಲ. ನೀವು ಕೇಳಿದ ಮಾತು ನನ್ನದಲ್ಲ. ನನ್ನನ್ನು ಕಳುಹಿಸಿದ ತಂದೆಯದೇ ಆಗಿದೆ.

25“ಈ ಮಾತುಗಳನ್ನು ನಾನು ಇನ್ನೂ ನಿಮ್ಮ ಬಳಿಯಲ್ಲಿರುವಾಗಲೇ ಹೇಳಿದ್ದೇನೆ.

26ಆದರೆ ಆ ಸಹಾಯಕನು, ಅಂದರೆ ನನ್ನ ಹೆಸರಿನಲ್ಲಿ ತಂದೆಯು ಕಳುಹಿಸಿಕೊಡುವ ಪವಿತ್ರಾತ್ಮನೇ ನಿಮಗೆ ಎಲ್ಲವನ್ನು ಉಪದೇಶಿಸಿ ನಾನು ನಿಮಗೆ ಹೇಳಿದ್ದನೆಲ್ಲಾ ನಿಮ್ಮ ನೆನಪಿಗೆ ತಂದುಕೊಡುವನು.

27“ನಾನು ನನ್ನ ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.

28ನಾನು ಹೋಗಿ ಪುನಃ ನಿಮ್ಮ ಬಳಿಗೆ ಬರುತ್ತೇನೆ ಎಂದು ನಿಮಗೆ ಹೇಳಿದ್ದನ್ನು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನಾನು ತಂದೆಯ ಬಳಿಗೆ ಹೋಗುತ್ತೇನೆಂದು ಹೇಳಿದ್ದಕ್ಕೆ ಸಂತೋಷಪಡುತ್ತಿದ್ದೀರಿ, ಏಕೆಂದರೆ ತಂದೆಯು ನನಗಿಂತಲೂ ದೊಡ್ಡವನು.

29ಇದೆಲ್ಲಾ ನಡೆಯುವಾಗ ನೀವು ನನ್ನನ್ನು ನಂಬುವಂತೆ, ಅದು ನಡೆಯುವುದಕ್ಕಿಂತ ಮೊದಲೇ ನಿಮಗೆ ತಿಳಿಸಿದ್ದೇನೆ.

30ಇನ್ನು ಮೇಲೆ ನಾನು ನಿಮ್ಮ ಜೊತೆ ಹೆಚ್ಚು ವಿಷಯಗಳನ್ನು ಮಾತನಾಡುವುದಿಲ್ಲ. ಏಕೆಂದರೆ ಇಹಲೋಕಾಧಿಪತಿಯು ಬರಲಿದ್ದಾನೆ. ನನ್ನ ಮೇಲೆ ಅವನಿಗೆ ಯಾವ ಅಧಿಕಾರವೂ ಇಲ್ಲ.

ಯೋಹಾನನು 14

ಇಂಗ್ಲಿಷ್‌ನಲ್ಲಿ

Berean Standard BibleJohn 14:27Peace I leave with you; My peace I give to you. I do not give to you as the world gives. Do not let your hearts be troubled; do not be afraid.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಫಿಲಿಪ್ಪಿ 4:7ಆಗ ಎಲ್ಲಾ ಗ್ರಹಿಕೆಯನ್ನು ಮೀರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ, ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಪಾಡುವುದು.
ಯೋಹಾ 16:33ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ” ಎಂದು ಹೇಳಿದನು.
ಯೆಶಾ 41:10ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.
2 ಥೆಸ 3:16ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗಿರಲಿ.
ಕೊಲೊ 3:15ಕ್ರಿಸ್ತನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ. ಇದೇ ಸಮಾಧಾನದಲ್ಲಿ ಏಕ ದೇಹವಾಗಿರುವಂತೆ ನೀವು ಕರೆಯಲ್ಪಟ್ಟಿರುವಿರಿ ಇದಲ್ಲದೆ ಕೃತಜ್ಞತೆಯುಳ್ಳವರಾಗಿರಿ.
2 ತಿಮೊ 1:7ದೇವರು ನಮಗೆ ಕೊಟ್ಟಿರುವ ಆತ್ಮವು ಬಲ, ಪ್ರೀತಿ, ಸಂಯಮಗಳ ಆತ್ಮವೇ ಹೊರತು ಹೇಡಿತನದ ಆತ್ಮವಲ್ಲ.
ರೋಮಾ 15:13ನಿರೀಕ್ಷೆಯನ್ನು ಕೊಡುವ ದೇವರು ಪವಿತ್ರಾತ್ಮನ ಶಕ್ತಿಯಿಂದ ಸಮೃದ್ಧವಾದ ನಿರೀಕ್ಷೆಯುಳ್ಳವರಾಗಿ ನಂಬುವುದರಿಂದ ಉಂಟಾಗುವ ಸಂತೋಷವನ್ನೂ ಮನಶ್ಯಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಲ್ಲಿ, ನೀವು ಪವಿತ್ರಾತ್ಮನಲ್ಲಿ ಬಲಗೊಂಡವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ.
ಅರಣ್ಯ 6:26ಯೆಹೋವನು ನಿಮ್ಮ ಮೇಲೆ ಕೃಪಾಕಟಾಕ್ಷವಿಟ್ಟು ಶಾಂತಿಯನ್ನು ಅನುಗ್ರಹಿಸಲಿ’ ಎಂಬುದೇ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು