Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಯೋಹಾನನು 14:6

ಬೈಬಲ್ ವಚನ · IRV

ಯೋಹಾನನು 14:6

ಯೇಸು ಅವನಿಗೆ, “ನಾನೇ ಮಾರ್ಗವೂ, ಸತ್ಯವೂ ಮತ್ತು ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.

ಇಡೀ ಅಧ್ಯಾಯ ಓದಿ: ಯೋಹಾನನು 14

ಸಂದರ್ಭದಲ್ಲಿ

3ನಾನು ಹೋಗಿ ನಿಮಗಾಗಿ ಸ್ಥಳವನ್ನು ಸಿದ್ಧಪಡಿಸಿದ ಮೇಲೆ, ಪುನಃ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು. ಏಕೆಂದರೆ, ನಾನಿರುವಲ್ಲಿ ನೀವು ಸಹ ಇರಬೇಕು.

4ನಾನು ಹೋಗುವ ಸ್ಥಳದ ಮಾರ್ಗವು ನಿಮಗೆ ತಿಳಿದಿದೆ” ಎಂದನು.

5ತೋಮನು ಆತನಿಗೆ, “ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ ಎಂಬುದೇ ನಮಗೆ ತಿಳಿಯದು, ಮತ್ತೆ ಮಾರ್ಗವು ಹೇಗೆ ತಿಳಿದೀತು?” ಎಂದು ಕೇಳಲು,

6ಯೇಸು ಅವನಿಗೆ, “ನಾನೇ ಮಾರ್ಗವೂ, ಸತ್ಯವೂ ಮತ್ತು ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.

7ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನೂ ಸಹ ತಿಳಿಯುತ್ತಿದ್ದಿರಿ. ಈಗಿನಿಂದ ನೀವು ಆತನನ್ನು ತಿಳಿದಿದ್ದೀರಿ ಮತ್ತು ಆತನನ್ನು ನೋಡಿದ್ದೀರಿ” ಎಂದು ಹೇಳಿದನು.

8ಫಿಲಿಪ್ಪನು, “ಕರ್ತನೇ, ನಮಗೆ ತಂದೆಯನ್ನು ತೋರಿಸು ನಮಗೆ ಅಷ್ಟೇ ಸಾಕು” ಎಂದನು.

9ಯೇಸು ಅವನಿಗೆ, “ಫಿಲಿಪ್ಪನೇ, ನಾನು ಇಷ್ಟು ಕಾಲ ನಿಮ್ಮ ಜೊತೆಯಲ್ಲಿಯೇ ಇದ್ದರೂ ಇನ್ನೂ ನೀನು ನನ್ನನ್ನು ತಿಳಿಯಲಿಲ್ಲವೇ! ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ, ಮತ್ತು ನಮಗೆ ತಂದೆಯನ್ನು ತೋರಿಸು ಎಂದು ನೀನು ಹೇಳುವುದಾದರು ಹೇಗೆ?

ಯೋಹಾನನು 14

ಇಂಗ್ಲಿಷ್‌ನಲ್ಲಿ

Berean Standard BibleJohn 14:6Jesus answered, “I am the way and the truth and the life. No one comes to the Father except through Me.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಅ. ಕೃ 4:12ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಗುವುದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರಿಗೆ ಕೊಟ್ಟಿರುವ ಮತ್ತ್ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ” ಎಂದು ಹೇಳಿದನು.
ಯೋಹಾ 10:9ನಾನೇ ಆ ಬಾಗಿಲು. ನನ್ನ ಮುಖಾಂತರವಾಗಿ ಯಾವನಾದರೂ ಒಳಗೆ ಪ್ರವೇಶಿಸಿದರೆ ಅವನು ಸುರಕ್ಷಿತನಾಗಿದ್ದು ಒಳಗೆ ಹೋಗುವನು, ಹೊರಗೆ ಬರುವನು ಮತ್ತು ಮೇವನ್ನು ಕಂಡುಕೊಳ್ಳುವನು.
ಎಫೆ 2:18ಇದರಿಂದ ಆತನ ಮೂಲಕ ಉಭಯತ್ರರು ಒಂದೇ ಆತ್ಮನಲ್ಲಿ ತಂದೆಯ ಬಳಿಗೆ ಪ್ರವೇಶಿಸಲು ಮಾರ್ಗವಾಯಿತು.
ಯೋಹಾ 11:25–26ಯೇಸು ಆಕೆಗೆ, “ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು, ಮತ್ತು ಜೀವಿಸುವ ಪ್ರತಿಯೊಬ್ಬನು ನನ್ನಲ್ಲಿ ನಂಬಿಕೆಯಿಟ್ಟರೆ, ಅವನು ಎಂದಿಗೂ ಸಾಯುವುದಿಲ್ಲ. ಇದನ್ನು ನೀನು ನಂಬುತ್ತೀಯೋ?” ಎಂದು ಕೇಳಿದಕ್ಕೆ,
ಯೋಹಾ 1:4ಆತನಲ್ಲಿ ಜೀವವಿತ್ತು. ಆ ಜೀವವು ಮನುಷ್ಯರಿಗೆ ಬೆಳಕಾಗಿತ್ತು.
1 ಯೋಹಾ 5:20ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.
ಯೋಹಾ 1:14ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.
1 ಯೋಹಾ 5:11–12ಆ ಸಾಕ್ಷಿ ಯಾವುದೆಂದರೆ, ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾನೆ. ಆ ಜೀವವು ಆತನ ಮಗನಲ್ಲಿದೆ ಎಂಬುದೇ. ಯಾರು ದೇವರ ಮಗನನ್ನು ನಂಬುತ್ತಾರೋ ಅವರಲ್ಲಿ ಆ ಜೀವ ಉಂಟು, ಆದರೆ ಯಾರು ದೇವರ ಮಗನನ್ನು ನಂಬುವುದಿಲ್ಲವೋ ಅವರಲ್ಲಿ ಆ ಜೀವವಿಲ್ಲ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು