Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಯೋಹಾನನು 15:13

ಬೈಬಲ್ ವಚನ · IRV

ಯೋಹಾನನು 15:13

ತನ್ನ ಪ್ರಾಣವನ್ನೇ ಸ್ನೇಹಿತರಿಗೋಸ್ಕರ ಕೊಡುವ ಪ್ರೀತಿಗಿಂತ ಹೆಚ್ಚಿನ ಪ್ರೀತಿಯು ಯಾವುದೂ ಇಲ್ಲ.

ಇಡೀ ಅಧ್ಯಾಯ ಓದಿ: ಯೋಹಾನನು 15

ಸಂದರ್ಭದಲ್ಲಿ

10ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಗೊಂಡು ಆತನ ಪ್ರೀತಿಯಲ್ಲಿ ನೆಲೆಗೊಂಡಿರುವ ಪ್ರಕಾರ, ನೀವು ನನ್ನ ಆಜ್ಞೆಗಳನ್ನು ಕೈಕೊಂಡು ನಡೆದರೆ, ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.

11ನನ್ನಲ್ಲಿರುವ ಆನಂದವು ನಿಮ್ಮಲ್ಲಿಯೂ ಇರಬೇಕೆಂದೂ, ಆ ನಿಮ್ಮ ಆನಂದವು ಪರಿಪೂರ್ಣವಾಗಬೇಕೆಂದೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ.

12ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನನ್ನ ಆಜ್ಞೆಯಾಗಿದೆ.

13ತನ್ನ ಪ್ರಾಣವನ್ನೇ ಸ್ನೇಹಿತರಿಗೋಸ್ಕರ ಕೊಡುವ ಪ್ರೀತಿಗಿಂತ ಹೆಚ್ಚಿನ ಪ್ರೀತಿಯು ಯಾವುದೂ ಇಲ್ಲ.

14ನಾನು ನಿಮಗೆ ಕೊಟ್ಟ ಆಜ್ಞೆಗಳ ಪ್ರಕಾರ ನೀವು ನಡೆದರೆ, ನೀವು ನನ್ನ ಸ್ನೇಹಿತರು.

15ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವುದಿಲ್ಲ, ಏಕೆಂದರೆ, ಯಜಮಾನನು ಮಾಡುವಂಥದ್ದು ಆಳಿಗೆ ತಿಳಿಯುವುದಿಲ್ಲ. ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ, ಏಕೆಂದರೆ ತಂದೆಯ ಕಡೆಯಿಂದ ನಾನು ಕೇಳಿದ್ದನ್ನೆಲ್ಲಾ ನಾನು ನಿಮಗೆ ತಿಳಿಸಿದ್ದೇನೆ.

16ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿದ್ದೇನೆ, ನೀವು ಹೊರಟು ಹೋಗಿ ಫಲಕೊಡಬೇಕೆಂತಲೂ, ಹಾಗೂ ನೀವು ಕೊಡುವ ಫಲವು ಸದಾಕಾಲ ನಿಲ್ಲುವಂಥದ್ದಾಗಬೇಕಂತಲೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ, ಅದನ್ನು ಆತನು ನಿಮಗೆ ಕೊಡುವನು.

ಯೋಹಾನನು 15

ಇಂಗ್ಲಿಷ್‌ನಲ್ಲಿ

Berean Standard BibleJohn 15:13Greater love has no one than this, that he lay down his life for his friends.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಯೋಹಾ 10:11“ನಾನೇ ಒಳ್ಳೆಯ ಕುರುಬನು. ಒಳ್ಳೆಯ ಕುರುಬನು ತನ್ನ ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.
ಎಫೆ 5:2ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
ರೋಮಾ 5:6–8ನಾವು ಬಲಹೀನರಾಗಿದ್ದಾಗಲೇ ಕ್ರಿಸ್ತನು ನಿಯಮಿತ ಕಾಲದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು. ನೀತಿವಂತರಿಗೋಸ್ಕರ ಯಾರಾದರೂ ಪ್ರಾಣಕೊಡುವುದು ಅಪರೂಪ. ನಿಜವಾಗಿಯೂ ಒಳ್ಳೆಯವನಿಗಾಗಿ ಪ್ರಾಣಕೊಡುವುದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಬಹುದು. ಆದರೆ ನಾವು ಪಾಪಿಗಳಾಗಿದ್ದಾಗಲೇ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ದೃಢಪಡಿಸಿದ್ದಾನೆ.
ಯೋಹಾ 10:15ತಂದೆಯು ನನ್ನನ್ನು ತಿಳಿದಿರುವಂತೆಯೇ, ನಾನು ತಂದೆಯನ್ನು ತಿಳಿದಿದ್ದೇನೆ; ಮತ್ತು ನಾನು ಕುರಿಗಳಿಗೋಸ್ಕರ ನನ್ನ ಪ್ರಾಣವನ್ನೇ ಕೊಡುತ್ತೇನೆ.
1 ಯೋಹಾ 4:7–11ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಏಕೆಂದರೆ ಪ್ರೀತಿಯು ದೇವರಿಂದ ಬಂದದ್ದಾಗಿದೆ ಮತ್ತು ಪ್ರೀತಿ ಮಾಡುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನೂ ದೇವರನ್ನು ಬಲ್ಲವನೂ ಆಗಿದ್ದಾನೆ. ಪ್ರೀತಿ ಇಲ್ಲದವನು ದೇವರನ್ನು ಬಲ್ಲವನಲ್ಲ. ಏಕೆಂದರೆ ದೇವರು ಪ್ರೀತಿಸ್ವರೂಪನಾಗಿದ್ದಾನೆ. ನಾವು ಆತನ ಮೂಲಕ ಜೀವಿಸುವುದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮಲ್ಲಿ ಪ್ರತ್ಯಕ್ಷವಾಗಿದೆ. ನಾವು ದೇವರನ್ನು ಪ್ರೀತಿಸಿಲ್ಲ, ಆದರೂ ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತ ಬಲಿಯಾಗಿ ತನ್ನ ಮಗನನ್ನು ಕಳುಹಿಸಿಕೊಟ್ಟಿದ್ದರಲ್ಲಿಯೇ ಆತನ ನಿಜವಾದ ಪ್ರೀತಿಯು ತೋರಿಬರುತ್ತದೆ. ಪ್ರಿಯರೇ, ದೇವರು ನಮ್ಮನ್ನು ಹೀಗೆ ಪ್ರೀತಿಸಿದ ಮೇಲೆ ನಾವೂ ಸಹ ಒಬ್ಬರನ್ನೊಬ್ಬರು ಪ್ರೀತಿಸುವ ಹಂಗಿನಲ್ಲಿದ್ದೇವೆ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು