Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಯೋಹಾನನು 15:7

ಬೈಬಲ್ ವಚನ · IRV

ಯೋಹಾನನು 15:7

ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನಾದರೂ ಬೇಡಿಕೊಳ್ಳಿರಿ ಅದು ನಿಮಗೆ ದೊರೆಯುವುದು.

ಇಡೀ ಅಧ್ಯಾಯ ಓದಿ: ಯೋಹಾನನು 15

ಸಂದರ್ಭದಲ್ಲಿ

4ನೀವು ನನ್ನಲ್ಲಿ ನೆಲೆಗೊಂಡಿರಿ, ನಾನೂ ನಿಮ್ಮಲ್ಲಿ ನೆಲೆಗೊಂಡಿರುವೆನು. ಕೊಂಬೆಯು ಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೇ ತಾನೇ ಫಲಕೊಡಲಾರದೋ, ಹಾಗೆಯೇ ನೀವು ನನ್ನಲ್ಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ.

5ನಾನು ದ್ರಾಕ್ಷಿಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅವನು ಬಹಳ ಫಲ ಕೊಡುವನು. ನೀವು ನನ್ನನ್ನು ಬಿಟ್ಟು ಏನೂ ಮಾಡಲಾರಿರಿ.

6ಯಾವನು ನನ್ನಲ್ಲಿ ನೆಲೆಗೊಂಡಿರುವುದಿಲ್ಲವೋ ಅವನು ಹೊರಕ್ಕೆ ಬಿಸಾಡಲ್ಪಟ್ಟ ಕೊಂಬೆಯಂತೆ ಒಣಗಿಹೋಗುವನು. ಅಂಥ ಕೊಂಬೆಗಳನ್ನು ಕೂಡಿಸಿ ಬೆಂಕಿಯಲ್ಲಿ ಹಾಕುವರು. ಅವು ಸುಟ್ಟು ಹೋಗುತ್ತವೆ.

7ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನಾದರೂ ಬೇಡಿಕೊಳ್ಳಿರಿ ಅದು ನಿಮಗೆ ದೊರೆಯುವುದು.

8ನೀವು ಬಹಳ ಫಲಕೊಡುವುದರಿಂದಲೇ ನನ್ನ ತಂದೆಗೆ ಮಹಿಮೆ ಉಂಟಾಗುವುದು ಮತ್ತು ನೀವು ನನ್ನ ಶಿಷ್ಯರಾಗುವಿರಿ.

9“ತಂದೆ ನನ್ನನ್ನು ಪ್ರೀತಿಸಿದ ಹಾಗೆಯೇ ನಾನೂ ನಿಮ್ಮನ್ನು ಪ್ರೀತಿಸಿದ್ದೇನೆ. ನೀವು ನನ್ನ ಪ್ರೀತಿಯಲ್ಲಿ ನೆಲೆಗೊಂಡಿರಿ.

10ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಗೊಂಡು ಆತನ ಪ್ರೀತಿಯಲ್ಲಿ ನೆಲೆಗೊಂಡಿರುವ ಪ್ರಕಾರ, ನೀವು ನನ್ನ ಆಜ್ಞೆಗಳನ್ನು ಕೈಕೊಂಡು ನಡೆದರೆ, ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.

ಯೋಹಾನನು 15

ಇಂಗ್ಲಿಷ್‌ನಲ್ಲಿ

Berean Standard BibleJohn 15:7If you remain in Me and My words remain in you, ask whatever you wish, and it will be done for you.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಕೀರ್ತ 37:4ನೀನು ಯೆಹೋವನಲ್ಲಿ ಸಂತೋಷಿಸು; ಆಗ ಆತನು ನಿನ್ನ ಇಷ್ಟಾರ್ಥಗಳನ್ನು ನೆರವೇರಿಸುವನು.
1 ಯೋಹಾ 5:14ಮತ್ತು ದೇವರ ಚಿತ್ತಾನುಸಾರವಾಗಿ ಏನಾದರೂ ಬೇಡಿಕೊಂಡರೆ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬ ಭರವಸೆಯು ಆತನಲ್ಲಿ ನಮಗುಂಟು.
ಯೋಹಾ 14:13ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ನೆರವೇರಿಸುವೆನು. ಹೀಗೆ ಮಗನ ಮೂಲಕವಾಗಿ ತಂದೆಗೆ ಮಹಿಮೆ ಉಂಟಾಗುವುದು.
1 ಯೋಹಾ 3:22ಆತನ ಆಜ್ಞೆಗಳನ್ನು ಕೈಕೊಂಡು ಆತನಿಗೆ ಮೆಚ್ಚಿಕೆಯಾಗುವ ಕಾರ್ಯಗಳನ್ನು ಮಾಡುವವರಾದರೆ ನಾವು ಏನು ಬೇಡಿಕೊಂಡರೂ ಆತನಿಂದ ಹೊಂದುವೆವು.
ಯೋಹಾ 15:16ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿದ್ದೇನೆ, ನೀವು ಹೊರಟು ಹೋಗಿ ಫಲಕೊಡಬೇಕೆಂತಲೂ, ಹಾಗೂ ನೀವು ಕೊಡುವ ಫಲವು ಸದಾಕಾಲ ನಿಲ್ಲುವಂಥದ್ದಾಗಬೇಕಂತಲೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ, ಅದನ್ನು ಆತನು ನಿಮಗೆ ಕೊಡುವನು.
ಮತ್ತಾ 7:7“ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು;
ಯೋಹಾ 16:23ಆ ದಿನದಲ್ಲಿ ನೀವು ನನ್ನನ್ನು ಏನೂ ಕೇಳುವುದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅದನ್ನು ಆತನು ನಿಮಗೆ ಕೊಡುವನು.
ಗಲಾ 5:16ನಾನು ಹೇಳುವುದೇನಂದರೆ ಪವಿತ್ರಾತ್ಮನನ್ನು ಅನುಸರಿಸಿ ನಡೆದುಕೊಳ್ಳಿರಿ, ಆಗ ನೀವು ಶರೀರಭಾವದ ಅಭಿಲಾಷೆಗಳನ್ನು ಎಷ್ಟು ಮಾತ್ರಕ್ಕೂ ನೆರವೇರಿಸುವುದಿಲ್ಲ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು