Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಯೋಹಾನನು 3:16

ಬೈಬಲ್ ವಚನ · IRV

ಯೋಹಾನನು 3:16

“ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.

ಇಡೀ ಅಧ್ಯಾಯ ಓದಿ: ಯೋಹಾನನು 3

ಸಂದರ್ಭದಲ್ಲಿ

13ಪರಲೋಕದಿಂದ ಇಳಿದು ಬಂದವನೇ, ಅಂದರೆ, ಮನುಷ್ಯಕುಮಾರನೇ ಹೊರತು ಮತ್ತಾರು ಪರಲೋಕಕ್ಕೆ ಏರಿ ಹೋದವರಿಲ್ಲ.

14ಇದಲ್ಲದೆ ಮೋಶೆಯು ಅಡವಿಯಲ್ಲಿ ಕಂಚಿನ ಸರ್ಪವನ್ನು ಮೇಲೆ ಎತ್ತಿ ನಿಲ್ಲಿಸಿದ ಹಾಗೆಯೇ ಮನುಷ್ಯಕುಮಾರನು ಸಹ ಮೇಲಕ್ಕೆ ಎತ್ತಲ್ಪಡಬೇಕು.

15ಹೀಗೆ ಆತನನ್ನು ನಂಬುವವರೆಲ್ಲರೂ ನಿತ್ಯಜೀವವನ್ನು ಹೊಂದುವರು.

16“ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.

17ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ಅಪರಾಧಿಯೆಂದು ಖಂಡಿಸಲಿಕ್ಕೆ ಕಳುಹಿಸಲಿಲ್ಲ.

18ಆತನನ್ನು ನಂಬುವವನಿಗೆ ನ್ಯಾಯತೀರ್ಪು ಆಗುವುದಿಲ್ಲ, ಆದರೆ ನಂಬದವನಿಗೆ ಆಗಲೇ ತೀರ್ಪಾಯಿತು. ಏಕೆಂದರೆ, ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.

19ಆ ತೀರ್ಪು ಏನೆಂದರೆ ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿಸಿದರು.

ಯೋಹಾನನು 3

ಇಂಗ್ಲಿಷ್‌ನಲ್ಲಿ

Berean Standard BibleJohn 3:16For God so loved the world that He gave His one and only Son, that everyone who believes in Him shall not perish but have eternal life.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ರೋಮಾ 5:8ಆದರೆ ನಾವು ಪಾಪಿಗಳಾಗಿದ್ದಾಗಲೇ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ದೃಢಪಡಿಸಿದ್ದಾನೆ.
1 ಯೋಹಾ 4:9–10ನಾವು ಆತನ ಮೂಲಕ ಜೀವಿಸುವುದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮಲ್ಲಿ ಪ್ರತ್ಯಕ್ಷವಾಗಿದೆ. ನಾವು ದೇವರನ್ನು ಪ್ರೀತಿಸಿಲ್ಲ, ಆದರೂ ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತ ಬಲಿಯಾಗಿ ತನ್ನ ಮಗನನ್ನು ಕಳುಹಿಸಿಕೊಟ್ಟಿದ್ದರಲ್ಲಿಯೇ ಆತನ ನಿಜವಾದ ಪ್ರೀತಿಯು ತೋರಿಬರುತ್ತದೆ.
ರೋಮಾ 8:32ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ, ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೋ?
ಯೋಹಾ 11:25–26ಯೇಸು ಆಕೆಗೆ, “ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು, ಮತ್ತು ಜೀವಿಸುವ ಪ್ರತಿಯೊಬ್ಬನು ನನ್ನಲ್ಲಿ ನಂಬಿಕೆಯಿಟ್ಟರೆ, ಅವನು ಎಂದಿಗೂ ಸಾಯುವುದಿಲ್ಲ. ಇದನ್ನು ನೀನು ನಂಬುತ್ತೀಯೋ?” ಎಂದು ಕೇಳಿದಕ್ಕೆ,
ಯೋಹಾ 6:40ಮಗನನ್ನು ನೋಡಿ ತಂದೆಯಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ನನ್ನ ತಂದೆಯ ಚಿತ್ತವಾಗಿದೆ, ಮತ್ತು ನಾನು ಕಡೆ ದಿನದಲ್ಲಿ ಅವನನ್ನು ಎಬ್ಬಿಸುವೆನು” ಎಂದು ಹೇಳಿದನು.
ಯೋಹಾ 3:36ಆತನ ಮಗನನ್ನು ನಂಬುವವನಿಗೆ ನಿತ್ಯಜೀವ ಉಂಟು. ಮಗನಿಗೆ ಅವಿಧೇಯನಾಗುವವನು ಜೀವವನ್ನು ಕಾಣುವುದೇ ಇಲ್ಲ. ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು.”
1 ಯೋಹಾ 4:19ದೇವರು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು