ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಯೋಹಾನನು 4:24
ಬೈಬಲ್ ವಚನ · IRV
ಯೋಹಾನನು 4:24
ದೇವರು ಆತ್ಮನಾಗಿದ್ದಾನೆ, ಮತ್ತು ಆತನನ್ನು ಆರಾಧಿಸುವವರು ಆತ್ಮನಿಂದಲೂ ಮತ್ತು ಸತ್ಯದಿಂದಲೂ ಆರಾಧಿಸಬೇಕಾಗಿದೆ” ಎಂದನು.
ಸಂದರ್ಭದಲ್ಲಿ
21ಯೇಸು ಆಕೆಗೆ “ಅಮ್ಮಾ, ನನ್ನ ಮಾತನ್ನು ನಂಬು, ಒಂದು ಕಾಲ ಬರುತ್ತದೆ. ಆ ಕಾಲದಲ್ಲಿ ನೀವು ತಂದೆಯನ್ನು ಆರಾಧಿಸಬೇಕಾದರೆ, ಯೆರೂಸಲೇಮಿಗಾಗಲಿ ಅಥವಾ ಈ ಬೆಟ್ಟಕ್ಕಾಗಲಿ ಹೋಗುವುದಿಲ್ಲ.
22ಸಮಾರ್ಯದವರಾದ ನೀವು ಅರಿಯದೇ ಇರುವಂಥದನ್ನು ಆರಾಧಿಸುತ್ತೀರಿ, ಆದರೆ ನಾವು ಅರಿತಿರುವುದನ್ನೇ ಆರಾಧಿಸುವವರಾಗಿದ್ದೇವೆ. ಏಕೆಂದರೆ, ಬರಬೇಕಾದ ರಕ್ಷಣೆಯು ಯೆಹೂದ್ಯರೊಳಗಿಂದ ಬರುತ್ತದಷ್ಟೆ.
23ಅದಕ್ಕಿಂತ ಹೆಚ್ಚಾಗಿ, ನಿಜವಾದ ಆರಾಧಕರು ತಂದೆಯನ್ನು ಆತ್ಮನಿಂದಲೂ ಮತ್ತು ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ; ಅದು ಈಗಲೇ ಬಂದಿದೆ, ಅದುದರಿಂದ, ತಂದೆಯು ನಿಜವಾಗಿಯೂ ಈ ರೀತಿ ಆರಾಧಿಸುವವರನ್ನೇ ಹುಡುಕುತ್ತಾನೆ.
24ದೇವರು ಆತ್ಮನಾಗಿದ್ದಾನೆ, ಮತ್ತು ಆತನನ್ನು ಆರಾಧಿಸುವವರು ಆತ್ಮನಿಂದಲೂ ಮತ್ತು ಸತ್ಯದಿಂದಲೂ ಆರಾಧಿಸಬೇಕಾಗಿದೆ” ಎಂದನು.
25ಆ ಹೆಂಗಸು ಆತನಿಗೆ “ಮೆಸ್ಸೀಯನು (ಎಂದರೆ ಕ್ರಿಸ್ತನು) ಬರುತ್ತಾನೆಂದು ನಾನು ಬಲ್ಲೆನು. ಆತನು ಬಂದಾಗ ನಮಗೆ ಎಲ್ಲವನ್ನು ತಿಳಿಸಿಕೊಡುವನು” ಎಂದು ಹೇಳಲು,
26ಯೇಸು ಆಕೆಗೆ “ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು” ಎಂದು ಹೇಳಿದನು.
27ಅಷ್ಟರೊಳಗೆ ಆತನ ಶಿಷ್ಯರು ಬಂದು ಆತನು ಆ ಸ್ತ್ರೀಯೊಂದಿಗೆ ಮಾತನಾಡುತ್ತಿರುವುದನ್ನು ಕಂಡು ಆಶ್ಚರ್ಯಪಟ್ಟರು. ಆದರೂ, “ನಿನಗೆ ಏನು ಬೇಕು? ಆಕೆಯ ಸಂಗಡ ಯಾಕೆ ಮಾತನಾಡುತ್ತಿರುವೆ?” ಎಂದು ಒಬ್ಬರೂ ಆತನನ್ನು ಕೇಳಲಿಲ್ಲ.
ಇಂಗ್ಲಿಷ್ನಲ್ಲಿ
God is Spirit, and His worshipers must worship Him in spirit and in truth.”ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ಆ ಕರ್ತನು ದೇವರಾತ್ಮನೇ. ಕರ್ತನ ಆತ್ಮನು ಇರುವಲ್ಲಿ ಸ್ವಾತಂತ್ರ್ಯವಿರುತ್ತದೆ.“ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ. ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಅವರು ಉಪದೇಶವಾಗಿ ಬೋಧಿಸುತ್ತಿರುವುದರಿಂದ ನನ್ನನ್ನು ವ್ಯರ್ಥವಾಗಿ ಆರಾಧಿಸುವರು” ಎಂಬುದೇ.ನಿಜವಾದ ಸುನ್ನತಿಯವರು ಯಾರೆಂದರೆ, ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ, ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ, ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವುಗಳೇ.ಕುಗ್ಗಿದ ಮನಸ್ಸೇ ದೇವರಿಗೆ ಇಷ್ಟವಾದ ಯಜ್ಞ; ದೇವರೇ, ಪಶ್ಚಾತ್ತಾಪದಿಂದ ಜಜ್ಜಿಹೋದ ಮನಸ್ಸನ್ನು ನೀನು ತಿರಸ್ಕರಿಸುವುದಿಲ್ಲ.ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.ಆದರೆ ಯೆಹೋವನು ಸಮುವೇಲನಿಗೆ, “ನೀನು ಅವನ ಸೌಂದರ್ಯವನ್ನೂ, ಎತ್ತರವನ್ನೂ ನೋಡಬೇಡ; ನಾನು ಅವನನ್ನು ನಿರಾಕರಿಸಿದ್ದೇನೆ. ಯೆಹೋವನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ನೋಡದೆ ಹೃದಯದ ಮತ್ತು ಅಂತರಂಗದ ಸೌಂದರ್ಯ ನೋಡುವವನಾಗಿದ್ದಾನೆ” ಅಂದನು.ಸರ್ವಯುಗಗಳ ಅರಸನೂ, ಅಮರನೂ, ಅದೃಶ್ಯನೂ ಆಗಿರುವ ಏಕ ದೇವರಿಗೆ ಘನವೂ ಮಹಿಮೆಯೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್.ನಾನು ಕೆಟ್ಟತನದ ಮೇಲೆ ಮನಸ್ಸಿಟ್ಟಿದ್ದರೆ, ಸ್ವಾಮಿಯು ನನ್ನ ವಿಜ್ಞಾಪನೆಯನ್ನು ಕೇಳುತ್ತಿದ್ದಿಲ್ಲ.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು