Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಯೋಹಾನನು 7:24

ಬೈಬಲ್ ವಚನ · IRV

ಯೋಹಾನನು 7:24

ತೋರಿಕೆಗೆ ಅನುಸಾರವಾಗಿ ತೀರ್ಪುಮಾಡಬೇಡಿರಿ. ನ್ಯಾಯಬದ್ಧವಾಗಿ ತೀರ್ಪುನ್ನು ಮಾಡಿರಿ” ಎಂದನು.

ಇಡೀ ಅಧ್ಯಾಯ ಓದಿ: ಯೋಹಾನನು 7

ಸಂದರ್ಭದಲ್ಲಿ

21ಯೇಸು ಅವರಿಗೆ “ನಾನು ಒಂದು ಸೂಚಕ ಕಾರ್ಯವನ್ನು ಮಾಡಿದೆನು, ಅದಕ್ಕೆ ನೀವೆಲ್ಲರೂ ಬೆರಗಾಗಿದ್ದೀರಿ.

22ಮೋಶೆಯು ನಿಮಗೆ ಸುನ್ನತಿಯೆಂಬ ನಿಯಮವನ್ನು ನೇಮಿಸಿದನು, (ಅದು ಮೋಶೆಯಿಂದ ಬಂದದ್ದೆಂದು ನಾನು ಹೇಳುವುದಿಲ್ಲ, ಮೂಲಪುರುಷರ ಕಾಲದಿಂದ ಬಂದದ್ದು) ಮತ್ತು ಮನುಷ್ಯನಿಗೆ ಸುನ್ನತಿಯನ್ನು ಸಬ್ಬತ್ ದಿನದಲ್ಲಿಯೂ ಮಾಡುತ್ತೀರಿ.

23ಮೋಶೆಯ ಧರ್ಮಶಾಸ್ತ್ರವನ್ನು ಮೀರಬಾರದೆಂದು ಒಬ್ಬನು ಸಬ್ಬತ್ ದಿನದಲ್ಲಿ ಸುನ್ನತಿಯನ್ನು ಮಾಡಿಸಿಕೊಳ್ಳುವುದಾದರೆ, ನಾನು ಸಬ್ಬತ್ ದಿನದಲ್ಲಿ ಒಬ್ಬ ಮನುಷ್ಯನನ್ನು ಸ್ವಸ್ಥಮಾಡಿದ್ದಕ್ಕೆ ನನ್ನ ಮೇಲೆ ನೀವು ಏಕೆ ಕೋಪಗೊಳ್ಳುತ್ತೀರಿ?

24ತೋರಿಕೆಗೆ ಅನುಸಾರವಾಗಿ ತೀರ್ಪುಮಾಡಬೇಡಿರಿ. ನ್ಯಾಯಬದ್ಧವಾಗಿ ತೀರ್ಪುನ್ನು ಮಾಡಿರಿ” ಎಂದನು.

25ಆಮೇಲೆ ಯೆರೂಸಲೇಮಿನವರಲ್ಲಿ ಕೆಲವರು “ಅವರು ಕೊಲ್ಲಬೇಕೆಂದು ಹುಡುಕುವುದು ಈತನನ್ನೇ ಅಲ್ಲವೇ?

26ನೋಡಿರಿ, ಈತನು ಬಹಿರಂಗವಾಗಿ ಮಾತನಾಡುತ್ತಿದ್ದಾನೆ ಮತ್ತು ಅವರು ಆತನಿಗೆ ಏನೂ ಹೇಳುತ್ತಿಲ್ಲ. ಬಹುಶಃ ಈತನೇ ನಿಜವಾದ ಕ್ರಿಸ್ತನೆಂದು ಅಧಿಕಾರಿಗಳು ತಿಳಿದುಕೊಂಡಿದ್ದಾರೋ?

27ಆದರೆ ಇವನು ಎಲ್ಲಿಂದ ಬಂದವನೆಂದು ನಾವು ಬಲ್ಲೆವು, ಕ್ರಿಸ್ತನು ಬರುವಾಗ ಆತನು ಎಲ್ಲಿಂದ ಬಂದವನೆಂದು ಒಬ್ಬರಿಗೂ ತಿಳಿಯುವುದಿಲ್ಲವೆಂದು ಮಾತನಾಡಿಕೊಳ್ಳುತ್ತಿದ್ದರು.”

ಯೋಹಾನನು 7

ಇಂಗ್ಲಿಷ್‌ನಲ್ಲಿ

Berean Standard BibleJohn 7:24Stop judging by outward appearances, and start judging justly.”

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಯೆಶಾ 11:3–4ಆತನು ಯೆಹೋವನ ಭಯದಲ್ಲಿ ಆನಂದಿಸುವನು. ಆತನು ಕಣ್ಣಿಗೆ ಕಂಡಂತೆ ತೀರ್ಪು ಮಾಡುವುದಿಲ್ಲ. ಕಿವಿಗೆ ಬಿದ್ದಂತೆ ನಿರ್ಣಯಿಸುವುದಿಲ್ಲ. ಆದರೆ ಬಡವರಿಗೋಸ್ಕರ ನ್ಯಾಯವಾಗಿ ತೀರ್ಪುಮಾಡುವನು. ಲೋಕದ ದೀನರಿಗಾಗಿ ಧರ್ಮವನ್ನು ನಿರ್ಣಯಿಸುವನು. ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ದಂಡಿಸುವನು. ದುಷ್ಟನನ್ನು ತನ್ನ ತುಟಿಗಳ ಉಸಿರಿನಿಂದ ಕೊಲ್ಲುವನು.
ಯಾಕೋ 2:9ಒಂದು ವೇಳೆ ಅದನ್ನು ಬಿಟ್ಟು ನೀವು ಪಕ್ಷಪಾತಿಗಳಾಗಿದ್ದರೆ ಪಾಪಮಾಡುವವರಾಗಿದ್ದು ಅಪರಾಧಿಗಳೆಂದು ಧರ್ಮಶಾಸ್ತ್ರದ ಪ್ರಕಾರ ತೀರ್ಮಾನಿಸಲ್ಪಡುತ್ತೀರಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು