Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಯೋಹಾನನು 8:32

ಬೈಬಲ್ ವಚನ · IRV

ಯೋಹಾನನು 8:32

ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ ಮತ್ತು ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವುದು” ಎಂದು ಹೇಳಿದನು.

ಇಡೀ ಅಧ್ಯಾಯ ಓದಿ: ಯೋಹಾನನು 8

ಸಂದರ್ಭದಲ್ಲಿ

29ನನ್ನನ್ನು ಕಳುಹಿಸಿಕೊಟ್ಟಾತನು ನನ್ನ ಸಂಗಡ ಇದ್ದಾನೆ. ನಾನು ಆತನಿಗೆ ಮೆಚ್ಚಿಕೆಯಾದದ್ದನ್ನು ಯಾವಾಗಲೂ ಮಾಡುವುದರಿಂದ, ಆತನು ನನ್ನನ್ನು ಒಬ್ಬಂಟಿಗನಾಗಿ ಬಿಡುವುದಿಲ್ಲ” ಎಂದನು.

30ಆತನು ಈ ಮಾತುಗಳನ್ನು ಹೇಳುತ್ತಿದ್ದಾಗಲೇ ಅನೇಕರು ಆತನಲ್ಲಿ ನಂಬಿಕೆಯಿಟ್ಟರು.

31ಆಗ ಯೇಸು ತನ್ನನ್ನು ನಂಬಿದ ಯೆಹೂದ್ಯರಿಗೆ, “ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿರುವುದಾದರೆ, ನಿಜವಾಗಿಯೂ ನೀವು ನನ್ನ ಶಿಷ್ಯರಾಗಿರುವಿರಿ.

32ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ ಮತ್ತು ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವುದು” ಎಂದು ಹೇಳಿದನು.

33ಅದಕ್ಕವರು ಆತನಿಗೆ, “ನಾವು ಅಬ್ರಹಾಮನ ಸಂತಾನದವರು ಮತ್ತು ನಾವು ಎಂದೂ ಯಾರಿಗೂ ದಾಸರಾಗಿಲ್ಲ, ನಿಮಗೆ ಬಿಡುಗಡೆಯಾಗುವುದೆಂದು ನೀನು ಹೇಳುವುದಾದರೂ ಹೇಗೆ?” ಎಂದು ಪ್ರಶ್ನಿಸಿದರು.

34ಅದಕ್ಕೆ ಯೇಸು, “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಪಾಪ ಮಾಡುವವರೆಲ್ಲರು ಪಾಪಕ್ಕೆ ದಾಸರಾಗಿದ್ದಾರೆ.

35ದಾಸನು ಮನೆಯಲ್ಲಿ ಶಾಶ್ವತವಾಗಿ ಇರುವುದಿಲ್ಲ, ಆದರೆ ಮಗನು ಶಾಶ್ವತವಾಗಿ ಇರುತ್ತಾನೆ.

ಯೋಹಾನನು 8

ಇಂಗ್ಲಿಷ್‌ನಲ್ಲಿ

Berean Standard BibleJohn 8:32Then you will know the truth, and the truth will set you free.”

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ರೋಮಾ 8:2ಯಾಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಜೀವವನ್ನುಂಟುಮಾಡುವ ಪವಿತ್ರಾತ್ಮನ ನಿಯಮವು ನನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ ವಿಮುಕ್ತಿಗೊಳಿಸಿತು.
ಯೋಹಾ 8:36ಆದುದರಿಂದ ಮಗನು ನಿಮ್ಮನ್ನು ಬಿಡುಗಡೆ ಮಾಡಿದರೆ, ನಿಜವಾಗಿಯೂ ನಿಮಗೆ ಬಿಡುಗಡೆಯಾಗುವುದು.
ಯೋಹಾ 17:17ನೀನು ಸತ್ಯದಿಂದ ಇವರನ್ನು ಪ್ರತಿಷ್ಠೆಪಡಿಸು, ನಿನ್ನ ವಾಕ್ಯವೇ ಸತ್ಯ.
1 ಪೇತ್ರ 2:16ಸ್ವತಂತ್ರರಂತೆ ನಡೆದುಕೊಳ್ಳಿರಿ, ಆದರೆ ಕೆಟ್ಟತನವನ್ನು ಮರೆಮಾಡುವುದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಬಳಸಿಕೊಳ್ಳಬೇಡಿರಿ, ಆದರೆ ನೀವು ದೇವರ ದಾಸರಂತೆ ನಡೆದುಕೊಳ್ಳಿರಿ.
ಯೋಹಾ 14:6ಯೇಸು ಅವನಿಗೆ, “ನಾನೇ ಮಾರ್ಗವೂ, ಸತ್ಯವೂ ಮತ್ತು ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.
ರೋಮಾ 6:22ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದ್ದರಿಂದ ನಿಮಗೆ ಶುದ್ಧೀಕರಣವೆಂಬ ಫಲವು ದೊರಕಿರುವುದಲ್ಲದೆ ಅಂತ್ಯದಲ್ಲಿ ನಿತ್ಯ ಜೀವವನ್ನು ಹೊಂದುವಿರಿ.
ರೋಮಾ 6:14–18ಯಾಕೆಂದರೆ ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ. ಹಾಗಾದರೇನು? ನಾವು ಧರ್ಮಶಾಸ್ತ್ರಾಧೀನರಲ್ಲ, ಕೃಪೆಗೆ ಅಧೀನರಾಗಿದ್ದೇವೆಂದು ಪಾಪವನ್ನು ಮಾಡಬಹುದೋ? ಎಂದಿಗೂ ಮಾಡಬಾರದು. ನೀವು ಯಾವನಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ನೀವು ಒಪ್ಪಿಸಿ ಕೊಡುತ್ತೀರೋ ಆ ಯಜಮಾನನಿಗೆ ದಾಸರಾಗಿಯೇ ಇರುವಿರೆಂಬುದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ ಫಲ; ನಂಬಿಕೆಯೆಂಬ ವಿಧೇಯತ್ವಕ್ಕೆ ದಾಸರಾದರೆ ನೀತಿಯೇ ಫಲ ಆದರೆ ನೀವು ಮೊದಲು ಪಾಪಕ್ಕೆ ದಾಸರಾಗಿದ್ದರೂ ನಿಮಗೆ ಕಲಿಸಿಕೊಟ್ಟ ಬೋಧನೆಗೆ ನೀವು ಮನಃಪೂರ್ವಕವಾಗಿ ಅಧೀನರಾದ್ದರಿಂದಲೂ, ಪಾಪದಿಂದ ಬಿಡುಗಡೆಯನ್ನು ಹೊಂದಿ ನೀತಿಗೆ ದಾಸರಾದ್ದರಿಂದಲೂ ದೇವರಿಗೆ ಸ್ತೋತ್ರವಾಗಲಿ.
ಯೆಶಾ 61:1ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು