ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಯೆಹೋಶುವನು 1:9
ಬೈಬಲ್ ವಚನ · IRV
ಯೆಹೋಶುವನು 1:9
ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವನು” ಎಂದು ಹೇಳಿದನು.
ಸಂದರ್ಭದಲ್ಲಿ
6ನಿನ್ನನ್ನು ಕೈಬಿಡುವುದಿಲ್ಲ, ತೊರೆಯುವುದಿಲ್ಲ, ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಏಕೆಂದರೆ ನಾನು ಈ ಜನರ ಪೂರ್ವಿಕರಿಗೆ ವಾಗ್ದಾನಮಾಡಿದ ದೇಶವನ್ನು ಇವರಿಗಾಗಿ ನೀನೇ ಸ್ವಾಧೀನಮಾಡಿಕೊಡಬೇಕು.
7ನನ್ನ ಸೇವಕನಾದ ಮೋಶೆಯು ನಿನಗೆ ಬೋಧಿಸಿ ಆಜ್ಞಾಪಿಸಿದ ಧರ್ಮೋಪದೇಶವನ್ನೆಲ್ಲಾ ಕೈಕೊಂಡು ನಡೆಯುವುದರಲ್ಲಿ ಸ್ಥಿರಚಿತ್ತನಾಗಿರು, ಪೂರ್ಣಧೈರ್ಯದಿಂದಿರು. ಅದನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಬೇಡ, ಆಗ ನೀನು ಸಫಲನಾಗುವಿ.
8ಈ ಧರ್ಮಶಾಸ್ತ್ರವು ಯಾವಾಗಲೂ ನಿನ್ನ ಬಾಯಲ್ಲಿರಲಿ; ಹಗಲಿರುಳು ಅದನ್ನು ಧ್ಯಾನಿಸುತ್ತಾ ಅದರಲ್ಲಿ ಬರೆದಿರುವುದನ್ನೆಲ್ಲಾ ಕೈಕೊಂಡು ನಡೆ. ಆಗ ನಿನ್ನ ಕಾರ್ಯವೆಲ್ಲವೂ, ನೀನು ಹೋಗುವ ಮಾರ್ಗಗಳು ಸಫಲವಾಗುವುದು. ನೀನು ಚುರುಕು ಬುದ್ಧಿಯ ವ್ಯಕ್ತಿಯಾಗಿ ರೂಪಾಂತರ ಹೊಂದುವಿ.
9ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವನು” ಎಂದು ಹೇಳಿದನು.
10ಆಗ ಯೆಹೋಶುವನು ಜನರ ಅಧಿಕಾರಿಗಳಿಗೆ
11“ನೀವು ಪಾಳೆಯದ ಎಲ್ಲೆಡೆಗೆ ಹೋಗಿ ನಿಮ್ಮ ಜನರಿಗೆ ‘ನೀವು ಇನ್ನು ಮೂರು ದಿನಗಳಲ್ಲಿ ಈ ಯೊರ್ದನ್ ನದಿಯನ್ನು ದಾಟಿ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವತ್ತಾಗಿ ಕೊಡುವ ದೇಶವನ್ನು ವಶಪಡಿಸಿಕೊಳ್ಳಲು ಹೋಗಬೇಕು. ಆದುದರಿಂದ ನಿಮಗೆ ಬೇಕಾದ ಆಹಾರವನ್ನು ಸಿದ್ಧಮಾಡಿಕೊಳ್ಳಿರಿ’ ಎಂದು ತಿಳಿಸಿರಿ” ಅಂದನು.
12ಬಳಿಕ ಯೆಹೋಶುವನು ರೂಬೇನ್ಯರಿಗೂ, ಗಾದ್ಯರಿಗೂ, ಮನಸ್ಸೆ ಕುಲದ ಅರ್ಧ ಜನರಿಗೂ ಹೇಳಿದ್ದೇನಂದರೆ
ಇಂಗ್ಲಿಷ್ನಲ್ಲಿ
Have I not commanded you to be strong and courageous? Do not be afraid; do not be discouraged, for the LORD your God is with you wherever you go.”ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ, ಪುನಃ ಈ ದೇಶಕ್ಕೆ ಬರಮಾಡುವೆನು. ಏಕೆಂದರೆ ನಾನು ನಿನಗೆ ಹೇಳಿದ್ದನ್ನೆಲ್ಲಾ ನೆರವೇರಿಸದ ಹೊರತು ಬಿಡುವುದಿಲ್ಲ” ಎಂದನು.ಆಗ ಯೆಹೋವನು ನನಗೆ, “ಬಾಲಕನು ಎನ್ನಬೇಡ; ನಾನು ಯಾರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಅವರೆಲ್ಲರ ಬಳಿಗೆ ನೀನು ಖಂಡಿತವಾಗಿ ಹೋಗುವಿ; ನಾನು ಆಜ್ಞಾಪಿಸುವುದನ್ನೆಲ್ಲಾ ಖಂಡಿತವಾಗಿ ನುಡಿಯುವಿ. ಅವರಿಗೆ ಅಂಜಬೇಡ; ನಿನ್ನನ್ನು ಉದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು” ಎಂದು ಹೇಳಿದನು.ದಾವೀದನ ಕೀರ್ತನೆ. ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ; ನಾನು ಯಾರಿಗೆ ಭಯಪಟ್ಟೆನು? ಯೆಹೋವನು ನನ್ನ ಪ್ರಾಣದ ಆಧಾರವು; ನಾನು ಯಾರಿಗೆ ಹೆದರೇನು? ನನ್ನನ್ನು ಬಾಧಿಸುತ್ತಿರುವ ದುರ್ವೈರಿಗಳು ನನ್ನನ್ನು ನುಂಗಿಬಿಡಬೇಕೆಂದು ಬಂದು, ತಾವೇ ನೆಲಕ್ಕೆ ಬಿದ್ದುಹೋದರು.ನೀವು ನಿಮ್ಮ ಶತ್ರುಗಳಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟಾಗ ಅವರ ಹತ್ತಿರ ಕುದುರೆಗಳೂ, ರಥಗಳೂ ಮತ್ತು ನಿಮಗಿಂತ ಹೆಚ್ಚಾದ ಕಾಲ್ಬಲವೂ ಇರುವುದನ್ನು ಕಂಡರೆ ಹೆದರಬಾರದು. ಏಕೆಂದರೆ ಐಗುಪ್ತದೇಶದಿಂದ ನಿಮ್ಮನ್ನು ಬಿಡಿಸಿದ ನಿಮ್ಮ ದೇವರಾದ ಯೆಹೋವನು ನಿಮ್ಮ ಕಡೆ ಇದ್ದಾನಲ್ಲಾ.ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬ ವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾಆಗ ಮೋಶೆ ಯೆಹೋಶುವನನ್ನು ಕರೆದು ಇಸ್ರಾಯೇಲರ ಮುಂದೆ ಅವನಿಗೆ, “ಯೆಹೋವನು ಇವರ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶಕ್ಕೆ ನೀನೇ ಇವರೊಡನೆ ಹೋಗಿ ಅದನ್ನು ಅವರಿಗೆ ಸ್ವಾಧೀನಪಡಿಸಬೇಕು. ಆದುದರಿಂದ ಶೂರನಾಗಿ ಧೈರ್ಯದಿಂದಿರು; ಯೆಹೋವನು ತಾನೇ ನಿನ್ನ ಮುಂದೆ ಹೋಗುವನು; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ, ಕೈಬಿಡುವುದಿಲ್ಲ; ಅಂಜಬೇಡ, ಧೈರ್ಯದಿಂದಿರು” ಎಂದು ಹೇಳಿದನು.ಈಗಲಾದರೋ, ಯಾಕೋಬನ ವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ ರೂಪಿಸಿದವನಾದ ಯೆಹೋವನು ಹೀಗೆನ್ನುತ್ತಾನೆ, “ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರು ಹಿಡಿದು ಕರೆದೆನಲ್ಲಾ, ನೀನು ನನ್ನವನೇ.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು