Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಯಾಜಕಕಾಂಡ 19:31

ಬೈಬಲ್ ವಚನ · IRV

ಯಾಜಕಕಾಂಡ 19:31

“‘ಸತ್ತವರಲ್ಲಿ ವಿಚಾರಿಸುವವರ ಮತ್ತು ಮಂತ್ರವಾದಿಗಳ ಹತ್ತಿರ ಹೋಗಬಾರದು; ಅವರ ಆಲೋಚನೆಯನ್ನು ಕೇಳಿ ಅಶುದ್ಧರಾಗಬಾರದು. ನಾನು ನಿಮ್ಮ ದೇವರಾದ ಯೆಹೋವನು.

ಇಡೀ ಅಧ್ಯಾಯ ಓದಿ: ಯಾಜಕಕಾಂಡ 19

ಸಂದರ್ಭದಲ್ಲಿ

28“‘ಸತ್ತವರಿಗೋಸ್ಕರ ದುಃಖವನ್ನು ಸೂಚಿಸುವುದಕ್ಕಾಗಿ ದೇಹವನ್ನು ಗಾಯಮಾಡಿಕೊಳ್ಳಬಾರದು. ಶರೀರದ ಮೇಲೆ ಹಚ್ಚೇ ಹಾಕಿಸಿಕೊಳ್ಳಬಾರದು. ನಾನು ಯೆಹೋವನು.

29“‘ಮಗಳನ್ನು ವೇಶ್ಯೆಯನ್ನಾಗಿ ಮಾಡಬಾರದು. ಹಾಗೆ ಮಾಡಿದರೆ ವೇಶ್ಯಾವಾಟಿಕೆ ಪ್ರಬಲವಾಗಿ ದೇಶದಲ್ಲೆಲ್ಲಾ ತುಂಬಿಹೋಗುವುದು.

30“‘ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ನೀವು ಆಚರಿಸಬೇಕು; ನನ್ನ ದೇವಸ್ಥಾನದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಯೆಹೋವನು.

31“‘ಸತ್ತವರಲ್ಲಿ ವಿಚಾರಿಸುವವರ ಮತ್ತು ಮಂತ್ರವಾದಿಗಳ ಹತ್ತಿರ ಹೋಗಬಾರದು; ಅವರ ಆಲೋಚನೆಯನ್ನು ಕೇಳಿ ಅಶುದ್ಧರಾಗಬಾರದು. ನಾನು ನಿಮ್ಮ ದೇವರಾದ ಯೆಹೋವನು.

32“‘ವಯೋ ವೃದ್ಧರ ಮುಂದೆ ಎದ್ದು ನಿಂತು ಅವರನ್ನು ಸನ್ಮಾನಿಸಬೇಕು. ನಿಮ್ಮ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ನಾನು ಯೆಹೋವನು.

33“‘ನಿಮ್ಮ ದೇಶದಲ್ಲಿ ವಾಸವಾಗಿರುವ ಪರದೇಶದವರಿಗೆ ಅನ್ಯಾಯವೇನೂ ಮಾಡಬಾರದು.

34ಅವರು ನಿಮಗೆ ಸ್ವದೇಶದವರಂತೆಯೇ ಇರಬೇಕು; ಅವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ಐಗುಪ್ತ ದೇಶದಲ್ಲಿದ್ದಾಗ ನೀವೂ ಅನ್ಯರಾಗಿದ್ದಿರಲ್ಲವೇ. ನಾನು ನಿಮ್ಮ ದೇವರಾದ ಯೆಹೋವನು.

ಯಾಜಕಕಾಂಡ 19

ಇಂಗ್ಲಿಷ್‌ನಲ್ಲಿ

Berean Standard BibleLeviticus 19:31You must not turn to mediums or spiritists; do not seek them out, or you will be defiled by them. I am the LORD your God.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಯೆಶಾ 8:19“ಗುಣಗುಟ್ಟುವ, ಪಿಸುಮಾತನಾಡುವ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನೂ ಆಶ್ರಯಿಸಿರಿ” ಎಂದು ಒಂದು ವೇಳೆ ನಿಮಗೆ ಹೇಳಾರು, “ಜನರು ತಮ್ಮ ದೇವರನ್ನೇ ಆಶ್ರಯಿಸಬಾರದೋ? ಜೀವಿತರಿಗಾಗಿ ಸತ್ತವರಲ್ಲಿ ವಿಚಾರಿಸುವುದು ಯುಕ್ತವೋ?
ಯಾಜ 20:27“‘ಸತ್ತವರಲ್ಲಿ ವಿಚಾರಿಸುವವರೂ, ಬೇತಾಳಿಕರೂ ಅವರು ಸ್ತ್ರೀಯರಾಗಲಿ ಅಥವಾ ಪುರುಷರಾಗಲಿ ಅವರು ಮರಣಶಿಕ್ಷೆ ಹೊಂದಬೇಕು. ಕಲ್ಲೆಸೆದು ಅವರನ್ನು ಕೊಲ್ಲಬೇಕು, ಆ ಶಿಕ್ಷೆಗೆ ಅವರೇ ಕಾರಣರು’” ಎಂದು ಹೇಳಿದನು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು