Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಲೂಕನು 10:38–42

ಬೈಬಲ್ ವಚನ · IRV

ಲೂಕನು 10:38–42

38ಅವರು ಸಂಚಾರಮಾಡುತ್ತಿರುವಾಗ ಆತನು ಒಂದು ಹಳ್ಳಿಗೆ ಬಂದನು. ಅಲ್ಲಿ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯಲ್ಲಿ ಉಳಿಸಿಕೊಂಡಳು.

39ಆಕೆಗೆ ಮರಿಯಳೆಂಬ ಒಬ್ಬ ತಂಗಿ ಇದ್ದಳು. ಈಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತುಕೊಂಡು ಆತನ ವಾಕ್ಯವನ್ನು ಕೇಳುತ್ತಿದ್ದಳು.

40ಆದರೆ ಮಾರ್ಥಳು ಉಪಚಾರ ಸೇವೆಯ ವಿಷಯವಾಗಿ ಬಹಳ ಬೇಸತ್ತು ಯೇಸುವಿನ ಬಳಿಗೆ ಬಂದು, “ಕರ್ತನೇ, ನನ್ನ ತಂಗಿಯು ಸೇವೆಗೆ ನನ್ನೊಬ್ಬಳನ್ನೇ ಬಿಟ್ಟಿದ್ದಾಳೆ, ಇದಕ್ಕೆ ನಿನಗೆ ಚಿಂತೆಯಿಲ್ಲವೋ? ನನಗೆ ನೆರವಾಗಬೇಕೆಂದು ಆಕೆಗೆ ಹೇಳು” ಅಂದಳು.

41ಆದರೆ, ಕರ್ತನು ಆಕೆಗೆ, “ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತೆಯಲ್ಲಿಯೂ ಗಡಿಬಿಡಿಯಲ್ಲಿಯೂ ಸಿಕ್ಕಿಕೊಂಡಿದ್ದೀ.

42ಆದರೆ ಅಗತ್ಯವಾದದ್ದು ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ, ಅದು ಆಕೆಯಿಂದ ತೆಗೆಯಲ್ಪಡುವುದಿಲ್ಲ” ಎಂದು ಉತ್ತರಕೊಟ್ಟನು.

ಇಡೀ ಅಧ್ಯಾಯ ಓದಿ: ಲೂಕನು 10

ಸಂದರ್ಭದಲ್ಲಿ

35ಮರುದಿನ ಅವನು ಎರಡು ದಿನಾರಿಗಳನ್ನು ತೆಗೆದು ಛತ್ರದವನಿಗೆ ಕೊಟ್ಟು, ‘ಇವನನ್ನು ಆರೈಕೆಮಾಡು, ಇದಕ್ಕಿಂತ ಹೆಚ್ಚಾಗಿ ಏನಾದರೂ ವೆಚ್ಚಮಾಡಿದರೆ ನಾನು ಹಿಂತಿರುಗಿ ಬಂದಾಗ ನಿನಗೆ ಕೊಡುವೆನು’ ಅಂದನು.

36ಈ ಮೂವರಲ್ಲಿ ಯಾವನು ಕಳ್ಳರ ಕೈಗೆ ಸಿಕ್ಕಿದವನಿಗೆ ನೆರೆಯವನಾದನೆಂದು ನಿನಗೆ ತೋರುತ್ತದೆ ಹೇಳು?” ಎಂದು ಕೇಳಿದ್ದಕ್ಕೆ,

37ಆ ಧರ್ಮೋಪದೇಶಕನು, “ಅವನಿಗೆ ದಯೆ ತೋರಿಸಿದವನೇ” ಅಂದನು. ಆಗ ಯೇಸು ಅವನಿಗೆ, “ಹೋಗು, ನೀನೂ ಅದರಂತೆ ಮಾಡು” ಎಂದು ಹೇಳಿದನು.

38ಅವರು ಸಂಚಾರಮಾಡುತ್ತಿರುವಾಗ ಆತನು ಒಂದು ಹಳ್ಳಿಗೆ ಬಂದನು. ಅಲ್ಲಿ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯಲ್ಲಿ ಉಳಿಸಿಕೊಂಡಳು.

39ಆಕೆಗೆ ಮರಿಯಳೆಂಬ ಒಬ್ಬ ತಂಗಿ ಇದ್ದಳು. ಈಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತುಕೊಂಡು ಆತನ ವಾಕ್ಯವನ್ನು ಕೇಳುತ್ತಿದ್ದಳು.

40ಆದರೆ ಮಾರ್ಥಳು ಉಪಚಾರ ಸೇವೆಯ ವಿಷಯವಾಗಿ ಬಹಳ ಬೇಸತ್ತು ಯೇಸುವಿನ ಬಳಿಗೆ ಬಂದು, “ಕರ್ತನೇ, ನನ್ನ ತಂಗಿಯು ಸೇವೆಗೆ ನನ್ನೊಬ್ಬಳನ್ನೇ ಬಿಟ್ಟಿದ್ದಾಳೆ, ಇದಕ್ಕೆ ನಿನಗೆ ಚಿಂತೆಯಿಲ್ಲವೋ? ನನಗೆ ನೆರವಾಗಬೇಕೆಂದು ಆಕೆಗೆ ಹೇಳು” ಅಂದಳು.

41ಆದರೆ, ಕರ್ತನು ಆಕೆಗೆ, “ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತೆಯಲ್ಲಿಯೂ ಗಡಿಬಿಡಿಯಲ್ಲಿಯೂ ಸಿಕ್ಕಿಕೊಂಡಿದ್ದೀ.

42ಆದರೆ ಅಗತ್ಯವಾದದ್ದು ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ, ಅದು ಆಕೆಯಿಂದ ತೆಗೆಯಲ್ಪಡುವುದಿಲ್ಲ” ಎಂದು ಉತ್ತರಕೊಟ್ಟನು.

ಲೂಕನು 10

ಇಂಗ್ಲಿಷ್‌ನಲ್ಲಿ

Berean Standard BibleLuke 10:38–42As they traveled along, Jesus entered a village where a woman named Martha welcomed Him into her home. She had a sister named Mary, who sat at the Lord’s feet listening to His message. But Martha was distracted by all the preparations to be made. She came to Jesus and said, “Lord, do You not care that my sister has left me to serve alone? Tell her to help me!” “Martha, Martha,” the Lord replied, “you are worried and upset about many things. But only one thing is necessary. Mary has chosen the good portion, and it will not be taken away from her.”

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಕೀರ್ತ 27:4ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ, ಆತನ ಪ್ರಸನ್ನತೆಯನ್ನು ನೋಡುವುದಕ್ಕೂ, ಆತನ ಮಂದಿರದಲ್ಲಿ ಧ್ಯಾನ ಮಾಡುವುದಕ್ಕೂ ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರು ನೋಡುತ್ತಿರುವೆನು.
ಕೀರ್ತ 16:5–6ನನ್ನ ಪಾಲೂ, ನನ್ನ ಪಾನವೂ ಯೆಹೋವನೇ, ನೀನೇ ನನ್ನ ಸ್ವತ್ತನ್ನು ಭದ್ರಗೊಳಿಸುತ್ತೀ. ನನಗೆ ಪ್ರಾಪ್ತವಾಗಿರುವ ಸ್ವತ್ತು ರಮಣೀಯವಾದದ್ದು; ಅದು ನನಗೆ ಸಂತೃಪ್ತಿಕರವಾಗಿದೆ.
ಯೋಹಾ 10:27–28ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ. ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದೇ ಇಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು.
ಫಿಲಿಪ್ಪಿ 4:6ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ಕರ್ತನಿಗೆ ತಿಳಿಯಪಡಿಸಿರಿ.
ಯೋಹಾ 4:14ಆದರೆ, ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವುದಿಲ್ಲ. ನಾನು ಅವನಿಗೆ ಕೊಡುವ ನೀರು ಅವನಲ್ಲಿ ಉಕ್ಕುವ ನೀರಿನ ಬುಗ್ಗೆಗಳಾಗಿದ್ದು ನಿತ್ಯ ಜೀವವನ್ನು ಉಂಟುಮಾಡುವುದು” ಎಂದು ಹೇಳಿದನು.
ಕೀರ್ತ 73:25ಪರಲೋಕದಲ್ಲಿ ನನಗೆ ನೀನಲ್ಲದೆ ಮತ್ತಾರು ಅವಶ್ಯ? ಇಹಲೋಕದಲ್ಲಿ ನಿನ್ನನ್ನಲ್ಲದೆ ಇನ್ನಾರನ್ನೂ ಬಯಸುವುದಿಲ್ಲ.
ಯೋಹಾ 5:24ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ.
ಮಾರ್ಕ 4:19ಇವರು ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಗಳೂ, ಐಶ್ವರ್ಯದಿಂದುಂಟಾಗುವ ವ್ಯಾಮೋಹವೂ, ಇತರ ವಿಷಯಗಳ ಮೇಲಣ ಆಸೆಗಳೂ ಸೇರಿ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ನಿಷ್ಫಲರಾಗಿರುತ್ತಾರೆ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು