Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಲೂಕನು 12:15

ಬೈಬಲ್ ವಚನ · IRV

ಲೂಕನು 12:15

ಜನರಿಗೆ, “ಎಲ್ಲಾ ದುರಾಶೆಗಳಿಂದಲು ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವುದಿಲ್ಲ” ಎಂದು ಹೇಳಿ, ಒಂದು ಸಾಮ್ಯವನ್ನು ಹೇಳಿದನು.

ಇಡೀ ಅಧ್ಯಾಯ ಓದಿ: ಲೂಕನು 12

ಸಂದರ್ಭದಲ್ಲಿ

12ಏಕೆಂದರೆ ನೀವು ಹೇಳತಕ್ಕದ್ದನ್ನು ಪವಿತ್ರಾತ್ಮನು ಆ ಗಳಿಗೆಯಲ್ಲಿಯೇ ನಿಮಗೆ ಕಲಿಸಿಕೊಡುವನು” ಅಂದನು.

13ಆಗ ಜನರಲ್ಲಿ ಒಬ್ಬನು, “ಬೋಧಕನೇ, ತಂದೆಯ ಆಸ್ತಿಯನ್ನು ನನಗೆ ಪಾಲುಮಾಡುವಂತೆ ನನ್ನ ಅಣ್ಣನಿಗೆ ಹೇಳು” ಎಂದು ಯೇಸುವನ್ನು ಕೇಳಿಕೊಳ್ಳಲು,

14ಅದಕ್ಕೆ ಯೇಸು, “ಮನುಷ್ಯನೇ, ನನ್ನನ್ನು ನಿಮಗೆ ನ್ಯಾಯಾಧಿಪತಿಯನ್ನಾಗಿ ಅಥವಾ ಪಾಲುಮಾಡುವವನನ್ನಾಗಿ ನೇಮಿಸಿದವರಾರು?” ಎಂದು ಅವನನ್ನು ಕೇಳಿ,

15ಜನರಿಗೆ, “ಎಲ್ಲಾ ದುರಾಶೆಗಳಿಂದಲು ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವುದಿಲ್ಲ” ಎಂದು ಹೇಳಿ, ಒಂದು ಸಾಮ್ಯವನ್ನು ಹೇಳಿದನು.

16ಅದೇನೆಂದರೆ “ಒಬ್ಬಾನೊಬ್ಬ ಐಶ್ವರ್ಯವಂತನ ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆ ಬೆಳೆಯಿತು.

17ಆಗ ಅವನು ತನ್ನೊಳಗೆ, ‘ನಾನೇನು ಮಾಡಲಿ? ನನ್ನ ಬೆಳೆಯನ್ನು ತುಂಬಿಡುವುದಕ್ಕೆ ನನಗೆ ಸ್ಥಳವಿಲ್ಲವಲ್ಲಾ?’ ಎಂದು ಆಲೋಚಿಸಿ,

18‘ಒಂದು ಕೆಲಸ ಮಾಡುತ್ತೇನೆ. ನನ್ನ ಕಣಜಗಳನ್ನು ಕೆಡವಿ ಅವುಗಳಿಗಿಂತ ದೊಡ್ಡ ಕಣಜಗಳನ್ನು ಕಟ್ಟಿಸುವೆನು. ಅಲ್ಲಿ ನನ್ನ ಎಲ್ಲಾ ದವಸಧಾನ್ಯಗಳನ್ನೂ ಸರಕುಗಳನ್ನು ತುಂಬಿಟ್ಟು,

ಲೂಕನು 12

ಇಂಗ್ಲಿಷ್‌ನಲ್ಲಿ

Berean Standard BibleLuke 12:15And He said to them, “Watch out! Guard yourselves against every form of greed, for one’s life does not consist in the abundance of his possessions.”

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಇಬ್ರಿ 13:5ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ.
1 ತಿಮೊ 6:6–10ಸಂತುಷ್ಟಿಸಹಿತವಾದ ಭಕ್ತಿಯು ದೊಡ್ಡ ಲಾಭವೇ ಸರಿ. ನಾವು ಲೋಕದೊಳಕ್ಕೆ ಏನೂ ತೆಗೆದುಕೊಂಡು ಬರಲಿಲ್ಲವಾದ್ದರಿಂದ, ಅದರೊಳಗಿಂದ ಏನೂ ತೆಗೆದುಕೊಂಡು ಹೋಗಲಾರೆವು. ನಮಗೆ ಅನ್ನ ವಸ್ತ್ರಗಳಿದ್ದರೆ ಸಾಕು, ನಾವು ಸಂತುಷ್ಟರಾಗುತ್ತವೆ. ಐಶ್ವರ್ಯವಂತರಾಗಬೇಕೆಂದು ಮನಸ್ಸುಮಾಡುವವರು ದುಷ್ಟ್ರೇರಣೆಯೆಂಬ ಬಲೆಯಲ್ಲಿ ಸಿಕ್ಕಿಕೊಂಡು, ಬುದ್ಧಿಗೆ ವಿರುದ್ಧವಾಗಿಯೂ ಹಾನಿಕರವಾಗಿಯೂ ಇರುವ ಅನೇಕ ಆಸೆಗಳಲ್ಲಿ ಬೀಳುತ್ತಾರೆ. ಇಂಥ ಆಸೆಗಳು ಮನುಷ್ಯರನ್ನು ಸಂಹಾರ ವಿನಾಶಗಳಲ್ಲಿ ಸಿಕ್ಕಿಸುತ್ತವೆ. ಹಣದಾಸೆಯು ಸಕಲವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು, ಅದರಿಂದ ಕ್ರಿಸ್ತ ನಂಬಿಕೆಯನ್ನು ಬಿಟ್ಟು, ಅಲೆದಾಡಿ ಅನೇಕ ವೇದನೆಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.
ಕೀರ್ತ 119:36–37ನನ್ನ ಮನಸ್ಸನ್ನು ದ್ರವ್ಯಾಶೆಗಲ್ಲ, ನಿನ್ನ ಕಟ್ಟಳೆಗಳ ಕಡೆಗೆ ತಿರುಗಿಸು. ವ್ಯರ್ಥಕಾರ್ಯಗಳಲ್ಲಿ ದೃಷ್ಟಿಯಿಡದಂತೆ ನನ್ನನ್ನು ಕಾಪಾಡು, ನಿನ್ನ ಮಾರ್ಗದಲ್ಲಿ ನಡೆಯುವಂತೆ ನನ್ನನ್ನು ಚೈತನ್ಯಗೊಳಿಸು.
ಜ್ಞಾನೋ 15:16ಕಳವಳದಿಂದ ಕೂಡಿದ ಬಹುಧನಕ್ಕಿಂತಲೂ ಯೆಹೋವನ ಭಯದಿಂದ ಕೂಡಿದ ಅಲ್ಪ ಧನವೇ ಲೇಸು.
ಜ್ಞಾನೋ 16:16ಬಂಗಾರಕ್ಕಿಂತಲೂ ಜ್ಞಾನವನ್ನು ಪಡೆಯುವುದು ಎಷ್ಟೋ ಮೇಲು, ಬೆಳ್ಳಿಗಿಂತಲೂ ವಿವೇಕವನ್ನು ಹೊಂದುವುದು ಲೇಸು.
ಮತ್ತಾ 6:25–26“ಈ ಕಾರಣದಿಂದ, ನಮ್ಮ ಜೀವನಕ್ಕೆ ಏನು ಊಟಮಾಡಬೇಕು, ಏನು ಕುಡಿಯಬೇಕು, ನಮ್ಮ ದೇಹರಕ್ಷಣೆಗಾಗಿ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದುದಲ್ಲವೇ. ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ; ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ತುಂಬಿಟ್ಟುಕೊಳ್ಳುವುದಿಲ್ಲ; ಆದಾಗ್ಯೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಸಾಕಿ ಸಲಹುತ್ತಾನೆ; ಅವುಗಳಿಗಿಂತ ನೀವು ಹೆಚ್ಚಿನವರಲ್ಲವೋ?
ಲೂಕ 16:14ಫರಿಸಾಯರು ಹಣದಾಸೆಯುಳ್ಳವರಾಗಿದ್ದರಿಂದ ಈ ಮಾತುಗಳನ್ನೆಲ್ಲಾ ಕೇಳಿ ಆತನನ್ನು ಹಾಸ್ಯ ಮಾಡಿದರು.
2 ತಿಮೊ 3:2ಮನುಷ್ಯರು ಸ್ವಾರ್ಥಚಿಂತಕರೂ, ಹಣದಾಸೆಯವರೂ, ಬಡಾಯಿಕೊಚ್ಚುವವರೂ, ಅಹಂಕಾರಿಗಳೂ, ದೂಷಕರೂ, ತಂದೆತಾಯಿಗಳಿಗೆ ಅವಿಧೇಯರೂ, ಉಪಕಾರ ನೆನಸದವರೂ, ದೇವಭಯವಿಲ್ಲದವರೂ,

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು