ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಲೂಕನು 12:33–34
ಬೈಬಲ್ ವಚನ · IRV
ಲೂಕನು 12:33–34
33ನಿಮಗಿರುವುದನ್ನು ಮಾರಿಬಿಟ್ಟು ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ. ಪರಲೋಕದಲ್ಲಿ ಲಯವಾಗದ ಸಂಪತ್ತನ್ನು ಇಟ್ಟುಕೊಳ್ಳಿರಿ. ಅದನ್ನು ಕದಿಯುವುದಕ್ಕೆ ಕಳ್ಳನು ಸಮೀಪಕ್ಕೆ ಬರಲಾರನು. ಅವು ನುಸಿ ಹಿಡಿದು ನಾಶವಾಗುವುದಿಲ್ಲ.
34ನಿಮ್ಮ ಗಂಟು ಇದ್ದಲ್ಲಿಯೇ ನಿಮ್ಮ ಮನಸ್ಸು ಇರುತ್ತದಷ್ಟೆ.
ಸಂದರ್ಭದಲ್ಲಿ
30ಇವೆಲ್ಲವುಗಳ ಕುರಿತು ಇಹಲೋಕದ ಜನಗಳು ಅಲೆದಾಡುತ್ತಾರೆ. ಇವು ನಿಮಗೆ ಅವಶ್ಯವೆಂದು ನಿಮ್ಮ ತಂದೆಗೆ ತಿಳಿದಿದೆ.
31ನೀವಾದರೋ ದೇವರ ರಾಜ್ಯಕ್ಕಾಗಿ ತವಕಪಡಿರಿ. ಇದರ ಕೂಡ ಅವೂ ನಿಮಗೆ ದೊರಕುವವು.
32ಚಿಕ್ಕ ಹಿಂಡೇ, ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವುದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.
33ನಿಮಗಿರುವುದನ್ನು ಮಾರಿಬಿಟ್ಟು ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ. ಪರಲೋಕದಲ್ಲಿ ಲಯವಾಗದ ಸಂಪತ್ತನ್ನು ಇಟ್ಟುಕೊಳ್ಳಿರಿ. ಅದನ್ನು ಕದಿಯುವುದಕ್ಕೆ ಕಳ್ಳನು ಸಮೀಪಕ್ಕೆ ಬರಲಾರನು. ಅವು ನುಸಿ ಹಿಡಿದು ನಾಶವಾಗುವುದಿಲ್ಲ.
34ನಿಮ್ಮ ಗಂಟು ಇದ್ದಲ್ಲಿಯೇ ನಿಮ್ಮ ಮನಸ್ಸು ಇರುತ್ತದಷ್ಟೆ.
35“ನಿಮ್ಮ ನಡುಗಳು ಕಟ್ಟಿರಲಿ. ನಿಮ್ಮ ದೀಪಗಳು ಆರದಂತೆ ಉರಿಯುತ್ತಾ ಇರಲಿ.
36ನೀವಂತೂ ತಮ್ಮ ಯಜಮಾನನು ಯಾವಾಗ ಮದುವೆ ಔತಣ ಮುಗಿಸಿಕೊಂಡು ಹಿಂತಿರುಗುವನೋ ಎಂದು ಕಾಯುವಂಥ ಮತ್ತು ಆತನು ತಟ್ಟಿದ ಕೂಡಲೆ ಬಾಗಿಲನ್ನು ತೆರೆಯಲು ಸಿದ್ಧರಾಗಿರುವಂಥ ಆಳುಗಳಂತೆ ಇರಿ.
37ಯಜಮಾನನು ಬಂದು ಯಾವ ಆಳು ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುವನೋ ಆ ಆಳುಗಳೇ ಧನ್ಯರು. ಏಕೆಂದರೆ, ಯಜಮಾನನೇ ನಡುಕಟ್ಟಿಕೊಂಡು ಆ ಆಳುಗಳನ್ನು ಊಟಕ್ಕೆ ಕುಳ್ಳಿರಿಸಿ, ಹತ್ತಿರಕ್ಕೆ ಬಂದು ಅವರಿಗೆ ಊಟವನ್ನು ಬಡಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
ಇಂಗ್ಲಿಷ್ನಲ್ಲಿ
Sell your possessions and give to the poor. Provide yourselves with purses that will not wear out, an inexhaustible treasure in heaven, where no thief approaches and no moth destroys. For where your treasure is, there your heart will be also.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ಯೇಸು ಅವನಿಗೆ, “ನೀನು ಪೂರ್ಣನಾಗುವುದಕ್ಕೆ ಬಯಸುವುದಾದರೆ, ಹೋಗಿ ನಿನಗಿರುವುದನ್ನೆಲ್ಲಾ ಮಾರಿ, ಬಡವರಿಗೆ ಕೊಡು, ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.ನಿನ್ನ ಸಂಪತ್ತು ಇದ್ದಲ್ಲಿಯೇ ನಿನ್ನ ಮನಸ್ಸು ಇರುತ್ತದಷ್ಟೆ.ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟಿರುವುದಾದರೆ ಮೇಲಿನವುಗಳನ್ನೇ ಹುಡುಕಿರಿ, ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ. ಭೂಲೋಕದಲ್ಲಿರುವಂಥವುಗಳ ಬಗ್ಗೆ ಅಲ್ಲ, ಪರಲೋಕದಲ್ಲಿರುವಂಥವುಗಳ ಬಗ್ಗೆ ಯೋಚಿಸಿರಿ. ಯಾಕೆಂದರೆ ನೀವು ಸತ್ತು ಮತ್ತು ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿದೆ.ತಮ್ಮತಮ್ಮ ಚರಸ್ಥಿರಸೊತ್ತುಗಳನ್ನು ಮಾರಿ ಬಂದ ಹಣವನ್ನು ಎಲ್ಲರಿಗೂ ಅವರವರಿಗೆ ಅಗತ್ಯವಿದ್ದ ಹಾಗೆ ಹಂಚಿಕೊಳ್ಳುತ್ತಾ ಇದ್ದರು.ಅವರಲ್ಲಿ ಕೊರತೆಪಡುತ್ತಿದ್ದವನೂ ಒಬ್ಬನೂ ಇರಲಿಲ್ಲ, ಏಕೆಂದರೆ ಹೊಲಮನೆಗಳಿದ್ದವರು ಅವುಗಳನ್ನು ಮಾರಿ ಬಂದ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಡುತ್ತಿದ್ದರು; ಅದನ್ನು ಪ್ರತಿಯೊಬ್ಬನಿಗೆ ಅವನವನ ಅವಶ್ಯಕತೆಗೆ ತಕ್ಕಂತೆ ಹಂಚಿ ಕೊಡುತ್ತಿದ್ದರು.ಯೇಸು ಅದನ್ನು ಕೇಳಿ ಅವನಿಗೆ, “ಇನ್ನೂ ನಿನಗೆ ಒಂದು ಕೊರತೆಯಿದೆ. ನಿನಗಿರುವುದನ್ನೆಲ್ಲಾ ಮಾರಿ ಬಡವರಿಗೆ ಹಂಚಿಕೊಡು, ಪರಲೋಕದಲ್ಲಿ ನಿನಗೆ ಸಂಪತ್ತುಂಟಾಗುವುದು. ತರುವಾಯ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.ನಾವಾದರೋ ಪರಲೋಕದ ಪ್ರಜೆಗಳು, ಕರ್ತನಾದ ಯೇಸು ಕ್ರಿಸ್ತನು ಅಲ್ಲಿಂದಲೇ ರಕ್ಷಕನಾಗಿ ಬರುವುದನ್ನು ಎದುರುನೋಡುತ್ತಾ ಇದ್ದೇವೆ.“ಭೂಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಬೇಡಿರಿ; ಇಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದು; ಇಲ್ಲಿ ಕಳ್ಳರು ಕನ್ನಾಕೊರೆದು ಕದಿಯುವರು. ಆದರೆ ಪರಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಿರಿ; ಅಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದಿಲ್ಲ; ಅಲ್ಲಿ ಕಳ್ಳರು ಕನ್ನಾಕೊರೆಯುವುದೂ ಇಲ್ಲ. ಕದಿಯುವುದೂ ಇಲ್ಲ, ನಿನ್ನ ಸಂಪತ್ತು ಇದ್ದಲ್ಲಿಯೇ ನಿನ್ನ ಮನಸ್ಸು ಇರುತ್ತದಷ್ಟೆ.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು