Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಲೂಕನು 14:28

ಬೈಬಲ್ ವಚನ · IRV

ಲೂಕನು 14:28

ನಿಮ್ಮಲ್ಲಿ ಯಾವನಾದರೂ ಒಂದು ಗೋಪುರವನ್ನು ಕಟ್ಟಿಸಬೇಕೆಂದು ಯೋಚಿಸಿದರೆ ಅವನು ಮೊದಲು ಕುಳಿತುಕೊಂಡು, ಅದಕ್ಕೆ ಎಷ್ಟು ಖರ್ಚು ಆದೀತು, ಅದನ್ನು ತೀರಿಸುವುದಕ್ಕೆ ಸಾಕಾಗುವಷ್ಟು ಹಣ ನನ್ನಲ್ಲಿ ಇದೆಯೋ ಎಂದು ಲೆಕ್ಕಮಾಡುವುದಿಲ್ಲವೇ?

ಇಡೀ ಅಧ್ಯಾಯ ಓದಿ: ಲೂಕನು 14

ಸಂದರ್ಭದಲ್ಲಿ

25ಬಹು ಜನರು ಗುಂಪುಗುಂಪಾಗಿ ಯೇಸುವಿನ ಸಂಗಡ ಹೋಗುತ್ತಾ ಇರಲು ಆತನು ತಿರುಗಿಕೊಂಡು ಅವರಿಗೆ ಹೇಳಿದ್ದೇನಂದರೆ,

26“ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆತಾಯಿ, ಹೆಂಡತಿ, ಮಕ್ಕಳು, ಅಣ್ಣತಮ್ಮಂದಿರು, ಅಕ್ಕತಂಗಿಯರು ಇವರನ್ನೂ ತನ್ನ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.

27ಯಾವನಾದರೂ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಬರದ ಹೊರತು ಅವನು ನನ್ನ ಶಿಷ್ಯನಾಗಿರಲಾರನು.

28ನಿಮ್ಮಲ್ಲಿ ಯಾವನಾದರೂ ಒಂದು ಗೋಪುರವನ್ನು ಕಟ್ಟಿಸಬೇಕೆಂದು ಯೋಚಿಸಿದರೆ ಅವನು ಮೊದಲು ಕುಳಿತುಕೊಂಡು, ಅದಕ್ಕೆ ಎಷ್ಟು ಖರ್ಚು ಆದೀತು, ಅದನ್ನು ತೀರಿಸುವುದಕ್ಕೆ ಸಾಕಾಗುವಷ್ಟು ಹಣ ನನ್ನಲ್ಲಿ ಇದೆಯೋ ಎಂದು ಲೆಕ್ಕಮಾಡುವುದಿಲ್ಲವೇ?

29ಹೀಗೆ ಲೆಕ್ಕಮಾಡದೆ ಅದಕ್ಕೆ ಅಸ್ತಿವಾರ ಹಾಕಿದ ಮೇಲೆ ಆ ಕೆಲಸವನ್ನು ಪೂರೈಸಲಾರದೆ ಹೋದರೆ ನೋಡುವವರೆಲ್ಲರು,

30‘ಈ ಮನುಷ್ಯನು ಕಟ್ಟಿಸುವುದಕ್ಕಂತೂ ತೊಡಗಿದನು, ಕೆಲಸಪೂರೈಸಲಾರದೆ ಹೋದನು’ ಎಂದು ಅವನನ್ನು ಹಾಸ್ಯಮಾಡಾರು.

31ಇಲ್ಲವೆ ಯಾವ ಅರಸನಾದರೂ ಮತ್ತೊಬ್ಬ ಅರಸನ ಸಂಗಡ ಯುದ್ಧಮಾಡುವುದಕ್ಕೆ ಹೋಗುವಾಗ ತನ್ನ ಮೇಲೆ ಇಪ್ಪತ್ತು ಸಾವಿರ ದಂಡು ತೆಗೆದುಕೊಂಡು ಬರುವವನನ್ನು ತಾನು ಹತ್ತು ಸಾವಿರ ದಂಡಿನಿಂದ ಎದುರಿಸುವುದಕ್ಕೆ ಶಕ್ತನಾಗುವೆನೋ ಇಲ್ಲವೋ ಎಂದು ಕುಳಿತುಕೊಂಡು ಆಲೋಚಿಸುವುದಿಲ್ಲವೇ?

ಲೂಕನು 14

ಇಂಗ್ಲಿಷ್‌ನಲ್ಲಿ

Berean Standard BibleLuke 14:28Which of you, wishing to build a tower, does not first sit down and count the cost to see if he has the resources to complete it?

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಜ್ಞಾನೋ 24:27ನಿನ್ನ ಕೆಲಸದ ಸಾಮಾನುಗಳನ್ನು ಸಿದ್ಧಮಾಡು, ನಂತರ ಹೊಲಗದ್ದೆಗಳ ಕೆಲಸವನ್ನು ಮುಗಿಸು, ಆಮೇಲೆ ನಿನ್ನ ಮನೆಯನ್ನು ಕಟ್ಟು.
ಮತ್ತಾ 10:22ಮತ್ತು ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕಡೆಯವರೆಗೂ ತಾಳಿಕೊಳ್ಳುವವನು ರಕ್ಷಣೆಹೊಂದುವನು.
ಯೆಹೋ 24:19–24ಆಗ ಯೆಹೋಶುವನು ಅವರಿಗೆ, “ನೀವು ಯೆಹೋವನನ್ನು ಸೇವಿಸಲು ಶಕ್ತರಲ್ಲ. ಯೆಹೋವನು ಪರಿಶುದ್ಧನು; ತನಗೆ ಸಲ್ಲಿಸಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ದೇವರು; ಆತನು ನಿಮ್ಮ ಪಾಪ, ಅಪರಾಧಗಳನ್ನೂ, ಕ್ಷಮಿಸುವುದಿಲ್ಲ. ನೀವು ಆತನನ್ನು ಬಿಟ್ಟು, ಅನ್ಯದೇವತೆಗಳನ್ನು ಸೇವಿಸಿದರೆ ಆತನು ನಿಮಗೆ ವಿಮುಖನಾಗಿ ಮೇಲಿಗೆ ಬದಲಾಗಿ ಕೇಡನ್ನು ಬರಮಾಡಿ ನಿಮ್ಮನ್ನು ನಾಶಮಾಡಿ ಬಿಡುವನು” ಎಂದನು. ಜನರು ಯೆಹೋಶುವನಿಗೆ, “ಇಲ್ಲ, ನಾವು ಯೆಹೋವನನ್ನೇ ಸೇವಿಸುವೆವು” ಎಂದರು. ಯೆಹೋಶುವನು ಅವರಿಗೆ, “ನೀವು ಯೆಹೋವನ ಸೇವೆಯನ್ನು ಆರಿಸಿಕೊಂಡಿರುವುದಕ್ಕೆ ನೀವೇ ಸಾಕ್ಷಿಗಳು ಅನ್ನಲು ಅವರು ಹೌದು ನಾವೇ ಸಾಕ್ಷಿಗಳು” ಎಂದರು ಆಗ ಯೆಹೋಶುವನು ಅವರಿಗೆ, “ಹಾಗಾದರೆ ನಿಮ್ಮಲ್ಲಿರುವ ಅನ್ಯದೇವತೆಗಳನ್ನು ತೆಗೆದುಹಾಕಿ ಇಸ್ರಾಯೇಲಿನ ದೇವರಾದ ಯೆಹೋವನ ಕಡೆಗೆ ಮನಸ್ಸನ್ನು ತಿರುಗಿಸಿಕೊಳ್ಳಿರಿ” ಎಂದನು. ಅದಕ್ಕೆ ಜನರು, “ನಮ್ಮ ದೇವರಾದ ಯೆಹೋವನನ್ನೇ ಸೇವಿಸುತ್ತೇವೆ. ಆತನ ಮಾತನ್ನೇ ಕೇಳುತ್ತೇವೆ” ಎಂದರು.
ಲೂಕ 14:33ಹಾಗೆಯೇ ನಿಮ್ಮಲ್ಲಿ ಯಾವನೇ ಆಗಲಿ ತನಗಿರುವುದನ್ನೆಲ್ಲಾ ಬಿಟ್ಟುಬಿಡದೆ ಹೋದರೆ ಅವನು ನನ್ನ ಶಿಷ್ಯನಾಗಿರಲಾರನು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು