ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಲೂಕನು 6:38
ಬೈಬಲ್ ವಚನ · IRV
ಲೂಕನು 6:38
ಕೊಡಿರಿ, ಆಗ ನಿಮಗೂ ಕೊಡಲ್ಪಡುವುದು; ಅದುಮಿ, ಅಲ್ಲಾಡಿಸಿ, ತುಂಬಿತುಳುಕುವಂತೆ, ಅಳೆದು ನಿಮ್ಮ ಸೆರಿಗಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡುವರು” ಅಂದನು.
ಸಂದರ್ಭದಲ್ಲಿ
35ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಏನನ್ನೂ ನಿರೀಕ್ಷಿಸದೆ ಸಾಲಕೊಡಿರಿ. ಹೀಗೇ ಮಾಡಿದರೆ, ನಿಮಗೆ ಬಹಳ ಫಲಸಿಕ್ಕುವುದು ಮತ್ತು ನೀವು ಪರಾತ್ಪರನಾದ ದೇವರ ಮಕ್ಕಳಾಗುವಿರಿ. ದೇವರು ಉಪಕಾರನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ.
36ನಿಮ್ಮ ತಂದೆಯು ಕರುಣೆಯುಳ್ಳವನಾಗಿರುವ ಪ್ರಕಾರವೇ ನೀವೂ ಕರುಣೆಯುಳ್ಳವರಾಗಿರಿ.
37“ಇದಲ್ಲದೆ ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ; ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ; ಕ್ಷಮಿಸಿರಿ, ಆಗ ನಿಮಗೂ ಕ್ಷಮಿಸಲ್ಪಡುವುದು.
38ಕೊಡಿರಿ, ಆಗ ನಿಮಗೂ ಕೊಡಲ್ಪಡುವುದು; ಅದುಮಿ, ಅಲ್ಲಾಡಿಸಿ, ತುಂಬಿತುಳುಕುವಂತೆ, ಅಳೆದು ನಿಮ್ಮ ಸೆರಿಗಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡುವರು” ಅಂದನು.
39ಇದಲ್ಲದೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು. ಅದೇನೆಂದರೆ, “ಕುರುಡನು ಕುರುಡನಿಗೆ ದಾರಿ ತೋರಿಸುವುದಕ್ಕಾದೀತೇ? ಅವರಿಬ್ಬರೂ ಹಳ್ಳದಲ್ಲಿ ಬೀಳುವರಲ್ಲವೆ.
40ಗುರುವಿಗಿಂತ ಶಿಷ್ಯನು ದೊಡ್ಡವನಲ್ಲ; ಆದರೆ ಪೂರ್ಣವಾಗಿ ಕಲಿತವನಾದ ಪ್ರತಿಯೊಬ್ಬನು ತನ್ನ ಗುರುವಿನಂತಾಗಿರುವನು.
41“ಇದಲ್ಲದೆ ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ಗಮನಿಸುವುದೇಕೆ?
ಇಂಗ್ಲಿಷ್ನಲ್ಲಿ
Give, and it will be given to you. A good measure, pressed down, shaken together, and running over will be poured into your lap. For with the measure you use, it will be measured back to you.”ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ಆದರೆ ಮಿತವಾಗಿ ಬಿತ್ತುವವನು ಮಿತವಾಗಿ ಕೊಯ್ಯುವನು. ಹೇರಳವಾಗಿ ಬಿತ್ತುವವನು ಹೇರಳವಾಗಿ ಕೊಯ್ಯುತ್ತಾನೆ. ಇದು ನಿಮಗೆ ತಿಳಿದಿರಲಿ. ಪ್ರತಿಯೊಬ್ಬನೂ ತನ್ನ ತನ್ನ ಹೃದಯದಲ್ಲಿ ನಿರ್ಣಯಿಸಿಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲವಂತದಿಂದಾಗಲಿ ಯಾರೂ ಕೊಡಬಾರದು; ಯಾಕೆಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿಸುವನು. ದೇವರು ಸಕಲ ವಿಧವಾದ ದಾನಗಳನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವುದಕ್ಕೆ ಶಕ್ತನಾದ್ದರಿಂದ, ನೀವೂ ಯಾವಾಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆಯುಳ್ಳವರಾಗಿ ಸಕಲ ಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರಬೇಕು.ನೀವು ಕೊಡುವಾಗ ಬೇಸರಗೊಳ್ಳದೆ ಉದಾರವಾದ ಮನಸ್ಸಿನಿಂದಲೇ ಕೊಡಬೇಕು. ಇದರಿಂದ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ಮತ್ತು ಪ್ರಯತ್ನಗಳಲ್ಲಿಯೂ ನಿಮ್ಮನ್ನು ಅಭಿವೃದ್ಧಿಪಡಿಸುವನು.ಮತ್ತು ಆತನು ಅವರಿಗೆ; “ನೀವು ಕಿವಿಗೊಡುವ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನೀವು ಅಳೆಯುವ ಅಳತೆಯಿಂದಲೇ ನಿಮ್ಮನ್ನೂ ಅಳೆಯುವರು; ನಿಮಗೆ ಇನ್ನೂ ಅಧಿಕವಾಗಿ ಸೇರಿಸಿಕೊಡುವರು.ನಿನ್ನ ಆದಾಯದಿಂದಲೂ, ಬೆಳೆಯ ಪ್ರಥಮಫಲದಿಂದಲೂ ಯೆಹೋವನನ್ನು ಸನ್ಮಾನಿಸು. ಹೀಗೆ ಮಾಡಿದರೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬುವವು, ತೊಟ್ಟಿಗಳಲ್ಲಿ ದ್ರಾಕ್ಷಾರಸವು ತುಂಬಿ ತುಳುಕುವುದು.ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವುದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು.ದಯಾದೃಷ್ಟಿಯವನು ಆಶೀರ್ವಾದವನ್ನು ಪಡೆಯುವನು, ತನ್ನ ಆಹಾರವನ್ನು ಬಡವರಿಗೆ ಕೊಡುತ್ತಾನಲ್ಲವೆ.ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು, ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.ಯೆಹೋವನ ಆಶೀರ್ವಾದವು ಭಾಗ್ಯದಾಯಕವು, ಅದು ವ್ಯಸನವನ್ನು ಸೇರಿಸದು.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು