ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಮಾರ್ಕನು 11:24
ಬೈಬಲ್ ವಚನ · IRV
ಮಾರ್ಕನು 11:24
ಆದಕಾರಣ ನೀವು ಪ್ರಾರ್ಥನೆಮಾಡಿ ಏನೇನು ಬೇಡಿಕೊಳ್ಳುತ್ತೀರೋ ಅದನ್ನೆಲ್ಲಾ ಹೊಂದಿದ್ದೇವೆಂದು ನಂಬಿರಿ; ಅದು ನಿಮಗೆ ಸಿಕ್ಕುವುದೆಂದು ನಿಮಗೆ ಹೇಳುತ್ತೇನೆ.
ಸಂದರ್ಭದಲ್ಲಿ
21ಆಗ ಪೇತ್ರನು ಹಿಂದಿನ ದಿನದ ಸಂಗತಿಯನ್ನು ನೆನಪಿಸಿಕೊಂಡು ಆತನಿಗೆ, “ಗುರುವೇ, ಇಗೋ, ನೀನು ಶಾಪ ಕೊಟ್ಟ ಅಂಜೂರದ ಮರವು ಒಣಗಿಹೋಗಿದೆ” ಎಂದು ಹೇಳಿದ್ದಕ್ಕೆ
22ಯೇಸು ಹೇಳಿದ್ದೇನಂದರೆ, “ನಿಮಗೆ ದೇವರಲ್ಲಿ ನಂಬಿಕೆಯಿರಲಿ.
23ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರಾದರೂ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!’ ಎಂದು ಹೇಳಿ ತನ್ನ ಮನಸ್ಸಿನಲ್ಲಿ ಸಂಶಯಪಡದೆ ತಾನು ಹೇಳಿದ್ದು ಆಗುವುದೆಂದು ನಂಬಿದರೆ ಅವನು ಹೇಳಿದಂತೆಯೇ ಆಗುವುದು.
24ಆದಕಾರಣ ನೀವು ಪ್ರಾರ್ಥನೆಮಾಡಿ ಏನೇನು ಬೇಡಿಕೊಳ್ಳುತ್ತೀರೋ ಅದನ್ನೆಲ್ಲಾ ಹೊಂದಿದ್ದೇವೆಂದು ನಂಬಿರಿ; ಅದು ನಿಮಗೆ ಸಿಕ್ಕುವುದೆಂದು ನಿಮಗೆ ಹೇಳುತ್ತೇನೆ.
25ಇದಲ್ಲದೆ ನೀವು ನಿಂತುಕೊಂಡು ಪ್ರಾರ್ಥಿಸುವಾಗ ಯಾರ ಮೇಲೆ ಏನಾದರೂ ವಿರೋಧವಿದ್ದರೆ ಅದನ್ನು ಕ್ಷಮಿಸಿರಿ; ಆಗ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವನು” ಅಂದನು.
26ಆದರೆ ನೀವು ಕ್ಷಮಿಸದಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವುದಿಲ್ಲ.
27ಅವರು ಪುನಃ ಯೆರೂಸಲೇಮಿಗೆ ಬಂದಾಗ ಯೇಸು ದೇವಾಲಯದ ಆವರಣದಲ್ಲಿ ನಡೆದಾಡುತ್ತಿರಲಾಗಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಹಿರಿಯರೂ ಆತನ ಬಳಿಗೆ ಬಂದು,
ಇಂಗ್ಲಿಷ್ನಲ್ಲಿ
Therefore I tell you, whatever you ask for in prayer, believe that you have received it, and it will be yours.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ನೀವು ನಂಬಿಕೊಂಡು ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನೆಲ್ಲಾ ಹೊಂದುವಿರಿ” ಅಂದನು.ಮತ್ತು ದೇವರ ಚಿತ್ತಾನುಸಾರವಾಗಿ ಏನಾದರೂ ಬೇಡಿಕೊಂಡರೆ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬ ಭರವಸೆಯು ಆತನಲ್ಲಿ ನಮಗುಂಟು. ನಾವು ಏನು ಬೇಡಿಕೊಂಡರೂ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬುದು ನಮಗೆ ತಿಳಿದಿದ್ದರೆ, ನಾವು ಬೇಡಿದವುಗಳು ಆತನಿಂದ ನಮಗೆ ದೊರೆಯುತ್ತವೆಂಬುದು ನಮಗೆ ತಿಳಿಯುತ್ತದೆ.ಆತನ ಆಜ್ಞೆಗಳನ್ನು ಕೈಕೊಂಡು ಆತನಿಗೆ ಮೆಚ್ಚಿಕೆಯಾಗುವ ಕಾರ್ಯಗಳನ್ನು ಮಾಡುವವರಾದರೆ ನಾವು ಏನು ಬೇಡಿಕೊಂಡರೂ ಆತನಿಂದ ಹೊಂದುವೆವು.ನಿಮ್ಮಲ್ಲಿ ಯಾರಿಗಾದರು ಜ್ಞಾನದ ಕೊರತೆಯಿರುವುದಾದರೆ ಅವರು ದೇವರನ್ನು ಬೇಡಿಕೊಳ್ಳಲಿ, ಅದು ಅವರಿಗೆ ದೊರಕುವುದು. ಯಾಕೆಂದರೆ ದೇವರು ಹಂಗಿಸದೆ ಎಲ್ಲರಿಗೂ ಉದಾರವಾಗಿ ಕೊಡುವಾತನಾಗಿದ್ದಾನೆ. ಆದರೆ ದೇವರ ಬಳಿ ಬೇಡುವವನು ಸ್ವಲ್ಪವೂ ಸಂದೇಹಪಡದೆ ನಂಬಿಕೆಯಿಂದ ಬೇಡಿಕೊಳ್ಳಲಿ. ಸಂದೇಹಪಡುವವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ಅಲೆಯಂತೆ ಅತ್ತಿತ್ತ ಅಲೆಯುತ್ತಿರುತ್ತಾನೆ.ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನಾದರೂ ಬೇಡಿಕೊಳ್ಳಿರಿ ಅದು ನಿಮಗೆ ದೊರೆಯುವುದು.ಇದಲ್ಲದೆ ನಿಮ್ಮಲ್ಲಿ ಇಬ್ಬರು ಬೇಡಿಕೊಳ್ಳತಕ್ಕ ಯಾವುದಾದರು ಒಂದು ವಿಷಯವಾಗಿ ಭೂಲೋಕದಲ್ಲಿ ಒಂದೇ ಮನಸ್ಸುಳ್ಳವರಾಗಿದ್ದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವುದೆಂದು ನಿಮಗೆ ಹೇಳುತ್ತೇನೆ.ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ನೆರವೇರಿಸುವೆನು. ಹೀಗೆ ಮಗನ ಮೂಲಕವಾಗಿ ತಂದೆಗೆ ಮಹಿಮೆ ಉಂಟಾಗುವುದು.“ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು; ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನೂ ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯಲ್ಪಡುವುದು. “ನಿಮ್ಮಲ್ಲಿ ಯಾವನು ರೊಟ್ಟಿ ಕೇಳುವ ಮಗನಿಗೆ ಕಲ್ಲನ್ನು ಕೊಡುವನೋ? ಮೀನು ಕೇಳಿದರೆ ಹಾವನ್ನು ಕೊಡುವನೋ? ಹಾಗಾದರೆ ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಉಡುಗೊರೆಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯ ವರಗಳನ್ನು ಕೊಡುವನಲ್ಲವೇ?ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು